ತ್ರಿಪುರಾ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು
ನವದೆಹಲಿ, ಜೂನ್ 26: ತೀವ್ರ ಕುತೂಹಲ ಕೆರಳಿಸಿದ್ದ ಉಪಚುನಾವಣೆಯಲ್ಲಿ ತ್ರಿಪುರಾ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ತ್ರಿಪುರಾ ರಾಜ್ಯದ ಅಗರ್ತಲಾ, ಜುಬರಾಜನಗರ, ಸುರ್ಮಾ ಮತ್ತು ಟೌನ್ ಬರ್ಡೋವಾಲಿ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು.
ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಮಂದರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡುತ್ತಿದೆ. ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಗಂಗೋತ್ರಿ ಕುಜೂರ್ ಸ್ಫರ್ಧಿಸಿದ್ದಾರೆ. ಆಡಳಿತಾರೂಢ ಜೆಎಂಎಂ ನೇತೃತ್ವದ ಒಕ್ಕೂಟದ ಸಾಮಾನ್ಯ ಅಭ್ಯರ್ಥಿಯಾಗಿ ಅನರ್ಹ ಶಾಸಕ ಬಂಧು ಟಿರ್ಕಿ ಪುತ್ರಿ ಶಿಲ್ಪಿ ನೇಹಾ ಟಿರ್ಕಿ ಕಾಂಗ್ರೆಸ್ ಪರವಾಗಿ ಕಣಕ್ಕಿಳಿದಿದ್ದಾರೆ.
ಸಿಂಗೂರ್ ಲೋಕಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ತೀವ್ರ ಪೈಪೋಟಿ ಎದುರಿಸುತ್ತಿದೆ. ಅಕಾಲಿಯ ಅಮೃತಸರ ಮುಖ್ಯಸ್ಥ ಸಿಮ್ರಂಜಿತ್ ಸಿಂಗ್ ಮಾನ್ ಇಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆಂಧ್ರಪ್ರದೇಶದ ಆತ್ಮಕೂರು ವಿಧಾನಸಭಾ ಕ್ಷೇತ್ರದಲ್ಲಿ ವೈಎಸ್‌ಆರ್ ಕಾಂಗ್ರೆಸ್‌ಗೆ ಭಾರಿ ಮುನ್ನಡೆ ಸಿಕ್ಕಿದೆ. ಇಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ.
ದೆಹಲಿಯ ರಾಜಿಂದರ್ ನಗರದಲ್ಲಿ ಎಎಪಿಯ ದುರ್ಗೇಶ್ ಪಾಠಕ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ರಾಜೇಶ್ ಭಾಟಿಯಾ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರೇಮ್ ಲತಾ ಕಣಕ್ಕಿಳಿದಿದ್ದಾರೆ.

ಅಜಂಗಢ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಭೋಜ್‌ಪುರಿ ನಟ-ಗಾಯಕ, ದಿನೇಶ್ ಲಾಲ್ ಯಾದವ್ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಬಹುಜನ ಸಮಾಜ ಪಕ್ಷದಿಂದ ಶಾ ಆಲಂ ಸ್ಪರ್ಧಿಸಿದ್ದರು.












Click it and Unblock the Notifications