• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಣಿಪುರದಲ್ಲಿ ಬಿಜೆಪಿ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

|
Google Oneindia Kannada News

ನವದೆಹಲಿ, ಜನವರಿ 24: ಮಾಜಿ ಸೈನಿಕರ ಕೋಶದ ರಾಜ್ಯ ಸಂಚಾಲಕ ಹಾಗೂ ಬಿಜೆಪಿ ಕಾರ್ಯಕರ್ತ ಎನ್ನಲಾದ ಎಲ್.ರಾಮೇಶ್ವರ್ ಸಿಂಗ್ ಅವರನ್ನು ಮಂಗಳವಾರ ತೌಬಲ್ ಕ್ಷೇತ್ರ ಲೈಕೈಯಲ್ಲಿರುವ ಅವರ ನಿವಾಸದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಸೈನಿಕರ ಪ್ರಕೋಷ್ಠದ ರಾಜ್ಯ ಸಂಚಾಲಕ ಎಲ್.ರಾಮೇಶ್ವರ್ ಸಿಂಗ್ ಅವರ ಹತ್ಯೆಯ ಬಗ್ಗೆ ತಿಳಿದು ದುಃಖವಾಯಿತು. ಈ ಅಮಾನವೀಯ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘೋರ ಅಪರಾಧ ಎಸಗಿದ ಆರೋಪಿಗಳನ್ನು ನ್ಯಾಯಾಂಗದ ಮುಂದೆ ತಂದು ತಕ್ಕ ಶಿಕ್ಷೆ ನೀಡಬೇಕು. ನಾವು ಸಮರ್ಪಿತ ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ ಎಂದು ಬಿಜೆಪಿ ಮಣಿಪುರ ಟ್ವೀಟ್ ಮಾಡಿದೆ.

ಹಿಂದಿ ಪ್ರಚಾರ ಸಭಾದ ಮಾಜಿ ಅಧ್ಯಕ್ಷನ ವಿರುದ್ಧ ಸಿಬಿಐ ಎಫ್‌ಐಆರ್ ಹಿಂದಿ ಪ್ರಚಾರ ಸಭಾದ ಮಾಜಿ ಅಧ್ಯಕ್ಷನ ವಿರುದ್ಧ ಸಿಬಿಐ ಎಫ್‌ಐಆರ್

ಎದೆಗೆ ಗುಂಡು ತಗುಲಿದ 50 ವರ್ಷದ ಸಿಂಗ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೃತರಾದರು ಎಂದು ತಿಳಿದು ಬಂದಿದೆ. ಈ ಬಗ್ಗೆ ನಾವು ಈ ಕ್ಷಣದಲ್ಲಿ ಇದರ ಹಿಂದೆ ಯಾರಿದ್ದಾರೆ ಎಂದು ಹೇಳುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ಮಣಿಪುರದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾವುದೇ ನೋಂದಣಿ ಸಂಖ್ಯೆ ಇಲ್ಲದ ಎಸ್‌ಯುವಿ ಕಾರಿನಲ್ಲಿ ಬಂದ ಮೂವರು ಬಂದೂಕುಧಾರಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಆದರೆ ಪೊಲೀಸರ ಪ್ರಕಾರ ಇಬ್ಬರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬಿಜೆಪಿ ನಾಯಕನ ನಿವಾಸದ ಬಳಿ ಎರಡು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದರು. ರಾಮೇಶ್ವರ್ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿಗಳನ್ನು ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತೌಬಲ್ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

English summary
L.Rameshwar Singh, who is said to be the state coordinator of ex-servicemen's cell and a BJP activist, was shot dead by unknown assailants at his residence in Laikai, Thoubal constituency on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X