ಹಿಮಾಚಲ ಪ್ರದೇಶ: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ, ಅಕ್ಟೋಬರ್ 22: ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿ 40 ಬಿಜೆಪಿ ನಾಯಕರು ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

BJP releases list of star campaigners for Himachal Pradesh polls

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೋವಾ ಸಿಎಂ ಮನೋಹರ್ ಪರಿಕ್ಕರ್, ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಕೇಂದ್ರ ಸಚಿವರುಗಳು ತಾರಾ ಪ್ರಚಾರಕರಲ್ಲಿ ಸ್ಥಾನ ಪಡೆದಿದ್ದಾರೆ.

ಆದರೆ ಹಿರಿಯ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಯಶವಂತ್ ಸಿನ್ಹಾ ಹೆಸರು ತಾರಾ ಪ್ರಚಾರಕರ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನ ಸಭೆಗೆ ನವೆಂಬರ್ 9ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 18ರಂದು ಮತಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+