ಕರ್ನಾಟಕದ ಈ ವಿಷಯದ ಬಗ್ಗೆ ಮಹಾರಾಷ್ಟ್ರದಲ್ಲಿ ಅಪಪ್ರಚಾರ, ಏನದು ?
ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮೆಚ್ಚಿಸಿದ್ದ ಕಾಂಗ್ರೆಸ್ ಪಕ್ಷವು ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ. ಇದೀಗ ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಆಯಾ ರಾಜ್ಯಕ್ಕೆ ಅನುಗುಣವಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುತ್ತಿದೆ. ಇನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮೈತ್ರಿ (ಮಹಾ ವಿಕಾಸ್ ಅಘಾಡಿ) ಪಕ್ಷವು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಆದರೆ, ಮಹಾರಾಷ್ಟ್ರದಲ್ಲೂ ಕರ್ನಾಟಕ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯುವುದಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಚುನಾವಣೆ ಪ್ರಚಾರ ಸಭೆಗಳಲ್ಲಿ ಹಾಗೂ ಯಾತ್ರೆಗಳಲ್ಲಿ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಪಕ್ಷವನ್ನು ಗುರಿಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ, ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆಗಳಿಂದ ಜನ ಪ್ರಭಾವಿತರಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.

ಕರ್ನಾಟಕ ಗ್ಯಾರಂಟಿ ಯೋಜನೆಯ ಬಗ್ಗೆ ಅಪಪ್ರಚಾರ: ಆರೋಪ
ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪರಿಚಯಿಸಿರುವ ಗ್ಯಾರಂಟಿ ಯೋಜನೆಗಳ ಅಪಪ್ರಚಾರ ನಡೆದಿದೆ ಎಂದು ಕಾಂಗ್ರೆಸ್ ದೂರಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದಿದೆ.
ಮುಂದುವರಿದು ಚುನಾವಣಾ ಪೂರ್ವದಿಂದಲೂ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ ಈಗ ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳ ಜನಪ್ರಿಯತೆಗೆ ಹೆದರಿ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂಬ ಸುಳ್ಳು ಅಪಪ್ರಚಾರದಲ್ಲಿ ತೊಡಗಿದೆ ಎಂದು ಆರೋಪ ಮಾಡಿದೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಪಕ್ಷದ ರಾಜ್ಯ ಘಟಕದಿಂದ ಸುಳ್ಳು ಜಾಹೀರಾತು ನೀಡುವ ಕೆಳಮಟ್ಟಕ್ಕೆ ಬಿಜೆಪಿ ಇಳಿದಿದೆ. ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಸೋಲಿನ ಭಯ ಹುಟ್ಟಿಸಿದೆ. ಆದರೆ, ಬಿಜೆಪಿಯ ಅಪಪ್ರಚಾರಕ್ಕೆ ಕರ್ನಾಟಕದ ಗ್ಯಾರಂಟಿ ಫಲಾನುಭವಿಗಳೇ ತಕ್ಕ ಉತ್ತರ ನೀಡಿದ್ದಾರೆ. ಸುಳ್ಳೇ ಬಿಜೆಪಿಗರ ಮನೆ ದೇವರು ಎಂಬುದು ಮತ್ತೊಮ್ಮೆ ಸಾಬೀತಾಗಿದೆ! ಎಂದು ಹೇಳಿದೆ.
ಸಿಎಂ @siddaramaiah ಹಾಗೂ ಡಿಸಿಎಂ @DKShivakumar ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಚುನಾವಣಾ ಪೂರ್ವದಿಂದಲೂ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ ಈಗ ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳ ಜನಪ್ರಿಯತೆಗೆ ಹೆದರಿ… pic.twitter.com/Her1xY8Hgu
— Karnataka Congress (@INCKarnataka) November 18, 2024
ದೇಶದ ವಿವಿಧೆಡೆ ಕಾಂಗ್ರೆಸ್‌ನಿಂದ ಗ್ಯಾರಂಟಿ ಪ್ರಯೋಗ
ಕರ್ನಾಟಕದಲ್ಲಿ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಂತ ವ್ಯವಸ್ಥಿತವಾಗಿ ಹಾಗೂ ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುವ ಮೂಲಕ ಪ್ರಚಾರ ಮಾಡಿತ್ತು. ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿ ಅದನ್ನು ಜರ ಬಳಿ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿತ್ತು.
ಅದೇ ರೀತಿ ಕರ್ನಾಟಕದ ನಂತರ ನೆರೆಯ ತೆಲಂಗಾಣದಲ್ಲೂ ಕಾಂಗ್ರೆಸ್ ಇದೇ ಪ್ಲಾನ್ ವರ್ಕ್‌ಔಟ್ ಮಾಡುವ ಮೂಲಕ ತೆಲಂಗಾಣದಲ್ಲೂ ಅಧಿಕಾರಕ್ಕೆ ಬರುವಲ್ಲಿ ಕಾಂಗ್ರೆಸ್ ಪಕ್ಷವು ಯಶಸ್ವಿಯಾಗಿತ್ತು. ಆದರೆ, ಉತ್ತರ ಭಾರತದಲ್ಲಿ ಅದು ಸಕ್ಸಸ್ ಆಗಿರಲಿಲ್ಲ. ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಪ್ರಯೋಗ ಮಾಡಿದೆ.
ಆದರೆ, ಇದು ನೀರಿಕ್ಷಿತ ಸಕ್ಸಸ್ ತಂದುಕೊಟ್ಟಿಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಭಿನ್ನ ರಾಜಕೀಯ ವಾತಾವರಣ ಇದೆ. ಹೀಗಾಗಿ, ಇಲ್ಲಿ ಗ್ಯಾರಂಟಿ ಕೈಹಿಡಿಯಬಹುದು ಎನ್ನುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.












Click it and Unblock the Notifications