ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಜಮ್ಮು-ಕಾಶ್ಮೀರ: ಸಂಪುಟ ಪುನಾರಚನೆಗೂ-ಕತುವಾ ಪ್ರಕರಣಕ್ಕೂ ಸಂಬಂಧವಿಲ್ಲ'

|
Google Oneindia Kannada News

ಜಮ್ಮು, ಏಪ್ರಿಲ್ 13: ಜಮ್ಮು-ಕಾಶ್ಮೀರದ ಸಚಿವ ಸಂಪುಟ ಪುನಾರಚನೆಗೂ ಕತುವಾ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಸ್ಪಷ್ಟಪಡಿಸಿದ್ದಾರೆ.

ಕತುವಾದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೂ, ಸಚಿವ ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ಹೊಸ ಮುಖಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದೇವೆ ಎಂದು ರಾಮ್ ಮಾಧವ್ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ಸ್ಥಾನಕ್ಕೆ ನಿರ್ಮಲ್ ಸಿಂಗ್ ರಾಜೀನಾಮೆಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ಸ್ಥಾನಕ್ಕೆ ನಿರ್ಮಲ್ ಸಿಂಗ್ ರಾಜೀನಾಮೆ

ಜಮ್ಮು ಕಾಶ್ಮೀರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ-ಪಿಡಿಪಿ(ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ) ಮೈತ್ರಿ ಸರ್ಕಾರ ಕಳೆದ ಮೂರು ವರ್ಷಗಳಲಿಂದ ಕಣಿವೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದೆ. ಆದರೆ ಜನವರಿಯಲ್ಲಿ ರಾಜ್ಯದ ಕತುವಾ ಎಂಬಲ್ಲಿ ನಡೆದ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಪರ ನಡೆದ rally ಯೊಂದರಲ್ಲಿ ಬಿಜೆಪಿಯ ಇಬ್ಬರು ಸಚಿವರು ಭಾಗವಹಿಸಿದ ವಿಷಯ ತಿಳಿಯುತ್ತಿದ್ದಂತೆಯೇ ಸರ್ಕಾರದಲ್ಲಿ ಬಿರುಗಾಳಿ ಎದ್ದಿತ್ತು.

BJP says Jammu Kashmir Cabinet reshuffle not linked to Kathua case

ಈ ಘಟನೆಯ ನಂತರ ಬಿಜೆಪಿ ಇಬ್ಬರು ಸಚಿವರ ರಾಜೀನಾಮೆ ಕೇಳಿತ್ತು. ಕೆಲವೇ ದಿನಗಳಲ್ಲಿ ಜಮ್ಮು-ಕಾಶ್ಮೀರದ ಎಲ್ಲ ಸಚಿವರೂ ಸಾಮೂಹಿಕ ರಾಜೀನಾಮೆ ನೀಡುವಂತೆ ಪಕ್ಷದ ವರಿಷ್ಠರು ಆದೇಶಿಸಿದ್ದರು. ಅದರಂತೆ ಎಲ್ಲ ಮಂತ್ರಿಗಳೂ ರಾಜೀನಾಮೆ ನೀಡಿದ್ದು, ನಿನ್ನೆ ಬಿಜೆಪಿ ಮುಖಂಡ, ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

English summary
Bharatiya Janata Party (BJP) General Secretary Ram Madhav on Monday said that there was no link between Jammu and Kashmir Cabinet reshuffle and the Kathua rape case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X