ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಜನಪ್ರಿಯತೆ ಭಾರೀ ಕುಸಿತ: ಸುಬ್ರಮಣಿಯನ್ ಸ್ವಾಮಿ ಟ್ವೀಟ್‌ನಲ್ಲಿ ಮಹತ್ವದ ಅಂಕಿಅಂಶ- ಏನಿದೆ ತಿಳಿಯಿರಿ
ಬೆಂಗಳೂರು, ಮೇ 30: ಕಳೆದ ಆರು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಎರಡು ರಾಜ್ಯಗಳನ್ನು ಕಳೆದುಕೊಂಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗವನ್ನು ಅನುಭವಿಸಿದೆ. ಇದಾದ ಬಳಿಕ ಬಿಜೆಪಿಯ ಜನಪ್ರಿಯತೆಯು ಕುಗ್ಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ. ಈಗ ಮಹಾರಾಷ್ಟ್ರದಲ್ಲಿಯೂ ಬಿಜೆಪಿಗೆ ಸಂಕಷ್ಟ ಎದುರಾಗಿದೆ ಎಂಬ ವರದಿಗಳು ಪ್ರಕಟವಾಗಿದೆ.
ಮಹಾರಾಷ್ಟ್ರದಲ್ಲಿರುವ ಬಿಜೆಪಿ ಹಾಗೂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಸರ್ಕಾರದ ಜನಪ್ರಿಯತೆ ಕುಗ್ಗುತ್ತಿದೆ ಎಂದು ಅಲ್ಲಿನ ಸ್ಥಳೀಯ ಪತ್ರಿಕೆ ಸಕಲ್ ನ್ಯೂಸ್ ಪೇಪರ್ ಸಮೀಕ್ಷೆ ತಿಳಿಸಿದೆ. ಅದರ ಪ್ರಕಾರ, ಮಹಾವಿಕಾಸ್ ಅಘಾಡಿಯ ಜನಪ್ರಿಯತೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

2019 ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ನಂತರ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಇದು ಶಿವಸೇನೆಯ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ರಚನೆಯಾದ ರಾಜ್ಯ ಮಟ್ಟದ ರಾಜಕೀಯ ಒಕ್ಕೂಟವಾಗಿದೆ.
ಎನ್‌ಸಿಪಿಯ ಪವಾರ್ ಮತ್ತು ಕಾಂಗ್ರೆಸ್‌ನ ಸೋನಿಯಾ ಗಾಂಧಿ, ಸಮಾಜವಾದಿ ಪಕ್ಷ, ಪಿಡಬ್ಲ್ಯೂಪಿಐ, ಸಿಪಿಐ(ಎಂ) ಮತ್ತು ಸ್ವತಂತ್ರ ಶಾಸಕರು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳ ಬೆಂಬಲದೊಂದಿಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಅಸ್ತಿತ್ವದಲ್ಲಿದೆ. ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅತಿದೊಡ್ಡ ಮೈತ್ರಿಕೂಟವಾಗಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ.
ಈಗ ಬಿಜೆಪಿ ಹಾಗೂ ಏಕನಾಥ್ ಶಿಂಧೆ ಬಣದ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಏಕನಾಥ ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಂಕಿಅಂಶ ನೀಡಿದ ಸುಬ್ರಮಣಿಯನ್ ಸ್ವಾಮಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಜನಪ್ರಿಯತೆ ಕುಗ್ಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಎಚ್ಚರಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ ಅಂಕಿಅಂಶಗಳನ್ನೂ ಹಂಚಿಕೊಂಡಿದ್ದಾರೆ.
ಸಕಾಲ್ ನ್ಯೂಸ್ ಪೇಪರ್ ಸಮೀಕ್ಷೆ ಪ್ರಕಾರ, ಮಹಾರಾಷ್ಟ್ರದಲ್ಲಿ ಈಗ ಚುನಾವಣೆ ನಡೆದರೆ ಎನ್‌ಡಿಎಗೆ ( ಬಿಜೆಪಿ ಹಾಗೂ ಏಕನಾಥ ಶಿಂಧೆ ಮೈತ್ರಿಕೂಟ) ಶೇ 39.3 ಮತಗಳು ಸಿಗಲಿವೆ. ಅದರಲ್ಲಿ ಬಿಜೆಪಿಗೆ ಶೇ 33.8 ಮತ್ತು ಶಿಂಧೆ ಪಾಳಯಕ್ಕೆ ಶೇ 5.5 ರಷ್ಟು ಮತಗಳು ಲಭ್ಯವಾಗಲಿವೆ.
ಮಹಾ ವಿಕಾಸ್ ಅಘಾಡಿಗೆ ( ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಹಾಗೂ ಕಾಂಗ್ರೆಸ್) ಶೇ 47.7 ರಷ್ಟು ಮತಗಳು ಸಿಗಲಿವೆ.

ಅದರಲ್ಲಿ ಕಾಂಗ್ರೆಸ್‌ಗೆ ಶೇ 19.9, ಎನ್‌ಸಿಪಿಗೆ ಶೇ 15.3 ಮತ್ತು ಠಾಕ್ರೆ ನೇತೃತ್ವದ ಶಿವಸೇನಾಗೆ ಶೇ 12.5 ಮತಗಳು ಬರಲಿವೆ. ಈ ಮತ ಹಂಚಿಕೆಯಲ್ಲಿ ಎನ್‌ಡಿಎಗಿಂತ ಎಂವಿಎ ಶೇ 8.4 ರಷ್ಟು ಮುಂದಿದೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.
ಸದ್ಯಕ್ಕೆ ಇದೇ ವಿಚಾರ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುತ್ತಿದೆ ಎಂದೂ ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬಹುತೇಕ ಟ್ವೀಟಿಗರು ಈ ವಿಚಾರಕ್ಕೆ ಸಮ್ಮತಿ ವ್ಯಕ್ತಪಡಿಸಿದ್ದಾರೆ.
'ಸುಮ್ಮನೆ ತನಗೆ ಬೇಕಾದುದನ್ನು ಹೇಳಿ ನಂತರ ಕಿವಿ ಮುಚ್ಚಿಕೊಳ್ಳುವುದು ಸರಿಯಲ್ಲ. ಸಾರ್ವಜನಿಕರು ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಆದರೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳು ಸುಳ್ಳು ಭಾಷಣಗಳಲ್ಲಿ ನಿರತವಾಗಿವೆ. ಬಿಜೆಪಿಯವರಿಗೆ ಜನರ ಆಕ್ರೋಶ ಅರ್ಥವಾಗುತ್ತಿಲ್ಲ. ಭಾರತದ ಸಮಸ್ಯೆಗಳನ್ನು ಕೊನೆಗೊಳಿಸದೇ, ಅವು ಕಣ್ಮರೆಯಾಗುವುದಿಲ್ಲ' ಎಂದು ರಿಷಿ ತಿವಾರಿ ಎಂಬುವವರು ಹೇಳಿದ್ದಾರೆ.

'ಇದು ತೀರಾ ಸಾಮಾನ್ಯ ಸಂಗತಿಯಾಗಿದೆ. ಏಕೆಂದರೆ ಬಿಜೆಪಿ ಗೆಲುವುಗಳು ಸುಳ್ಳು ಮತ್ತು ಕಟ್ಟುಕಥೆಗಳ ಮೇಲೆ ಆಧಾರಿತವಾಗಿವೆ. ಅವರು ದ್ವೇಷವಾದಿಗಳು' ಎಂದು ಡಾ ಅನಿಲ್ ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ.
'ಬಿಜೆಪಿಯಲ್ಲಿ ಅರ್ಹತೆ ಮತ್ತು ನೈಜ ಪ್ರತಿಭೆಯ ಕೊರತೆಯಿದೆ. ಸಮಾಜ ಒಪ್ಪಂದಂತಹ ನಿಯಮಗಳಿವೆ. ಹಾಗಾದರೆ ನೀವು ಏನನ್ನು ನಿರೀಕ್ಷಿಸುತ್ತೀರಿ. ನಾಯಕತ್ವದ ಸಂವಹನಗಳು ಸ್ಪೂರ್ತಿದಾಯಕವಾಗಿಲ್ಲ. ಸಮಾಜವನ್ನು ಏಕೀಕರಣಗೊಳಿಸುವ ಯಾವುದೇ ನೈಜ ಪ್ರಚಾರಗಳು ಅವರಿಂದ ಕಾಣುತ್ತಿಲ್ಲ' ಎಂದು ರೋಹಿತ್ ಸಿಂಗ್ ನೇಗಿ ಎಂಬುವವರು ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications