Election Result: ಶ್ರೀರಾಮನ ಊರಿನಲ್ಲೇ ಬಿಜೆಪಿಗೆ ಹಿನ್ನಡೆ
ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದು, ಎನ್‌ಡಿಎ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ.
ಉತ್ತರ ಪ್ರದೇಶವನ್ನು ಕ್ಲೀನ್ ಸ್ವೀಪ್ ಮಾಡುವ ಕನಸು ಕಂಡಿದ್ದ ಬಿಜೆಪಿಗೆ ಆಘಾತ ಎದುರಾಗಿದೆ. ಆರಂಭಿಕ ಹಂತದಲ್ಲಿ ಕೇವಲ 35 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಪಡೆದುಕೊಂಡಿದ್ದು, 35 ಕ್ಷೇತ್ರಗಳಲ್ಲಿ ಸಮಜಾವಾದಿ ಪಕ್ಷ ಮುನ್ನಡೆ ಸಾಧಿಸಿದೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗಿರುವುದು ಅಚ್ಚರಿ ಉಂಟು ಮಾಡಿದೆ.
ರಾಮ ಮಂದಿರ ಕಟ್ಟಿದ ಬಳಿಕ ಕ್ಷೇತ್ರದಲ್ಲಿ ಬಿಜೆಪಿ ಜನಪ್ರಿಯತೆ ಹೆಚ್ಚುತ್ತದೆ ಎಂದೇ ಭಾವಿಸಲಾಗಿತ್ತು. ಬಿಜೆಪಿ ಇಲ್ಲಿ ಸುಲಭ ಗೆಲುವು ಸಾಧಿಸುತ್ತದೆ ಎಂದು ಎಣಿಸಲಾಗಿತ್ತು, ಆದರೆ ಇದೇ ಕ್ಷೇತ್ರದಲ್ಲಿ ಈಗ ಸಮಾಜವಾದಿ ಪಕ್ಷದ ಅಭ್ಯರ್ಥಿ ಮುನ್ನಡೆ ಪಡೆದುಕೊಂಡಿದ್ದಾರೆ.
ಬೆಳಗ್ಗೆ 10.45ರ ವೇಳೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವದೇಶ್ ಪ್ರಸಾದ್ 4791 ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ.












Click it and Unblock the Notifications