75 ವರ್ಷ ಮೇಲ್ಪಟ್ಟವರಿಗೆ ಬಿಜೆಪಿ ಟಿಕೆಟ್, ಸಚಿವ ಸ್ಥಾನವಿಲ್ಲ!

ನವದೆಹಲಿ, ಆಗಸ್ಟ್ 03 : ಬಿಜೆಪಿ 75 ವರ್ಷ ಮೇಲ್ಪಟ್ಟವರನ್ನು ಲೋಕಸಭೆ ಚುನಾವಣೆ ಕಣಕ್ಕಿಳಿಸಲಿದೆಯೇ? ಎಂಬ ಚರ್ಚೆ ಆರಂಭವಾಗಿತ್ತು. ಪ್ರಸ್ತುತ ಬಿಜೆಪಿ ತನ್ನ ಚುನಾವಣಾ ತಂತ್ರದಲ್ಲಿ ಬದಲಾವಣೆ ಮಾಡಿದ್ದು, ಎಲ್ಲರಿಗೂ ಟಿಕೆಟ್ ನೀಡಲಾಗುತ್ತದೆ.

75 ವರ್ಷ ಮೇಲ್ಪಟ್ಟವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಮೊದಲು ನಿರ್ಧರಿಸಲಾಗಿತ್ತು. ಆದರೆ, ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ನೀಡಲಾಗಿದೆ. ಆದರೆ, ಅವರಿಗೆ ಕೇಂದ್ರ ಸಚಿವ ಸ್ಥಾನವನ್ನು ನೀಡುವುದಿಲ್ಲ.

ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸೇರಿದಂತೆ ಹಲವು ನಾಯಕರು 75 ವರ್ಷ ದಾಟಿದವರಿದ್ದಾರೆ.

BJP to field 75 plus leaders for Lok Sabha election but no minister post

ಒಂದು ವೇಳೆ ಈ ನಾಯಕರಿಗೆ ಟಿಕೆಟ್ ನೀಡದಿದ್ದರೆ ಅದು ರಾಜ್ಯ ಮತ್ತು ಅಕ್ಕ-ಪಕ್ಕದ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತದೆ. ಒಂದು ವೇಳೆ ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ಟಿಕೆಟ್ ನೀಡದಿದ್ದರೆ ಇಡೀ ರಾಜ್ಯದ ಮೇಲೆ ಪರಿಣಾಮ ಉಂಟಾಗಲಿದೆ.

ಆದ್ದರಿಂದ, ಬಿಜೆಪಿ ಹಿರಿಯ ನಾಯಕರಿಗೆ ಟಿಕೆಟ್ ನೀಡಲು ಮುಂದಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಜಯಗಳಿಸಿದರೂ ಸಚಿವ ಸ್ಥಾನವನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಎಲ್.ಕೆ.ಅಡ್ವಾಣಿ ಅವರು ಗುಜರಾತ್‌ನ ಗಾಂಧಿನಗರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯ ಚುನಾವಣೆಗೆ ಅವರು ಸ್ಪರ್ಧೆ ಮಾಡುವುದಿಲ್ಲ ಪುತ್ರ ಜಯಂತ್ ಅಡ್ವಾಣಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+