ಬಾಲಿವುಡ್ ನಟ ಅಮಿರ್ ಖಾನ್ ಬೆನ್ನು ಏರಿದ ಕೊರೊನಾವೈರಸ್!

ನವದೆಹಲಿ, ಮಾರ್ಚ್ 24: ಬಾಲಿವುಡ್ ನಟ ಅಮಿರ್ ಖಾನ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಕೊವಿಡ್-19 ಸೋಂಕು ತಗುಲಿದ ಹಿನ್ನೆಲೆ ಅಮಿರ್ ಖಾನ್ ಸ್ವಯಂಪ್ರೇರಿತರಾಗಿ ಗೃಹ ದಿಗ್ಬಂಧನಕ್ಕೆ ಒಳಗಾಗಿದ್ದಾರೆ. ಕೊರೊನಾವೈರಸ್ ಸೋಂಕು ಹರಡದಂತೆ ತಡೆಯಲು ಅಗತ್ಯವಿರುವ ಎಲ್ಲ ರೀತಿಯ ಶಿಷ್ಟಾಚಾರವನ್ನು ಪಾಲನೆ ಮಾಡುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಮಿರ್ ಖಾನ್ ಅವರ ಸಂಪರ್ಕದಲ್ಲಿ ಇದ್ದವರು ಕೂಡ ಮುನ್ನೆಚ್ಚರಿಕೆ ವಹಿಸಬೇಕು. ಸ್ವಯಂಪ್ರೇರಿತರಾಗಿ ತೆರಳಿ ಕೊರೊನಾವೈರಸ್ ಸೋಂಕಿತ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರ ವಕ್ತಾರರು ಮನವಿ ಮಾಡಿಕೊಂಡಿದ್ದಾರೆ.

Bollywood Actor Aamir Khan Tests Positive For Covid-19; Self Quarantined At Home

ಮಹಾರಾಷ್ಟ್ರದಲ್ಲಿ ಸೋಂಕಿನ ಹರಡುವಿಕೆ:

ಭಾರತದಲ್ಲಿ ಪತ್ತೆಯಾಗುತ್ತಿರುವ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಮಹಾರಾಷ್ಟ್ರದಲ್ಲೇ ಅತಿಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಮುಂಬೈ ನಗರವೊಂದರಲ್ಲೇ ಕಳೆದ 24 ಗಂಟೆಗಳಲ್ಲೇ 3512 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಭಾರತದಲ್ಲಿ ಒಂದೇ ದಿನ 47262 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಈ ಅವಧಿಯಲ್ಲಿ 23,907 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಂದೇ ದಿನ 275 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು 1,17,34,058 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈವರೆಗೂ 1,12,05,160 ಸೋಂಕಿತರು ಗುಣಮುಖರಾಗಿದ್ದು, ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ 1,60,441ಕ್ಕೆ ಏರಿಕೆಯಾಗಿದೆ. ಉಳಿದಂತೆ 3,68,457 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+