ದೇಶದ ಹೆಸರನ್ನೇ ಬದಲಾಯಿಸಲು ಹೊರಟಿದೆಯಾ ಕೇಂದ್ರ ಸರ್ಕಾರ?

ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಕೇಂದ್ರದ ವಿರುದ್ಧ ಹೊಸ ವಾಗ್ದಾಳಿ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿರುವ ಜಿ20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನಿಸುವ ಪತ್ರಿಕೆಯಲ್ಲಿ 'ಪ್ರೆಸಿಡೆಂಟ್ ಆಫ್ ಇಂಡಿಯಾ' ಎಂದು ಬರೆಯುವ ಬದಲು 'ಪೆಸಿಡೆಂಟ್ ಆಫ್ ಭಾರತ್' ಎಂದು ಬರೆಯಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಷ್ಟ್ರಪತಿ ಭವನವು ಸೆಪ್ಟಂಬರ್ 9 ರಂದು G20 ಔತಣಕೂಟಕ್ಕೆ ಆಹ್ವಾನ ಪತ್ರಿಕೆಯಲ್ಲಿ 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲು 'ಪೆಸಿಡೆಂಟ್ ಆಫ್ ಭಾರತ್' ಅಂತ ಹೆಸರಿನಲ್ಲಿ ಆಹ್ವಾನವನ್ನು ಕಳುಹಿಸಿದೆ ಎಂದು ಜೈರಾಮ್ ರಮೇಶ್ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

BJP wrote president of Bharat in G20 dinner invitation: Congress outraged

ಪ್ರಧಾನಿ ನರೇಂದ್ರ ಮೋದಿ ಅವರು INDIA ವನ್ನು 'ಭಾರತ್' ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಸಂಸತ್ ಭವನದಲ್ಲಿ ನಿರ್ಣಯವನ್ನು ಪ್ರಧಾನಿ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಸಂಸತ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯ, ಶೂನ್ಯ ಸಮಯ ಮತ್ತು ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಡೆಯುವ ಅಧಿವೇಶನಗಳಿಗೆ ಇದನ್ನು ನಿರ್ವಹಿಸಲಾಗುತ್ತದೆ.

BJP wrote president of Bharat in G20 dinner invitation: Congress outraged

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ರಚಿಸಿಕೊಂಡಿರುವ ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟಿರುವುದರಿಂದ ದೇಶದ ಹೆಸರನ್ನು ಭಾರತ್ ಎಂದು ಮರು ನಾಮಕರಣ ಮಾಡಲು ಪ್ರಧಾನಿ ಮುಂದಾಗಿದ್ದಾರೆ. ಆದರೆ ಇನ್ನೂ ಇದರ ಘೋಷಣೆಯಾಗದೇ ಆಮಂತ್ರಣ ಪತ್ರಿಕೆಯಲ್ಲಿ ಹೆಸರನ್ನು ಹಾಕಿರುವುದನ್ನು ಕಾಂಗ್ರೆಸ್ ಖಂಡಿಸಿದೆ.

ವಿಪಕ್ಷಗಳ ಮೈತ್ರಿಕೂಟ INDIA
2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿ ಕೂಟದ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿರುವ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ 'I-N-D-I-A' ಎಂಬ ಹೊಸ ಹೆಸರು ಇಟ್ಟಿವೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳ ಒಕ್ಕೂಟದ ಸಭೆಯಲ್ಲಿ ತಮ್ಮ ಒಕ್ಕೂಟ ಹೊಸ ಹೆಸರನ್ನು ಅಂತಿಮಗೊಳಿಸಲಾಗಿದೆ. ವಿಪಕ್ಷ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದ 26 ರಾಜಕೀಯ ಪಕ್ಷಗಳ ನಾಯಕರು ಈ ಹೊಸ ಹೆಸರಿಗೆ ಸಮ್ಮತಿ ಸೂಚಿಸಿದ್ದಾರೆ. ಅಷ್ಟೇ ಅಲ್ಲ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ಕುರಿತಾಗಿ ರಣ ತಂತ್ರ ಸಜ್ಜಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+