ನಾಳೆ ಮಣಿಪುರ ಮುಖ್ಯಮಂತ್ರಿಯಾಗಿ ಬೈರೆನ್ ಸಿಂಗ್ ಪ್ರಮಾಣ ವಚನ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಮಾರ್ಚ್ 3: ನಾಳೆ ಬಿಜೆಪಿ ಪಾಲಿಗೆ ಐತಿಹಾಸಿಕ ದಿನ. ಈಶಾನ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದೆ. ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬೈರೆನ್ ಸಿಂಗ್ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬೈರೆನ್ ಸಿಂಗ್ ರನ್ನು ಸರಕಾರ ರಚಿಸುವಂತೆ ರಾಜ್ಯಪಾಲೆ ನಜ್ಮಾ ಹೆಪ್ತುಲ್ಲಾ ಆಹ್ವಾನಿಸಿದ್ದಾರೆ. ಈ ಹಿನ್ನಲೆಯಲ್ಲಿ ಬುಧವಾರ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇವರ ಜತೆಗೆ ಹಲವು ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.[ಈಶಾನ್ಯ ಭಾರತದ ಹೆಬ್ಬಾಗಿಲು ಮಣಿಪುರದ ಸಿಎಂ ಗದ್ದುಗೆ ಯಾರಿಗೆ?]

BJP's first government in Manipur: Swearing in tomorrow

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.[ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬೈರೆನ್ ಸಿಂಗ್]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The new Manipur Government will be sworn in on Wednesday. The new government under the Chief Ministership of Biren Singh will take oath on Wednesday.
Please Wait while comments are loading...