ಕುತೂಹಲ ಕೆರಳಿಸಿರುವ ಹಿಮಾಚಲ ಸಿಎಂ ಆಯ್ಕೆ

Posted By:
Subscribe to Oneindia Kannada

ಶಿಮ್ಲಾ, ಡಿಸೆಂಬರ್ 22: ಹಿಮಾಚಲ ಪ್ರದೇಶ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದ್ದು, ಶುಕ್ರವಾರ ಸಂಜೆ ವೇಳೆಗೆ ಬಿಜೆಪಿ ವೀಕ್ಷಕರು ಹೆಸರು ಘೋಷಿಸುವ ಸಾಧ್ಯತೆಯಿದೆ.

ಹಿಮಾಚಲದ ಸಿಎಂ ಅಭ್ಯರ್ಥಿ ಪ್ರೇಮ್ ಸೋಲಲು ಏನು ಕಾರಣ?

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು ಸೋಲು ಕಂಡಿದ್ದು, ಬಿಜೆಪಿಗೆ ಕೊಂಚ ಹಿನ್ನಡೆಯಾಗಿತ್ತು. ಹೀಗಾಗಿ, ಮುಖ್ಯಮಂತ್ರಿ ಆಯ್ಕೆ ಸ್ವಲ್ಪ ವಿಳಂಬವಾಗಿತ್ತು. ಆದರೆ, ಕಳೆದೆರಡು ದಿನಗಳಿಂದ ಸಿಎಂ ಆಯ್ಕೆ ಪ್ರಕ್ರಿಯೆ ಬಿರುಸುಗೊಂಡಿದೆ.

BJP to pick new Himachal Pradesh CM today, pro- and anti-Dhumal groups raise slogans

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ತೋಮಾರ್ ಅವರು ಹಿಮಾಚಲಕ್ಕೆ ಬಂದಿದ್ದು, ಸಿಎಂ ಆಯ್ಕೆಯ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

ಈ ನಡುವೆ ಪ್ರೇಮ್ ಕುಮಾರ್ ಧುಮಾಲ್ ಪರ -ವಿರೋಧ ಪ್ರತಿಭಟನೆ ನಡೆಸಲಾಗಿದೆ. ಎರಡು ಅವಧಿಗೆ ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಸಿಎಂ ಪ್ರೇಮ್ ಕುಮಾರ್ ಪರ ಲಾಬಿ ಬಲವಾಗುತ್ತಿದೆ. ಮೂರು ಶಾಸಕರು ತಮ್ಮ ಸ್ಥಾನವನ್ನು ಬಿಟ್ಟು ಕೊಡಲು ಸಿದ್ಧ ಎಂದು ಘೋಷಿಸಿದ್ದಾರೆ.

ಹಿಮಾಚಲದ ಸಿಎಂ ರೇಸ್: ಪ್ರೇಮ್ ಕುಮಾರ್ ಈಗಲೂ ನೆಚ್ಚಿನ ಆಯ್ಕೆ

ಇನ್ನೊಂದೆಡೆ, ಚುನಾಯಿತ ಪ್ರತಿನಿಧಿಯೊಬ್ಬರನ್ನು ಸಿಎಂ ಸ್ಥಾನದಲ್ಲಿ ಕೂರಿಸುವಂತೆ ಕೋರಿ ಪ್ರತಿಭಟನೆ ನಡೆಸಲಾಗಿದೆ.ಧುಮಾಲ್‌ಗೂ ಮೊದಲು ಜೆಪಿ ನಡ್ಡಾ ಹೆಸರು ಸಿಎಂ ರೇಸ್‌ನಲ್ಲಿ ಕೇಳಿಬಂದಿತ್ತು. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಮಾಡಲಾಯಿತು.

ಸುಜಾನ್‌ಪುರ್ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ರಾಜೇಂದ್ರ ಸಿಂಗ್ ರಾಣಾ ಗೆಲುವು ಸಾಧಿಸಿದ್ದು ಈಗ ಇತಿಹಾಸ. 68 ಸ್ಥಾನಗಳಲ್ಲಿ 44 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಅಧಿಕಾರ ಸ್ಥಾಪನೆಯ ಹಕ್ಕು ಮಂಡನೆಗೆ ಮುಂದಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Union ministers Nirmala Sitharaman and Narendra Singh Tomar, who are BJP's central observers, held a meeting with RSS leaders in Shimla to reach a consensus on the name of a new chief minister. The name of the new leader is likely to be announced on Friday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ