ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ದೋಷಿ
Recommended Video

ಬೆಂಗಳೂರು, ಏಪ್ರಿಲ್ 05: 1998ರಲ್ಲಿ ನಡೆದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಪ್ರಮುಖ ಆರೋಪಿ, ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಜೋಧಪುರ ನ್ಯಾಯಾಲಯ ತೀರ್ಪು ನೀಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಪ್ರಕರಣದ ಉಳಿದ ಆರೋಪಿಗಳಾದ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ನೀಲಮ್ ಮತ್ತು ಟಬು ಅವರನ್ನು ಖುಲಾಸೆಗೊಳಿಸಲಾಗಿದೆ.

ಸಲ್ಮಾನ್ ಖಾನ್‌ಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟಗೊಂಡಿಲ್ಲ.
ಸೆಪ್ಟೆಂಬರ್ 26, 1998ರಲ್ಲಿ ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ರಾಜಸ್ಥಾನದ ಭವಾದ್ ನಲ್ಲಿ ನಡೆದ ಶೂಟಿಂಗ್ ಹಾಗೂ ಘೋಡಾ ಫಾರ್ಮ್ ನಲ್ಲಿ ಸೆಪ್ಟೆಂಬರ್ 28, 1998ರಲ್ಲಿ ನಡೆದ ಶೂಟಿಂಗ್ ನಲ್ಲಿ ಕೃಷ್ಣಮೃಗಗಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದರು. ಈ ಪ್ರಕರಣದಲ್ಲಿ ಸಲ್ಮಾನ್‌ಗೆ 1 ಹಾಗೂ 5 ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಕೆಳ ಹಂತದ ನ್ಯಾಯಾಲಯದಲ್ಲಿ ಸಲ್ಮಾನ್ ಖಾನ್ ಅವರನ್ನು ಅಪರಾಧಿ ಎಂದು ಪರಿಗಣಿಸಿ ನೀಡಿದ್ದ ಆದೇಶದ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಸಲ್ಮಾನ್ ನಿರ್ದೋಷಿ ಎಂದು ಜುಲೈ 25 ರಂದು ಹೈಕೋರ್ಟ್ ತೀರ್ಪು ನೀಡಿತ್ತು.












Click it and Unblock the Notifications