ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಯದ್ದೇ ಮೈಲುಗೈ!
ಚಂಡೀಗಢ ಜನವರಿ 30: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ಮೈತ್ರಿಕೂಟದೊಂದಿಗೆ ಬಿಗ್ ಫೈಟ್ ನೀಡಿದ ಬಿಜೆಪಿ ಕೊನೆಗೂ ಜಯ ಗಳಿಸಿದೆ.
ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮನೋಜ್ ಶಂಕರ್ (Manoj Sonkar) ಭರ್ಜರಿ ಜಯ ಗಳಿಸಿದ್ದಾರೆ. ಮಜೋಜ್ ಶಂಕರ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಕುಲದೀಪ್ ಕುಮಾರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ನಡುವಿನ ಮೈತ್ರಿಗೆ ಬಿಜೆಪಿ ವಿರುದ್ಧವಾಗಿ ಸ್ಪರ್ಧಿಸಿ ಜಯಗಳಿಸಿದೆ.

ಮನೋಜ್ ಶಂಕರ್ ಅವರು 16 ಮತಗಳನ್ನು ಪಡೆದರೆ, ಕುಲದೀಪ್ ಕುಮಾರ್ 12 ಮತಗಳನ್ನು ಗಳಿಸಿದರು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಬಿಜೆಪಿ 35 ಸ್ಥಾನಗಳಲ್ಲಿ 14 ಕೌನ್ಸಿಲರ್‌ಗಳನ್ನು ಹೊಂದಿದ್ದು, 13 ಕೌನ್ಸಿಲರ್‌ಗಳನ್ನು ಹೊಂದಿದ್ದ ಎಎಪಿ ಮತ್ತು 7 ಮಂದಿ ಕಾಂಗ್ರೆಸ್ ಅನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ.
ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ, ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿಯನ್ನು ವಂಚನೆಯ ಪಕ್ಷ ಎಂದು ಆರೋಪಿಸಿದರು. ಜೊತೆಗೆ ಚುನಾವಣೆಯಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದರು. 'ಈ ಜನರು ಮೇಯರ್ ಚುನಾವಣೆಯಲ್ಲಿ ಈ ಮಟ್ಟಕ್ಕೆ ಇಳಿಯಲು ಸಾಧ್ಯವಾದರೆ, ಅವರು ರಾಷ್ಟ್ರೀಯ ಚುನಾವಣೆಯಲ್ಲಿ ಯಾವ ಮಟ್ಟಕ್ಕೂ ಹೋಗಬಹುದು. ಇದು ತುಂಬಾ ಕಳವಳಕಾರಿಯಾಗಿದೆ' ಎಂದು ದೆಹಲಿ ಸಿಎಂ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
चंडीगढ़ मेयर चुनाव में दिन दहाड़े जिस तरह से बेईमानी की गई है, वो बेहद चिंताजनक है। यदि एक मेयर चुनाव में ये लोग इतना गिर सकते हैं तो देश के चुनाव में तो ये किसी भी हद तक जा सकते हैं। ये बेहद चिंताजनक है।
— Arvind Kejriwal (@ArvindKejriwal) January 30, 2024
ಹೈಕೋರ್ಟ್‌ನ ಆದೇಶದ ಮೇರೆಗೆ ಇಂದು ಬೆಳಗ್ಗೆ 10 ಗಂಟೆಗೆ ಚುನಾವಣೆ ಆರಂಭವಾಯಿತು. ಎಎಪಿ-ಕಾಂಗ್ರೆಸ್ ಮೈತ್ರಿಕೂಟವು ಒಪ್ಪಂದದಿಂದ ವಿವಿಧ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿತ್ತು. ಎಎಪಿಯನ್ನು ಪ್ರತಿನಿಧಿಸುವ ಕುಮಾರ್ ಅವರು ಮೇಯರ್ ಹುದ್ದೆಗೆ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಉಪಮೇಯರ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಹಿರಿಯ ಉಪಮೇಯರ್ ಹುದ್ದೆಗೆ ಬಿಜೆಪಿಯ ಕುಲ್ಜೀತ್ ಸಂಧು ಅವರು ಕಾಂಗ್ರೆಸ್‌ನ ಗುರುಪ್ರೀತ್ ಸಿಂಗ್ ಗಾಬಿ ವಿರುದ್ಧ ಮುಖಾಮುಖಿಯಾಗಿದ್ದು, ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ರಾಜಿಂದರ್ ಶರ್ಮಾ ಮತ್ತು ಕಾಂಗ್ರೆಸ್‌ನ ನಿರ್ಮಲಾ ದೇವಿ ನಡುವೆ ಪೈಪೋಟಿ ನಡೆದಿದೆ. ಈ ಸ್ಪರ್ಧೆಗಳ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ.












Click it and Unblock the Notifications