ಮಧ್ಯಪ್ರದೇಶದಲ್ಲಿ 7 ಸಂಸದರು, 3 ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್‌: ಪಟ್ಟಿಯಲ್ಲಿ ಸಿಎಂ ಚೌಹಾಣ್ ಹೆಸರೇ ಇಲ್ಲ

ಭೋಪಾಲ್, ಸೆಪ್ಟೆಂಬರ್‌ 26: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಕೆಲ ತಿಂಗಳಲ್ಲಿ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆಗೆ ತಯಾರಿ ನಡೆಸಿವೆ. ಬಿಜೆಪಿಯು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲೂ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಹೆಸರು ಕಂಡುಬಂದಿಲ್ಲ. ಇದು ರಾಜಕೀಯದಲ್ಲಿ ಹಲವು ಬಗೆಯ ಚರ್ಚೆಗಳನ್ನು ಹುಟ್ಟುಹಾಕಿದೆ.

ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪ್ರಬಲ ಪ್ರಾದೇಶಿಕ ನಾಯಕರ ( ಶಿವರಾಜ್‌ ಸಿಂಗ್‌ ಚೌಹಾನ್‌ ಹೊರತುಪಡಿಸಿ ) ಮೊರೆಹೋಗಿದೆ. ಚೌಹಾಣ್‌ ಜನಪ್ರಿಯತೆ ದಿನೇದಿನೇ ಕುಸಿಯುತ್ತಿದೆ ಎಂಬುದು ಬಿಜೆಪಿ ಹೈಕಮಾಂಡ್‌ ತಲೆನೋವಾಗಿ ಪರಿಣಮಿಸಿದೆ.

BJP ticket for 7 MPs, 3 Union Ministers in Madhya Pradesh: Trouble For CM Shivraj Singh Chouhan?

ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇರುವುದು ಬಿಜೆಪಿ ಉನ್ನತ ನಾಯಕರ ಗಮನಕ್ಕೆ ಬಂದಿದೆ. ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಂಡರೂ, ಪಕ್ಷಕ್ಕೆ ಹೆಚ್ಚು ಲಾಭವಾಗದು ಎಂಬ ಮಾತುಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಮುನ್ನೆಲೆಗೆ ತರಲು ಬಿಜೆಪಿ ನಾಯಕರು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಹಾಗೂ ಗುಜರಾತ್‌ ಪ್ರಯೋಗವನ್ನೇ ಪುನರಾವರ್ತಿಸಲು ಬಿಜೆಪಿ ಮುಂದಾಗಿದೆ. ಒಟ್ಟು 230 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ಹೊಸಬರಿಗೂ ಆಧ್ಯತೆ ನೀಡಲಾಗಿದೆ. ಆದರೆ, ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ಕೇಂದ್ರಬಿಂದು ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

BJP ticket for 7 MPs, 3 Union Ministers in Madhya Pradesh: Trouble For CM Shivraj Singh Chouhan?

ಪ್ರಧಾನಿ ಮೋದಿಯವರು ಭೋಪಾಲ್‌ಗೆ ಭೇಟಿ ನೀಡಿದ ಕೆಲವೇ ಗಂಟೆಗಳ ನಂತರ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅಚ್ಚರಿಕರ ಸಂಗತಿಯೆಂದರೆ, ಈ ಪಟ್ಟಿಯಲ್ಲಿ ಏಳು ಲೋಕಸಭಾ ಸದಸ್ಯರನ್ನು ಬಿಜೆಪಿ ಕಣಕ್ಕಿಳಿಸಿದೆ. ಈ ಏಳು ಸಂಸದರಲ್ಲಿ ಮೂವರು ಕೇಂದ್ರ ಮಂತ್ರಿಗಳಾಗಿದ್ದಾರೆ. ಈ ಪಟ್ಟಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಹೆಸರೂ ಇದೆ.

ಮೂವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಸ್ಪರ್ಧೆಯಲ್ಲಿದ್ದಾರೆ.

ಆಡಳಿತ ಪಕ್ಷವಾಗಿರುವ ಬಿಜೆಪಿ ಹಿರಿಯ ಪ್ರಾದೇಶಿಕ ನಾಯಕರ ನಡುವೆ ಸಮತೋಲನವನ್ನು ಸಾಧಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ನಿರ್ದಿಷ್ಟ ಪ್ರದೇಶಗಳು ಮತ್ತು ಜಾತಿಗಳ ಜೊತೆಗೆ ಗುರುತಿಸಿಕೊಂಡಿರುವ ನಾಯಕರಿಗೆ ಮಣೆ ಹಾಕಲು ಯತ್ನಿಸುತ್ತಿದೆ.

BJP ticket for 7 MPs, 3 Union Ministers in Madhya Pradesh: Trouble For CM Shivraj Singh Chouhan?

ಏಳು ಹಾಲಿ ಸಂಸದರನ್ನು ಕಣಕ್ಕಿಳಿಸುವ ಮೂಲಕ, ಪಕ್ಷವು ದುರ್ಬಲ ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರಬಲ ನಾಯಕರ ಉಪಸ್ಥಿತಿಯು ಅಕ್ಕಪಕ್ಕದ ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರುವ ನಿರೀಕ್ಷೆಯನ್ನು ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ.

ಕಾಂಗ್ರೆಸ್ ನಾಯಕ ಕಮಲ್‌ ನಾಥ್‌ ಹೇಳಿದ್ದೇನು?

ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಕಾಂಗ್ರೆಸ್‌ ನಾಯಕ ಕಮಲ್‌ ನಾಥ್‌ ಅವರು, 'ಬಿಜೆಪಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿದೆ' ಎಂದು ಹೇಳಿದ್ದಾರೆ.

ಹದಿನೈದು ವರ್ಷಗಳ ಕಾಲ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾರೆ. ಅವರ ಆಡಳಿತವು ಮಧ್ಯಪ್ರದೇಶದ ಕೋಟ್ಯಂತರ ಜನರಿಗೆ ಬೇಸರ ತರಿಸಿದೆ. ಅವರು ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಬಿಜೆಪಿಗೆ ಸೋಲು ಖಚಿತವಾಗಿದೆ. ಇದು ಆ ಪಕ್ಷದ ಆಂತರಿಕ ಸಮೀಕ್ಷೆಯಲ್ಲೂ ಬಹಿರಂಗಗೊಂಡಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+