ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬೆನ್ನಲ್ಲೇ ಮಹಾರಾಷ್ಟ್ರಕ್ಕೆ ಬಿಗ್ ಪ್ರಾಜೆಕ್ಟ್ ಘೋಷಿಸಿದ ಕೇಂದ್ರ ಸರ್ಕಾರ
Bigg Project: ನವೆಂಬರ್ 20ರಂದು ಮಹಾರಾಷ್ಟ್ರದಲ್ಲಿ 288 ವಿಧಾನಸಭೆ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಿದ್ದು, ಬಿಜೆಇ ಭರ್ಜರಿ ಗೆಲುವು ಸಾಧಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ರಾಜ್ಯಕ್ಕೆ ದೊಡ್ಡ ಯೋಜನೆಯೊಂದನ್ನು ಘೋಷಣೆ ಮಾಡಿದೆ. ಸಂಪೂರ್ಣ ಮಾಹಿತಿ ವಿವರ ಇಲ್ಲಿದೆ ತಿಳಿಯಿರಿ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮೂರು ಮೆಗಾ ರೈಲು ಯೋಜನೆಗಳನ್ನು ಘೋಷಣೆ ಮಾಡಿದೆ. ಹಾಗಾದರೆ ಯಾವ್ಯಾವ ಮಾರ್ಗಗಳಿಗೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಈ ಬಗ್ಗೆ ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್, ಮುಂಬೈಗೆ 300 ಹೊಸ ರೈಲು, ವಸಾಯಿಯಲ್ಲಿ ಮೆಗಾ ರೈಲು ಟರ್ಮಿನಲ್ ಅನುಮೋದನೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಈ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಇನ್ನು ಮಹಾರಾಷ್ಟ್ರದ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಮುಖ ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಮುಂಬೈ ಸೆಂಟ್ರಲ್‌ನ ಪರೇಲ್, ಎಲ್‌ಟಿಟಿ, ಕಲ್ಯಾಣ್ ಮತ್ತು ಪನ್‌ವೆಲ್‌ನಲ್ಲಿನ ಟರ್ಮಿನಲ್‌ಗಳ ಸಾಮಾರ್ಥ್ಯವನ್ನು ಹೆಚ್ಚಿಸಲು ಪೂರ್ವಾಂಚಲ್‌ನಿಂದ ಮುಂಬೈಗೆ ಹೊಸ ಕಾರಿಡಾರ್ ಅನ್ನು ಸಂಪರ್ಕಿಸಲು ಕೇಂದ್ರ ರೈಲ್ವೆಯ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.
ಮುಂಬೈ ಸೆಂಟ್ರಲ್, ಬಾಂದ್ರಾ ಟರ್ಮಿನಲ್‌ಗಳ ಸಾಮಾರ್ಥ್ಯವನ್ನು ಹೆಚ್ಚಿಸಲು ಜೋಗೇಶ್ವರಿಯಲ್ಲಿ ಹೊಸ ಟರ್ಮಿನಲ್ ಸ್ಥಾಪನೆಗೆ ಮುಂದಾಗಿದೆ. ಅಲ್ಲದೆ, ವಸಾಯಿಯಲ್ಲಿ ಹೊಸ ಮೆಗಾ ರೈಲು ಟರ್ಮಿನಲ್ ಜೊತೆಗೆ 300 ಹೊಸ ರೈಲುಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳು ಮುಂಬೈನ ಲಕ್ಷಾಂತರ ಜನರ ಪ್ರಯಾಣವನ್ನು ಆರಾಮದಾಯಕವಾಗಿಸುವುದಾಗುದೆ. ಅಲ್ಲದೆ, ಈ ವಲಯದಲ್ಲಿ ವ್ಯಾಪಾರ, ಸಂಚಾರ ಸಂಪರ್ಕವನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.
ಅನುದಾನ ಒದಗಿಸಲು ರಾಜ್ಯ ಸರ್ಕಾರ ಒಪ್ಪಿಗೆ: ಬೆಂಗಳೂರಿನ ಬಹುನಿರೀಕ್ಷಿತ ಯೋಜನೆಗಳಲ್ಲಿ ಉಪನಗರ ರೈಲು ಯೋಜನೆ ಒಂದಾಗಿದೆ. ಈ ಕಾಮಗಾರಿಯನ್ನು ಬೇಗ ಮುಗಿಸುವಂತೆ ಈಗಾಗಲೇ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯ ಸರ್ಕಾರಕ್ಕೆ ಈ ಹಿಂದೆಯೇ ಸೂಚನೆ ನೀಡಿದ್ದರು. ಇದಕ್ಕೆ ಅನುದಾನದ ಕೊರತೆಯೂ ಒಂದು ಕಾರಣವಾಗಿತ್ತು ಎನ್ನಲಾಗಿದೆ. ಇದೀಗ ರಾಜ್ಯದಿಂದಲೂ ಅನುದಾನ ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ಬೆಂಗಳೂರು ಉಪನಗರ ರೈಲು ಯೋಜನೆಗೆ 306 ರೈಲು ಕೋಚ್‌ಗಳ ಖರೀದಿಗೆ ರಾಜ್ಯದ ಪಾಲು 2,135 ಕೋಟಿ ರೂಪಾಯಿ ಒದಗಿಸುವ ಪ್ರಸ್ತಾಪಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಒದಗಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ ಅವರು, ಮುಂದಿನ 5 ವರ್ಷಗಳಲ್ಲಿ 306 ಕೋಚ್‌ಗಳನ್ನು ಖರೀದಿ ಮಾಡಲಿ ಈ ಮೊತ್ತವನ್ನು ಕೆಆರ್‌ಐಡಿಇಗೆ ಒದಗಿಸಲಾಗುತ್ತದೆ. ಒಟ್ಟು ಈ ಯೋಜನೆಗೆ ಅಂದಾಜು ಮೊತ್ತ 4,300 ಕೋಟಿ ರೂಪಾಯಿ ಆಗಿದ್ದು, ರಾಜ್ಯದಿಂದ 2,135 ಕೋಟಿ ರೂಪಾಯಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಈ ವೇಳೆ 9 ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ತಿದ್ದುಪಡಿ ವಿಧೇಯಕಕ್ಕೂ ಸಂಪುಟದಲ್ಲಿ ಅಸ್ತು ನೀಡಲಾಗಿದೆ.












Click it and Unblock the Notifications