Jammu & Kashmir Poll: ಕಾಶ್ಮೀರದ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ; ಬಿಜೆಪಿ ಅಧಿಕೃತ ಘೋಷಣೆ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದೆ. ಮೂರನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದ್ದು, ಕಾಶ್ಮೀರ ಭಾಗದಲ್ಲಿ ಬಿಜೆಪಿ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡುವುದಾಗಿ ಸ್ಪಷ್ಟನೆ ನೀಡಿದೆ. ಬುಧವಾರ ಸಂಜೆ ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ಕಾಶ್ಮೀರಕ್ಕೆ ಯಾವುದೇ ಹೊಸ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲಿ ಕಾಶ್ಮೀರದಲ್ಲಿ 47 ಕ್ಷೇತ್ರಗಳು ಬರಲಿವೆ. ಈಗ ಇಲ್ಲಿ 19 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದರೆ ಉಳಿದ 28 ಕ್ಷೇತ್ರಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವ ಬಗ್ಗೆ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು.
ಪಕ್ಷದಲ್ಲಿ ಭಿನ್ನಮತ ಸಾಧ್ಯತೆ
ಟಿಕೆಟ್ ಹಂಚಿಕೆ ವಿಚಾರವೇ ಇದೀಗ ಬಿಜೆಪಿಗೆ ದೊಡ್ಡ ತಲೆನೋವಾಗುವ ಸಾಧ್ಯತೆ ಇದೆ. 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುವ ಕಾರಣ ಉಳಿದ 28 ಕ್ಷೇತ್ರಗಳ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಇದರಿಂದ ಬೇರೆ ಪಕ್ಷಗಳಿಗೆ ಸೇರುವ ಅಥವಾ ಆಂತರಿಕ ಭಿನ್ನಾಭಿಪ್ರಾಯಗಳು ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾಗುವ ಆತಂಕ ಕೂಡ ಇದೆ.
ಮುಖ್ಯವಾಗಿ ಅಮಿತ್ ಶಾ ಕಾಶ್ಮೀರಕ್ಕೆ ಭೇಟಿ ನೀಡಿ ಪಕ್ಷದ ನಾಯಕರ ಜೊತೆ ಸಂವಾಸ ಮಾಡುವ ವೇಳೆ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದರು. ಜಮ್ಮು ಪ್ರಾಂತ್ಯದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 90 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಚುನಾವಣೆಗೆ ಸಜ್ಜಾಗಲು ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದ್ದರು.
ಆದರೆ ಬಿಜೆಪಿ ಇದೀಗ ಕಾಶ್ಮೀರದಲ್ಲಿ 19 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆಗೆ ಒಪ್ಪಿಕೊಂಡಿದ್ದೇಕೆ ಎನ್ನುವ ಪ್ರಶ್ನೆಗ ಉತ್ತರ ಸಿಕ್ಕಿಲ್ಲ. ಇದೊಂದು ರಾಜಕೀಯ ತಂತ್ರವಾಗಿದ್ದು ಗೆಲ್ಲುವ ಸಾಧ್ಯತೆ ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲು ಸಜ್ಜಾಗಿದೆ ಎನ್ನಲಾಗಿದೆ.
ಕಾಶ್ಮೀರದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿಗಳಾದ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಆರೋಪಿಸಿದ್ದು, ಬಿಜೆಪಿಯು ತಮ್ಮ ಮತಗಳನ್ನು ಕಡಿಮೆ ಮಾಡಲು ನಕಲಿ ಸ್ವತಂತ್ರ ಅಭ್ಯರ್ಥಿಗಳು ಮತ್ತು ಸಣ್ಣ ಪಕ್ಷಗಳನ್ನು ಪ್ರಾಯೋಜಿಸುತ್ತಿದೆ ಎಂದು ಹೇಳಿದೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್











Click it and Unblock the Notifications