BJP Candidate List: 125 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮ? ಮೊದಲ ಪಟ್ಟಿಯಲ್ಲಿ ಯಾರ್ಯಾರ ಹೆಸರು?

ನವದೆಹಲಿ, ಫೆಬ್ರವರಿ 29: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಮೋದಿ ಹಾಗೂ ಅಮಿತ್‌ ಶಾ ಹಲವು ಚುನಾವಣಾ ತಂತ್ರಗಾರಿಕೆಯನ್ನ ಹೆಣೆದಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಇಂದು ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಸಲಿದ್ದು, ಸಭೆಯಲ್ಲಿ ಕನಿಷ್ಠ 125 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ವರದಿಯಾಗಿದೆ. ಅಲ್ಲದೇ ಇಂದು ಪಕ್ಷವು ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ವಿವಿಐಪಿ ಅಭ್ಯರ್ಥಿಗಳ ಹೊರತಾಗಿ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೆಲವು ಕೇಂದ್ರ ಸಚಿವರ ಹೆಸರನ್ನು ಸಹ ಪಟ್ಟಿಯಲ್ಲಿ ಸೇರಿಸುವ ಸಾಧ್ಯತೆ ಇದೆ. ಇಂದು ರಾತ್ರಿ ಅಭ್ಯರ್ಥಿಗಳನ್ನು ಘೋಷಿಸಬಹುದಾದ ಇತರ ಸ್ಥಾನಗಳು, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ವಿಫಲವಾದ ಸ್ಥಳಗಳನ್ನು ಒಳಗೊಂಡಿದೆ.

BJP set to finalise candidates for 125 Lok Sabha seats today

ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಆರು ರಾಜ್ಯಗಳ ಕೋರ್ ಗ್ರೂಪ್ ಕಮಿಟಿಗಳೊಂದಿಗೆ ಬುಧವಾರ ನಡೆದ ಸಭೆಯ ನಂತರ ಇಂದಿನ ನಿರ್ಣಾಯಕ ಸಭೆ ನಡೆಯುತ್ತದೆ, ಅಲ್ಲಿ ನಡ್ಡಾ ಅವರು ಆ ಲೋಕಸಭಾ ಸ್ಥಾನಗಳ ರಾಜ್ಯ ನಾಯಕರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಇಂದು ಪಕ್ಷದ ಸಿಇಸಿ ಸಭೆಯ ಹೊರತಾಗಿ, ನಡ್ಡಾ ಅವರು ಯುಪಿಯಿಂದ ಪಕ್ಷದ ಕೋರ್ ಗ್ರೂಪ್ ಕಮಿಟಿಯನ್ನು ಭೇಟಿಯಾಗಲಿದ್ದಾರೆ, ಅಲ್ಲಿ ಸಿಎಂ ಯೋಗಿ ಆದಿತ್ಯನಾಥ್, ಇಬ್ಬರೂ ಉಪ ಮುಖ್ಯಮಂತ್ರಿಗಳು ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರು ದೆಹಲಿಯಲ್ಲಿ ಸಂಜೆ 7 ಗಂಟೆಗೆ ಉಪಸ್ಥಿತರಿರುವ ನಿರೀಕ್ಷೆಯಿದೆ.

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ವಿಚಾರದಲ್ಲಿ ಬಿಜೆಪಿ ನಾಯಕರ ಚಿಂತನ ಮಂಥನ ಇಂದಿನ ಸಭೆಗೂ ಮುನ್ನ ಬಿಜೆಪಿ ಬುಧವಾರ ಲೋಕಸಭೆ ಚುನಾವಣೆಗೆ ಹಲವು ರಾಜ್ಯಗಳಲ್ಲಿ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚಿಂತನೆ ನಡೆಸಿದೆ. ಅಲ್ಲದೇ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳ ಪಕ್ಷದ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ನಾಯಕರೊಂದಿಗೆ ಈಗಾಗಲೇ ಹಲವಯ ಸಭೆಗಳನ್ನು ನಡೆಸಲಾಗಿದೆ. ವರ್ಷದ ಎರಡನೇ ತ್ರೈಮಾಸಿಕದಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಪ್ರಧಾನಿ ಮೋದಿ ಹೊಂದಿದ್ದಾರೆ ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) 400 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಗುರಿಯನ್ನು ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+