ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ದಿನಾಂಕ ಪ್ರಕಟ

ನವದೆಹಲಿ, ಮಾರ್ಚ್‌ 12: ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯು ಮಾರ್ಚ್‌ 18ಕ್ಕೆ ಅಂತಿಮಗೊಳಿಸಲಿದೆ.

ಅಭ್ಯರ್ಥಿ ಆಯ್ಕೆ ವಿಷಯವಾಗಿ ಸರಣಿ ಸಭೆಗಳನ್ನು ಬಿಜೆಪಿ ನಡೆಸುತ್ತಿದ್ದು, ಎಲ್ಲ ರಾಜ್ಯಗಳ ಬಿಜೆಪಿ ಮುಖಂಡರು ಕೆಲವು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಅವರೊಂದಿಗೆ ಆಕಾಂಕ್ಷಿಗಳು ಸಹ ಕೊನೆ ಕ್ಷಣದ ಲಾಭಿಯಲ್ಲಿ ನಿರತರಾಗಿದ್ದಾರೆ.

ಬಿಜೆಪಿಯ ಚುನಾವಣಾ ಸಮಿತಿಯು ಮಾರ್ಚ್‌ 18 ಕ್ಕೆ ಸಭೆ ಸೇರಲಿದ್ದು, ಅಂದು ಅಂತಿಮ ಸುತ್ತಿನ ಮಾತುಕತೆ ನಡೆಸಿ ಅಂದೇ ಎಲ್ಲ ರಾಜ್ಯದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ.

ಮಾರ್ಚ್‌ 19 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗುತ್ತಿರುವ ಕಾರಣ ಬಿಜೆಪಿಯು ಅಭ್ಯರ್ಥಿ ಆಯ್ಕೆ ಕಾರ್ಯಕ್ಕೆ ವೇಗ ನೀಡಿದೆ. ಯಡಿಯೂರಪ್ಪ ಅವರು ಈಗಾಗಲೇ ಎರಡು ಸುತ್ತಿನ ಮಾತುಕತೆಯನ್ನು ಬಿಜೆಪಿ ಹೈಕಮಾಂಡ್ ಜೊತೆ ಮಾಡಿದ್ದಾರೆ.

ಇನ್ನೆರಡು ದಿನದಲ್ಲಿ ಪಟ್ಟಿ ಅಂತಿಮ

ಇನ್ನೆರಡು ದಿನದಲ್ಲಿ ಪಟ್ಟಿ ಅಂತಿಮ

ರಾಜ್ಯದ ಅಭ್ಯರ್ಥಿಗಳ ಪಟ್ಟಿಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ. ಆದರೆ ಅಧಿಕೃತವಾಗಿ ಮಾರ್ಚ್‌ 18ರಂದೇ ಪಟ್ಟಿ ಘೋಷಣೆ ಆಗಲಿದೆ. ಯಡಿಯೂರಪ್ಪ ಅವರು ತಮ್ಮ ಪಟ್ಟಿಯನ್ನು ಬಿಜೆಪಿಗೆ ನೀಡಿದ್ದಾರೆ. ಆರ್‌ಎಸ್‌ಎಸ್‌ ಸಹ ತನ್ನ ಪಟ್ಟಿಯನ್ನು ಬಿಜೆಪಿಗೆ ನೀಡಿದೆ ಎನ್ನಲಾಗಿದೆ.

ಕೆಲವು ಹಾಲಿ ಸಂಸದರಿಗೆ ಟಿಕೆಟ್ ಇಲ್ಲ

ಕೆಲವು ಹಾಲಿ ಸಂಸದರಿಗೆ ಟಿಕೆಟ್ ಇಲ್ಲ

ರಾಜ್ಯದಲ್ಲಿ ಈ ಬಾರಿ ಕೆಲವು ಹಾಲಿ ಸಂಸದರು ಅವಕಾಶ ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದ್ದು, ಕೆಲವರಿಗೆ ಕ್ಷೇತ್ರ ಬದಲಾವಣೆ ಸಹ ಮಾಡಲಾಗುತ್ತದೆ. ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಯಾವುದೇ ಶಾಸಕರಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಲಾಗುವುದಿಲ್ಲ ಎಂದು ಖಡ್ಡಾಯವಾಗಿ ಬಿಜೆಪಿ ಹೈಕಮಾಂಡ್ ಸೂಚಿಸಿದೆ.

ಎಚ್ಚರಿಕೆಯಿಂದ ಅಭ್ಯರ್ಥಿಗಳ ಆಯ್ಕೆ

ಎಚ್ಚರಿಕೆಯಿಂದ ಅಭ್ಯರ್ಥಿಗಳ ಆಯ್ಕೆ

ಜೆಡಿಎಸ್-ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಚುನಾವಣೆ ಎದುರಿಸುತ್ತಿರುವ ಕಾರಣ ಬಿಜೆಪಿಯು ಎಚ್ಚರಿಕೆಯಿಂದ ಪ್ರತಿ ಹೆಜ್ಜೆಗಳನ್ನು ಇಡಬೇಕಾದ ಒತ್ತಡದಲ್ಲಿದೆ. ಹಾಗಾಗಿಯೇ ಆಂತರಿಕ ಸಮೀಕ್ಷೆ, ಕಾರ್ಯಕರ್ತರು, ಸ್ಥಳೀಯ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ಎಚ್ಚರಿಕೆಯಿಂದ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಮಾರ್ಚ್‌ 19 ಕ್ಕೆ ನಾಮಪತ್ರ ಸಲ್ಲಿಕೆ ಪ್ರಾರಂಭ

ಮಾರ್ಚ್‌ 19 ಕ್ಕೆ ನಾಮಪತ್ರ ಸಲ್ಲಿಕೆ ಪ್ರಾರಂಭ

ಮಾರ್ಚ್‌ 19 ಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್‌ 11 ರಿಂದ ಮೊದಲ ಹಂತದ ಮತದಾನ ಪ್ರಾರಂಭವಾಗಲಿದೆ. ಏಪ್ರಿಲ್ 18 ಮತ್ತು ಏಪ್ರಿಲ್ 23 ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಮೇ 23 ರಂದು ದೇಶದಾದ್ಯಂತ ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+