Get Updates
Get notified of breaking news, exclusive insights, and must-see stories!

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಅಡ್ಡಮತದಾನ; ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು

68 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಕೇವಲ 25 ಶಾಸಕರನ್ನು ಹೊಂದಿದ್ದರೂ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗೆ ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಶಾಸಕರ ಅಡ್ಡ ಮತದಾನ ಮತ್ತು ಟೈ ಬ್ರೇಕಿಂಗ್ ಟಾಸ್ ತನ್ನ ಪರವಾಗಿ ಹೋದ ಪರಿಣಾಮ ಬಿಜೆಪಿ ಗೆಲುವು ಸಾಧಿಸಿದೆ.

ಈ ಸೋಲು ಕಾಂಗ್ರೆಸ್‌ನ ಪ್ರತಿಷ್ಠೆಗೆ ದೊಡ್ಡ ಹೊಡೆತ ನೀಡುವ ಜೊತೆಗೆ ಈಗ ಸರ್ಕಾರವೇ ಅಲುಗಾಡುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಬಹುಮತ ಪಡೆದು ಆಡಳಿತ ಮಾಡುತ್ತಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶ ಕೂಡ ಒಂದಾಗಿದೆ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿಯಿದ್ದಾಗ ಈ ರೀತಿಯ ಬೆಳವಣಿಗೆ ಕಾಂಗ್ರೆಸ್‌ಗೆ ಆಘಾತ ನೀಡಿದೆ.

 BJP Secures Victory in Himachal Rajya Sabha Poll Due to Alleged Congress Cross-Voting

ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಗೆಲುವು ಸಾಧಿಸಿದ್ದಾರೆ ಎಂದು ಘೋಷಣೆಯಾದ ಬಳಿಕ, ಪ್ರತಿಪಕ್ಷದ ನಾಯಕ ಜೈರಾಮ್ ಠಾಕೂರ್ ಮಾತನಾಡಿ, ಇಷ್ಟು ದೊಡ್ಡ ಬಹುಮತ ಹೊಂದಿದ್ದರೂ, ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದೆ, ನಾನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಅಭಿನಂದಿಸಲು ಬಯಸುತ್ತೇನೆ. ಅವಕಾಶಗಳು ತೀರಾ ಕಡಿಮೆ ಎಂದು ತೋರಿದಾಗ ನಾವು ವಿಜಯ ಸಾಧಿಸಿದ್ದೇವೆ. ಎಂದು ಸಂತಸ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಶಾಸಕರನ್ನು ಹೊಂದಿದ್ದು, ಅದರ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರು ಆರಾಮವಾಗಿ ಗೆಲ್ಲುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮಂಗಳವಾರ ಚುನಾವಣೆ ನಡೆದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಮತದಾನದ ವೇಳೆ, ಆರು ಕಾಂಗ್ರೆಸ್ ಶಾಸಕರು ಮತ್ತು ಸರ್ಕಾರವನ್ನು ಬೆಂಬಲಿಸುವ ಮೂವರು ಪಕ್ಷೇತರ ಶಾಸಕರು ಬಿಜೆಪಿಗೆ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ.

ಜೈರಾಮ್ ಠಾಕೂರ್ ಸೋಮವಾರ, ಕಾಂಗ್ರೆಸ್‌ ಸರ್ಕಾರವು ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಂಡಿದೆ ಎಂದು ಹೇಳಿದ್ದರು. ಬಿಜೆಪಿಯು ಗುರುವಾರ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆರು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಆಡಳಿತವಿರುವ ಹರಿಯಾಣಕ್ಕೆ ಸಾಗಿಸಲಾಗಿದೆ ಎಂದು ಹಿಮಾಚಲ ಸಿಎಂ ಸುಖು ಆರೋಪಿಸಿದ್ದಾರೆ.

"ಹರಿಯಾಣ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಬೆಂಗಾವಲು ಪಡೆ 5-6 ಶಾಸಕರನ್ನು ಕರೆದಯ್ಯಲಾಗಿದೆ. ಶಾಸಕರ ಕುಟುಂಬಗಳು ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿವೆ ಮತ್ತು ಶಾಸಕರು ಅವರನ್ನು ಸಂಪರ್ಕಿಸಬೇಕು. ಆತಂಕ ಪಡುವ ಅಗತ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮತ್ತು ವಿರೋಧ ಪಕ್ಷವಾಗಿದೆ ಆದರೆ ಪ್ರತಿಪಕ್ಷಗಳು ಮಾಡುತ್ತಿರುವ ಗೂಂಡಾಗಿರಿ ಅನ್ನು ಹಿಮಾಚಲದ ಜನರು ಎಂದಿಗೂ ಒಪ್ಪಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+