J&K Election Results: ಬಿಜೆಪಿಗೆ ಹೊಡೆತ ಕೊಟ್ಟ ಜಮ್ಮುವಿನ ಹಿಂದೂಗಳು- ಈ ಎರಡು ಕ್ಷೇತ್ರಗಳಲ್ಲಿ ಕೇಸರಿ ಪಕ್ಷಕ್ಕೆ ಭಾರೀ ಹಿನ್ನಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. 10 ವರ್ಷಗಳ ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟ ಬಹುಮತ ಪಡೆದಿದ್ದು, ಈಗ ಸರ್ಕಾರ ರಚನೆಗೆ ಪ್ರಯತ್ನಗಳು ನಡೆಯಲಿವೆ. ಜಾತಿ ಲೆಕ್ಕಾಚಾರದಲ್ಲಿದ್ದ ಬಿಜೆಪಿಗೆ ಈ ಬಾರಿ ಭಾರೀ ಮುಖಭಂಗವಾಗಿದೆ. ಅಚ್ಚರಿಯ ವಿಚಾರ ಅಂದರೆ ಜಮ್ಮು ಪ್ರದೇಶದ 2 ಪ್ರಮುಖ ಹಿಂದೂ ಬಹುಸಂಖ್ಯಾತ ಸ್ಥಾನಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ.

ಹೌದು... ಮಂಗಳವಾರ (ಅಕ್ಟೋಬರ್ 8) ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡ ಜಮ್ಮು ಪ್ರದೇಶದ ಎರಡು ಪ್ರಮುಖ ಹಿಂದೂ-ಬಹುಸಂಖ್ಯಾತ ವಿಧಾನಸಭಾ ಸ್ಥಾನಗಳನ್ನು ಕಳೆದುಕೊಂಡಿದೆ. ಹಿಂದೂಗಳೇ ಹೆಚ್ಚಾಗಿರುವ ಬಾನಿ ಮತ್ತು ರಾಂಬನ್ (Bani and Ramban) ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ.

BJP Suffers Setback in Key Hindu-Majority Seats of Jammu Region

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಪಕ್ಷ ಜಯ ಗಳಿಸಿದ್ದಕ್ಕೆ ಅಲ್ಲಿರುವ ಅಲ್ಪಸಂಖ್ಯಾತರು ಹಾಗೂ ಗಡಿಯಿಂದ ಒಳನುಸುರುಕೋರರೇ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಆದರೆ ಹಿಂದೂಗಳೇ ಹೆಚ್ಚಾಗಿರುವ ಬಾನಿ ಮತ್ತು ರಾಂಬನ್ ಕ್ಷೇತ್ರದಲ್ಲಿ ಕಮಲ ಅರಳಲು ಸಾಧ್ಯವೇ ಆಗಿಲ್ಲ. ಬಿಜೆಪಿಯ ಭದ್ರಕೋಟೆ ಎಂದು ಹೇಳಲಾಗುತ್ತಿದ್ದ ಈ ಪ್ರದೇಶಗಳಲ್ಲಿ ಬಿಜೆಪಿ ಜಾತಿ ಕಾರ್ಡ್‌ ಪ್ಲೇ ಆಗೇ ಇಲ್ಲ.

ಚುನಾವಣಾ ಆಯೋಗದ ಪ್ರಕಾರ, ಸ್ವತಂತ್ರ ಅಭ್ಯರ್ಥಿ ಡಾ.ರಾಮೇಶ್ವರ್ ಸಿಂಗ್ ಅವರು ಬಾನಿಯಿಂದ ಬಿಜೆಪಿಯ ಜೇವನ್ ಲಾಲ್ ಅವರನ್ನು 18,672 ಮತಗಳ ಅಂತರದಿಂದ ಸೋಲಿಸಿದ್ದಾರೆ. 2014ರ ವಿಧಾನಸಭೆ ಚುನಾವಣೆಯಲ್ಲಿ ಜೇವನ್ ಲಾಲ್ ಈ ಕ್ಷೇತ್ರದಿಂದ ಗೆದ್ದಿದ್ದರು.

ರಾಂಬನ್ ನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಅರ್ಜುನ್ ಸಿಂಗ್ ರಾಜು ಅವರು ಬಿಜೆಪಿ ಬಂಡಾಯಗಾರ ಸೂರಜ್ ಸಿಂಗ್ ಪರಿಹಾರ್ ಅವರನ್ನು 8,869 ಮತಗಳಿಂದ ಸೋಲಿಸಿದರು. ಬಿಜೆಪಿಯ ರಾಕೇಶ್ ಸಿಂಗ್ ಠಾಕೂರ್ 17,254 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು. 2014ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತ್ತು.

ಆದರೆ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ 17 ಸ್ಥಾನಗಳನ್ನು ಗೆದ್ದಿತ್ತು. ಹೆಚ್ಚಾಗಿ ಜಮ್ಮು ಪ್ರದೇಶದಲ್ಲಿ ಅದು 12 ನಲ್ಲಿ ಮುನ್ನಡೆ ಸಾಧಿಸಿದೆ. ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಯು ಗೆಲುವಿನ ನಿರೀಕ್ಷೆಯಲ್ಲಿತ್ತು, 33 ಸ್ಥಾನಗಳನ್ನು ಗೆದ್ದು 14 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

2014ರ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಪಿಡಿಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 2018 ರಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಕ್ಷವು ಹೊರಬರುವವರೆಗೂ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರವನ್ನು ನಡೆಸಿದವು. ಇದರ ಪರಿಣಾಮವಾಗಿ ಸರ್ಕಾರ ಪತನವಾಯಿತು.

ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಅಸೆಂಬ್ಲಿ ಚುನಾವಣೆಗಳು ನಡೆದವು. ಇದು ಒಂದು ದಶಕದಲ್ಲಿ ಮೊದಲ ಚುನಾವಣೆಯಾಗಿದೆ. ರಾಜ್ಯದಿಂದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರದ ಮೊದಲ ಚುನಾವಣೆಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಗಡಿಯನ್ನು ದಾಟಿದ್ದು ಈಗ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ಸರ್ಕಾರವನ್ನು ರಚಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+