ಗಂಗಾ ನದಿಯಲ್ಲಿ ದೋಣಿ ಮುಳುಗಿ 15ಕ್ಕೂ ಹೆಚ್ಚು ಮಂದಿ ಸಾವು

Posted By:
Subscribe to Oneindia Kannada

ಪಾಟ್ನಾ, ಜನವರಿ 14: ಪಾಟ್ನಾ ಸಮೀಪ ಶನಿವಾರ ಗಂಗಾ ನದಿಯಲ್ಲಿ ದೋಣಿ ಮುಳುಗಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟು, ಆರು ಮಂದಿಗೆ ಗಾಯವಾದ ಘಟನೆ ಶನಿವಾರ ಸಂಭವಿಸಿದೆ.

ದೋಣಿಯಲ್ಲಿ 40 ಮಂದಿ ಪ್ರಯಾಣಿಕರಿದ್ದರು. ಹಲವು ಪ್ರಯಾಣಿಕರು ಈಜಿ ದಡ ಸೇರಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ ಗಾಳಿಪಟ ಉತ್ಸವಕ್ಕೆ ತೆರಳಿದ್ದವರು ವಾಪಸ್ ಆಗುತ್ತಿದ್ದರು. ದೋಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರು.

ಮಕರ ಸಂಕ್ರಾಂತಿ ಪ್ರಯುಕ್ತ ಬಿಹಾರ ಪ್ರವಾಸೋದ್ಯಮ ಇಲಾಖೆ ಗಾಳಿಪಟ ಹಾರಾಟ ಉತ್ಸವ ಆಯೋಜಿಸಿತ್ತು. ಸಂಜೆ ಆರು ಗಂಟೆ ವೇಳೆಗೆ ದುರ್ಘಟನೆ ಸಂಭವಿಸಿದೆ. ಎನ್ ಡಿಆರ್ ಎಫ್ ತಂಡವು ರಕ್ಷಣಾ ಕಾರ್ಯದಲ್ಲಿ ತೊಡಗಿತ್ತು.

Bihar

ಪಾಟ್ನಾ ಜಿಲ್ಲಾ ನ್ಯಾಯಾಧೀಶ ಸಂಜಯ್ ಅಗರವಾಲ್ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಘಟನೆ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A boat carrying 40 people capsized in the Ganga river near Patna, Bihar on Saturday evening.Many fear dead.
Please Wait while comments are loading...