ಕೃಷ್ಣಮೃಗ ಬೇಟೆ ಪ್ರಕರಣ: ನಟ, ನಟಿಯರ ಭವಿಷ್ಯ ಇಂದು ಪ್ರಕಟ

Recommended Video

      ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪು ಇಂದು ಪ್ರಕಟ | Oneindia Kannada

      ಬೆಂಗಳೂರು, ಏಪ್ರಿಲ್ 05: 19 ವರ್ಷ ಹಳೆಯದಾದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟರಾದ ಸಲ್ಮಾನ್ ಖಾನ್‌, ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ನೀಲಂ ಮತ್ತು ಟಬು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 11 ಗಂಟೆ ಬಳಿಕ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.

      1998ರಲ್ಲಿ ರಾಜಸ್ಥಾನದ ಭವಾದ್ ನಲ್ಲಿ ನಡೆದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ಜೋಧಪುರ ನ್ಯಾಯಾಲಯ ಗುರುವಾರ ಪ್ರಕಟಿಸಲಿದೆ. ಐವರು ನಟರಲ್ಲದೆ ಸ್ಥಳೀಯ ಪ್ರವಾಸಿ ಗೈಡ್ ದುಶ್ಯಂತ್ ಸಿಂಗ್ ಮತ್ತು ಸಲ್ಮಾನ್ ಖಾನ್ ಸಹಾಯಕ ಎನ್ನಲಾದ ದಿನೇಶ್‌ ಗೌರೆ ಕೂಡ ಆರೋಪಿಗಳಾಗಿದ್ದಾರೆ. ಇವರಲ್ಲಿ ಗೌರೆ ನಾಪತ್ತೆಯಾಗಿದ್ದು, ಉಳಿದ ಆರು ಆರೋಪಿಗಳು ಇಂದು ವಿಚಾರಣೆ ಎದುರಿಸಲಿದ್ದಾರೆ.

      Blackbuck poaching case: Verdict on actors today

      ವಿಚಾರಣೆಗೆ ಹಾಜರಾಗಲಿರುವ ನಟರು ಬುಧವಾರವೇ ಜೋಧಪುರ ನಗರಕ್ಕೆ ಬಂದಿದ್ದಾರೆ. ಸಲ್ಮಾನ್ ಖಾನ್ ಅವರ ಸಹೋದರಿಯರಾದ ಅಲ್ವಿರಾ ಮತ್ತು ಅರ್ಪಿತಾ ಸಹ ನ್ಯಾಯಾಲಯದಲ್ಲಿ ಹಾಜರಿರುವ ಸಾಧ್ಯತೆ ಇದೆ.

      ಪ್ರಮುಖ ಆರೋಪಿ ಸಲ್ಮಾನ್ ಖಾನ್ ವಿರುದ್ಧ ಒಟ್ಟು ಮೂರು ಪ್ರಕರಣ ದಾಖಲಾಗಿತ್ತು. ಎರಡು ಪ್ರಕರಣಗಳಲ್ಲಿ ತಪ್ಪಿತಸ್ಥ ಎಂದು ತೀರ್ಪಿತ್ತಿದ್ದ ಜೋಧಪುರ ನ್ಯಾಯಾಲಯ ಸಲ್ಮಾನ್ ಖಾನ್‌ಗೆ ಶಿಕ್ಷೆ ಪ್ರಕಟಿಸಿತ್ತು. ಆದರೆ ಈ ಎರಡೂ ಪ್ರಕರಣಗಳಲ್ಲಿ ಸಲ್ಮಾನ್ ನಿರ್ದೋಷಿ ಎಂದು ರಾಜಸ್ಥಾನ ಹೈಕೋರ್ಟ್‌ ತೀರ್ಪು ನೀಡಿತ್ತು.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

      ಈ ತೀರ್ಪುಗಳನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಈಗಾಗಲೇ ಮೇಲ್ಮನವಿಗಳನ್ನು ಸಲ್ಲಿಸಿದೆ. ಘಟನೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿವೆ.

      ಆರು ವರ್ಷ ಶಿಕ್ಷೆ ಸಾಧ್ಯತೆ:
      ಆರೋಪ ಸಾಬೀತಾದರೆ ಸಲ್ಮಾನ್ ಮತ್ತು ಇತರರು ಒಂದರಿಂದ ಆರು ವರ್ಷದವರೆಗೆ ಜೈಲು ಶಿಕ್ಷೆಗೆ ಒಳಗಾಗಬಹುದು ಎಂದು ಕೃಷ್ಣಮೃಗ ಬೇಟೆ ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್ ಭವಾನಿ ಸಿಂಗ್ ಭಾಟಿ ತಿಳಿಸಿದ್ದಾರೆ.

      ಎರಡು ಕೃಷ್ಣಮೃಗಗಳನ್ನು ಕೊಂದ ಆರೋಪ ಸಲ್ಮಾನ್ ಮೇಲಿದೆ. ಅಪರಾಧ ಎಸಗುವಾಗ ಇತರೆ ಆರೋಪಿಗಳು ಅವರ ಜತೆಗಿದ್ದರು ಎಂದು ಅವರು ಹೇಳಿದ್ದಾರೆ. ಕೋರ್ಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+