ಕಪ್ಪು ಹಣ ಇಟ್ಟವರ ರಕ್ಷಿಸಲು ಹೊರಟಿತೆ ಕೇಂದ್ರ ಸರ್ಕಾರ?
ನವದೆಹಲಿ, ಅ. 17 : ಇತ್ತ ಅಕ್ರಮ ಆಸ್ತಿಗಳಿಕೆ ಸಂಬಂಧ ಶಿಕ್ಷೆಗೊಳಗಾಗಿದ್ದ ಜಯಲಲಿತಾಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರೆ, ಅತ್ತ ಕೇಂದ್ರ ಸರ್ಕಾರ ವಿದೇಶದಲ್ಲಿ ಕಪ್ಪುಹಣ ಇಟ್ಟವರ ಹೆಸರನ್ನು ಯಾವ ಕಾರಣಕ್ಕೂ ಬಹಿರಂಗ ಮಾಡಬಾರದು ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಶುಕ್ರವಾರ ಮನವಿಯೊಂದನ್ನು ಸಲ್ಲಿಸಿದೆ. ಇದನ್ನು ಕೇಂದ್ರ ಸರ್ಕಾರದ ಇಬ್ಬಗೆಯ ನೀತಿ ಎಂದೇ ವಿಶ್ಲೇಷಿಸಲಾಗಿದೆ.
ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿರಿಯ ವಕೀಲ ರಾಮ್ ಜೇಠ್ಮಲಾನಿ, ಒಂದು ಕಡೆ ನರೇಂದ್ರ ಮೋದಿ ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರುತ್ತೇನೆ ಎಂದು ಹೇಳುತ್ತಿದ್ದಾರೆ. ಇನ್ನೊಂದು ಕಡೆ ಕೇಂದ್ರ ಸರ್ಕಾರವೇ ಹಣ ಇಟ್ಟವರ ಹೆಸರು ಬಹಿರಂಗ ಮಾಡದಂತೆ ಮನವಿ ಮಾಡಿಕೊಳ್ಳುತ್ತದೆ. ಯಾಕೆ ಈ ರೀತಿಯ ಇಬ್ಬಗೆಯ ನೀತಿ ಅನುಸರಿಸಲಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.[ಕಪ್ಪು ಹಣ: ಮಾಹಿತಿ ಹಂಚಿಕೆಗೆ ಕೊನೆಗೂ ಒಪ್ಪಿಗೆ]

ಈ ರೀತಿಯ ಮನವಿಗಳು ಭ್ರಷ್ಟರಿಗೆ ಮತ್ತಷ್ಟು ಹಣ ಮಾಡಿಕೊಳ್ಳುವಂತೆ ಪ್ರೆರೇಪಿಸುತ್ತವೆ. ನಾಗರಿಕರ ಹಣ ಲೂಟಿ ಹೊಡೆಯುತ್ತಿರುವವರಿಗೆ ಮತ್ತೆ ಯಾವುದೇ ಅಂಕುಶ ಇಲ್ಲದಂತಾಗುತ್ತದೆ ಎಂದು ವಿಷಾದಿಸಿದ್ದಾರೆ. ಕೇಂದ್ರ ಸರ್ಕಾರದ ಈ ಮನವಿಯನ್ನು ಅಕ್ಟೋಬರ್ 28ರಂದು ಸುಪ್ರೀಂ ಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳಲಿದೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಜೇಠ್ಮಲಾನಿ, ಪ್ರಧಾನಿ ಮೋದಿ ಈ ಬಗ್ಗೆ ವಿಶೇಷ ಗಮನ ನೀಡಬೇಕಿದೆ. ಮೋದಿಗೆ ಪತ್ರವೊಂದನ್ನು ಬರೆದು ಇಂಥ ಮನವಿಯನ್ನು ಹಿಂದಕ್ಕೆ ಪಡೆಯುವಂತೆ ಕೋರುತ್ತೇನೆ ಎಂದು ಹೇಳಿದ್ದಾರೆ.[ದೇಶದಲ್ಲಿ 1 ಲಕ್ಷ ಕೋಟಿ ಕಪ್ಪು ಹಣ ಪತ್ತೆ]
ಸ್ವಿಸ್ ಬ್ಯಾಂಕ್ ನಲ್ಲಿ ಹಣ ಇಟ್ಟಿರುವ ಭಾರತೀಯರ ಹೆಸರುಗಳನ್ನು ನೀಡುವುದಾಗಿ ಬ್ಯಾಂಕ್ ಅಧಿಕಾರಿಗಳು ಹೇಳಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸರ್ಕಾರ ಹೆಸರು ಬಹಿರಂಗ ಮಾಡದಂತೆ ಸುಪ್ರೀಂಗೆ ಮನವಿ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications