ವಿದೇಶಕ್ಕೆ ತೆರಳಲು ಸಲ್ಮಾನ್ ಗೆ ಕೋರ್ಟ್ ಅನುಮತಿ

ನವದೆಹಲಿ, ಏಪ್ರಿಲ್ 17: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದ ಬಾಲಿವುಡ್ ನಟ ಸಲ್ಮಾನ್ ಖಾನ್ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮನ್ನಿಸಿದ ನ್ಯಾಯಾಲಯ, ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ.

ಕೆಲವು ವೈಯಕ್ತಿಕ ಕಾರಣಗಳಿಂದ ನಾಲ್ಕು ದೇಶಗಳಿಗೆ ತೆರಳಬೇಕಿದೆ ಎಂದು ಅರ್ಜಿಯಲ್ಲಿ ತಿಳಿಸಿರುವ ಖಾನ್, ಕೋರ್ಟಿನ ಅನುಮತಿ ಕೇಳಿದ್ದರು.

1998 ರಲ್ಲಿ ಚಿತ್ರೀಕರಣವೊಂದರ ಸಮಯದಲ್ಲಿ ಕೃಷ್ಣಮೃಗವನ್ನು ಕೊಂದ ಆರೋಪದ ಮೇಲೆ ಜೋಧಪುರ ನ್ಯಾಯಾಲಯ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ಪರಿಗಣಿಸಿ, ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ನಂತರ ಜೋಧಪುರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

Blackbuck case: Court grants permission to Salman Khan to travel outside India

25,000 ರೂಪಾಯಿ ಮೊತ್ತದ ಎರಡು ವೈಯಕ್ತಿಕ ಬಾಂಡ್ , ಸಿನಿಮಾ ಚಿತ್ರೀಕರಣ ಅಥವಾ ಇತರೆ ವೈಯಕ್ತಿಕ ಕಾರಣಗಳಿಗಾಗಿ ವಿದೇಶಕ್ಕೆ ತೆರಳಬೇಕೆಂದರೆ ನ್ಯಾಯಾಲಯದಿಂದ ಅನುಮತಿ ಪಡೆಯುವುದು ಎಂಬ ಷರತ್ತಿನ ಮೇಲೆ ಅವರಿಗೆ ಜಾಮೀನು ನೀಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+