Delhi Election: ದೆಹಲಿ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. 29 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಮೊದಲು ಎಎಪಿಯಲ್ಲಿದ್ದ ಮಾಜಿ ಶಾಸಕ, ದೆಹಲಿ ಬಿಜೆಪಿ ಉಪಾಧ್ಯಕ್ಷ ಕಪಿಲ್ ಮಿಶ್ರಾ ಕರವಾಲ್ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹರ್ಷ ಖುರಾನಾ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಬಿಜೆಪಿಯ ಮತ್ತೊಬ್ಬ ನಾಯಕ ಕರ್ನೈಲ್ ಸಿಂಗ್‌ ಶಕುರ್ ಬಸ್ತಿಯಿಂದ ಕಣಕ್ಕಿಳಿಯಲಿದ್ದು ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದರ್ ಜೈನ್‌ ವಿರುದ್ಧ ಸ್ಪರ್ಧಿಸಲಿದ್ದಾರೆ. ದೆಹಲಿ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಪುತ್ರ ಪವೇಶ್ ವರ್ಮಾ ಅವರು ಬಿಜೆಪಿ ಪ್ರಕಟಿಸಿದ ಮೊದಲ ಪಟ್ಟಿಯಲ್ಲಿ ಟಿಕೆಟ್ ಪಡೆದುಕೊಂಡಿದ್ದರು.

bjp second list delhi assembly elections

ಕಾರವಾಲ್ ನಗರದಲ್ಲಿ ಬಿಜೆಪಿ ಹಾಲಿ ಶಾಸಕರಾಗಿರು ಮೋಹನ್ ಸಿಂಗ್ ಬಿಶ್ತ್ ಅವರ ಹೆಸರನ್ನು ಮಾತ್ರ ಎರಡನೇ ಪಟ್ಟಿಯಲ್ಲಿ ಕೈಬಿಡಲಾಗಿದೆ. ಎಎಪಿಯಲ್ಲಿದ್ದಾಗ ಕಾರವಾಲ್ ನಗರದಿಂದ ಸ್ಪರ್ಧೆ ಮಾಡಿದ್ದ ಮಿಶ್ರಾ ಇಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. 2019ರಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಸ್ಥಳಗಳನ್ನು ಮಿನಿ ಪಾಕಿಸ್ತಾನ ಎಂದು ಕರೆದು ವಿವಾದ ಮಾಡಿಕೊಂಡಿದ್ದರು. ಜಾಫ್ರಾಬಾದ್ ಮತ್ತು ಚಾಂದ್‌ಬಾಗ್‌ನಿಂದ ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ತೆರವುಗೊಳಿಸುವಂತೆ ಅವರು ದೆಹಲಿ ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ್ದರು.

ಈ ಬಾರಿ ದೆಹಲಿ ಚುನಾವಣೆಯಲ್ಲಿ ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಎರಡು ಬಾರಿ ಸರ್ಕಾರ ರಚನೆ ಮಾಡಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದೆ. ಎಎಪಿಗೆ ಆಘಾತ ನೀಡಲು ಬಿಜೆಪಿ ಎಲ್ಲಾ ರಣತಂತ್ರ ಮಾಡುತ್ತಿದೆ.

ರಾಜಕೀಯ ಬೆಟ್ಟಿಂಗ್‌ಗೆ ಹೆಸರಾಗಿರುವ ಫಲೋಡಿ ಸಟ್ಟಾ ಬಜಾರ್ ಈ ಬಾರಿ ಎಎಪಿ ಕಳೆದ ಬಾರಿಗಿಂತ ಕಡಿಮೆ ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ಮುನ್ಸೂಚನೆ ನೀಡಿದೆ. ಬಿಜೆಪಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗೆದ್ದರೂ, ಎಎಪಿ ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+