ಉ.ಪ್ರ.ದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ
ಮೋರ್ದಾಬಾದ್, ಅಕ್ಟೋಬರ್ 5: ಉತ್ತರ ಪ್ರದೇಶದ ಮೋರ್ದಾಬಾದ್ ನಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ನಿನ್ನೆ(ಸೆಪ್ಟೆಂಬರ್ 4) ರಾತ್ರಿ ನಡೆದಿದೆ.
ಇಲ್ಲಿನ ಬಿಜೆಪಿ ಕಾರ್ಯಕರ್ತ ದೀಪಕ್ ಎನ್ನುವವರ ಮೇಲೆ ದಾಳಿ ನಡೆದಿದ್ದು, ಬೈಕಿನಲ್ಲಿ ಬಂದ ಮೂವರು ಅಪರಿಚಿತರು ದಾಳಿ ನಡೆಸಿದ್ದರು. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಗಂಭಿರ ಸ್ಥಿತಿಯಲ್ಲಿದ್ದಾರೆ.

ಈ ಸಂಪೂರ್ಣ ಘಟನೆಯೂ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸಿಸಿಟಿವಿ ಫೂಟೇಜ್ ಮೂಲಕ ತಾವು ಅಪರಾಧಿಗಳು ಯಾರೆಂಬುದನ್ನು ಈಗಾಗಲೇ ಪತ್ತೆ ಮಾಡಿದ್ದು, ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದಿದ್ದಾರೆ.












Click it and Unblock the Notifications