• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

|

ಮುಂಬೈ, ಏಪ್ರಿಲ್ 30: ಬಾಲಿವುಡ್‌ನ ಹಿರಿಯ ನಟ ರಿಷಿ ಕಪೂರ್ ಇಂದು ನಿಧನರಾಗಿದ್ದಾರೆ. 2018ರಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿರುವ ರಿಷಿ ಕಪೂರ್ ಅನಾರೋಗ್ಯದ ಕಾರಣ ಏಪ್ರಿಲ್ 2ರಿಂದ ಏನನ್ನೂ ಪೋಸ್ಟ್ ಮಾಡಿಲ್ಲ. ಇತ್ತೀಚೆಗಷ್ಟೇ ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆಯೂ ತಿಳಿಸಿದ್ದರು ರಿಷಿ ಕಪೂರ್.ದೀಪಿಕಾ ಪಡುಕೋಣೆ ಜೊತೆಗೆ ಹಾಲಿವುದ್ ಸಿನಿಮಾ 'ದಿ ಇಂಟರ್ನ್' ನಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದರು.

ಕುಟುಂಬದ ಕಾರ್ಯಕ್ರಮ ನಿಮಿತ್ತ ದಿಲ್ಲಿಗೆ ಹೋದಾಗ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಗ ತಮಗೆ ಇನ್ಫೆಕ್ಷನ್ ಆಗಿತ್ತು ಎಂದು ತಿಳಿಸಿದ್ದರು. ಮುಂಬೈಗೆ ಮರಳಿದ ಬಳಿಕ ವೈರಲ್ ಜ್ವರದ ಕಾರಣ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿ ಬಹಳ ಬೇಗ ಬಿಡುಗಡೆಯಾಗಿದ್ದರು.

ಸುಮಾರು ಒಂದು ವರ್ಷದ ಹಿಂದೆ ಯುಎಸ್‍ನಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದ ಅವರು ಬಳಿಕ ಸ್ವದೇಶಕ್ಕೆ ಆಗಮಿಸಿದ್ದರು. ಫೆಬ್ರವರಿಯಲ್ಲಿ ಎರಡು ಸಲ ಆಸ್ಪತ್ರೆಗೆ ದಾಖಲಾಗಿದ್ದರು.

ರಿಷಿ ಕಪೂರ್​ ಸಾವಿಗೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಿಷಿ ಕಪೂರ್ ಆಪ್ತ ಅಮಿತಾಭ್​ ಬಚ್ಚನ್​ ತೀವ್ರ ಬೇಸರಗೊಂಡಿರುವುದಾಗಿ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

67 ವರ್ಷದ ರಿಷಿ ಕಪೂರ್​ಗೆ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಬುಧವಾರ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಿಷಿ ಅವರಿಗೆ​ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ರಣಭೀರ್​ ಕಪೂರ್​ ತಿಳಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಖ್ಯಾತ ನಟ ಇರ್ಫಾನ್ ಖಾನ್ ಸಾವಿನ ದುಃಖ ಮಾಸುವ ಮುನ್ನವೇ ಭಾರತೀಯ ಸಿನಿಮಾ ಲೋಕಕ್ಕೆ ಮತ್ತೊಂದು ಆಘಾತವನ್ನುಂಟು ಮಾಡಿದೆ.

English summary
Actor Rishi Kapoor has died at 67 after a two-year-long battle with cancer. Rishi breathed his last at the Sir HN Reliance Foundation Hospital in Mumbai. His wife and actor Neetu Kapoor was by his side.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X