ಕಪ್ಪುಹಣ ಪ್ರಕರಣ: ಚಿದಂಬರಂ ಪತ್ನಿ, ಮಗನಿಗೆ ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ, ಏಪ್ರಿಲ್ 16: ಕಪ್ಪು ಹಣ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪಿ. ಚಿದಂಬರಂ ಅವರ ಪತ್ನಿ ನಳಿನಿ ಮತ್ತು ಮಗ ಕಾರ್ತಿ ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.

ಕಪ್ಪುಹಣ ಆರೋಪ ಪ್ರಕರಣದಲ್ಲಿ ನಳಿನಿ ಮತ್ತು ಕಾರ್ತಿ ಅವರ ವಿರುದ್ಧದ ಅಪರಾಧ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಐಟಿ ಇಲಾಖೆಯ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅದಕ್ಕೆ ಪ್ರತಿಕ್ರಿಯೆ ನೀಡುವಂತೆ ಪಿ. ಚಿದಂಬರಂ ಅವರ ಪತ್ನಿ ನಳಿನಿ ಮತ್ತು ಮಗ ಕಾರ್ತಿಗೆ ನೋಟಿಸ್ ನೀಡಿದೆ.

2018ರಲ್ಲಿ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆಯಾಜ್ಞೆ ಕೊಡುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಮನವಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಒಳಗೊಂಡ ನ್ಯಾಯಪೀಠ, ಇಬ್ಬರಿಗೂ ನೋಟಿಸ್ ಜಾರಿ ಮಾಡಿತು.

Black money case Supreme Court issues notice Congress leader P Chidambaram wife nalini, son karti

ಚಿದಂಬರಂ ಅವರ ಪತ್ನಿ ಮತ್ತು ಮಗ ಹಾಗೂ ಸೊಸೆ ಶ್ರೀನಿಧಿ ಅವರು ವಿದೇಶಿ ಬ್ಯಾಂಕುಗಳಲ್ಲಿನ ಹಣ ಮತ್ತು ಸಂಪತ್ತಿನ ಕುರಿತು ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಅದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸಿಕೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+