ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಚುನಾವಣೆ: ಬಿಜೆಪಿಯಿಂದ 3 ರಾಜ್ಯಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

|
Google Oneindia Kannada News

ಇಂಧೋರ್, ನವೆಂಬರ್ 02: ಕುತೂಹಲ ಕೆರಳಿಸಿರುವ ಐದು ರಾಜ್ಯಗಳ ಚುನಾವಣೆಗೆ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದು, ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ 177 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಅಂತೆಯೇ ಮಿಜೋರಾಂನಲ್ಲಿ 24 ಮತ್ತು ತೆಲಂಗಾಣದಲ್ಲಿ 28 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

BJP releases list of candidates for Madhya Pradesh, Telangana, Mizoram polls

ಮಧ್ಯಪ್ರದೇಶ ಮತ್ತು ಮಿಜೋರಾಂನಲ್ಲಿ ನ.28 ರಂದು ಮತದಾನ ನಡೆಯಲಿದ್ದು, ಎರಡೂ ರಾಜ್ಯಗಳಲ್ಲೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಕ್ಷೇತ್ರಗಳಿದ್ದರೆ, ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಿವೆ.

ತೆಲಂಗಾಣದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, 119 ವಿಧಾನಸಭಾ ಕ್ಷೇತ್ರಗಳಿವೆ.
ಇದರೊಟ್ಟಿಗೆ ರಾಜಸ್ಥಾನದ 200 ಕ್ಷೇತ್ರಗಳು ಮತ್ತು ಛತ್ತೀಸ್ ಗಢದ 90 ಕ್ಷೇತ್ರಗಳಲ್ಲೂ ಚುನಾವಣೆ ನಡೆಯಲಿದ್ದು, ಎಲ್ಲಾ ರಾಜ್ಯಗಳ ಚುನಾವಣಾ ಫಲಿತಾಂಶ ಡಿ.11 ರಂದು ಹೊರಬೀಳಲಿದೆ.

English summary
BJP releases first list of 177 candidates for Madhya Pradesh elections. It also released a list of 24 candidates for Mizoram and 28 candidates for Telangana assembly elections
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X