ನಾಗ್ಪುರದಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಕುಟುಂಬಸ್ಥರ ಬರ್ಬರ ಹತ್ಯೆ
ನಾಗ್ಪುರ, ಜೂನ್ 11: ಓರ್ವ ಬಿಜೆಪಿ ಕಾರ್ಯಕರ್ತ ಮತ್ತು ಆತನ ಕುಟುಂಬದ ನಾಲ್ವರು ಸದಸ್ಯರು ಕೊಲೆಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ನಾಗ್ಪುರದ ಆರಾಧನ ನಗರ ಎಂಬಲ್ಲಿ ಘಟನೆ ನಡೆದಿದ್ದು, ಮೃತ ಬಿಜೆಪಿ ಕಾರ್ಯಕರ್ತನನ್ನು ಕಮಲಾಕರ್ ಪವನ್ಕರ್ ಎಂದು ಗುರುತಿಸಲಾಗಿದೆ.
ಹತ್ಯೆಗೆ ರಾಜಕೀಯ ಅಥವಾ ವೈಯಕ್ತಿಕ ದ್ವೇಷ ಕಾರಣವೆ ಎಂಬ ಕುರಿತು ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಆರೋಪಿಗಳ ಕುರಿತೂ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಕಮಲಾಕರ್ ಪವನ್ಕರ್ ಆತನ ಪತ್ನಿ, ತಾಯಿ ಮತ್ತು ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications