• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಟಿ ಕಂಗನಾ ರಣಾವತ್ ಟ್ವಿಟ್ಟರ್ ಖಾತೆ ಶಾಶ್ವತ ಅಮಾನತು

|

ನವದೆಹಲಿ, ಮೇ 4: ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಬಾಲಿವುಡ್ ನಟಿ ಕಂಗನಾ ರಣಾವತ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡಲಾಗಿದೆ.

ನಟಿ ಕಂಗನಾ ಅವರು ಟ್ವಿಟ್ಟರ್ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡಿದ ಕಾರಣ ಅವರ ಖಾತೆಯನ್ನು ಶಾಶ್ವತವಾಗಿ ನಿಷ್ಕ್ರಿಯಗೊಳಿಸಲಾಗಿದೆ ಎಂದು ಟ್ವಿಟ್ಟರ್ ವಕ್ತಾರರು ಪ್ರತಿಕ್ರಿಯೆ ನೀಡಿದ್ದಾರೆ.

ರೈತರ ಕುರಿತು ಟ್ವೀಟ್ ವಿವಾದ: ಕಂಗನಾ ವಿರುದ್ಧ ಎಫ್‌ಐಆರ್ ಆದೇಶ ರದ್ದುಗೊಳಿಸಿದ ಹೈಕೋರ್ಟ್ರೈತರ ಕುರಿತು ಟ್ವೀಟ್ ವಿವಾದ: ಕಂಗನಾ ವಿರುದ್ಧ ಎಫ್‌ಐಆರ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಈಚೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಕಂಗನಾ ಸರಣಿ ಟ್ವೀಟ್ ಮಾಡಿದ್ದರು. ಚುನಾವಣೆ ಫಲಿತಾಂಶದ ನಂತರ ಮಮತಾ ಬ್ಯಾನರ್ಜಿಯನ್ನು ಟೀಕಿಸಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಗೆದ್ದ ಬಳಿಕ ಹಿಂಸಾಚಾರ ಜಾಸ್ತಿ ಆಗಿದೆ. ಅಧ್ಯಕ್ಷೀಯ ಆಡಳಿತ ತರಬೇಕು ಎಂದು ಕಂಗನಾ ಒತ್ತಾಯಿಸಿದ್ದರು.

ಈ ಹಿಂದೆಯೂ ಹಲವು ಬಾರಿ ಕಂಗನಾ ಹಲವು ವಿಷಯಗಳ ಕುರಿತು ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರು. ಈಚೆಗಷ್ಟೆ ನಟ ಸೋನು ಸೂದ್ ಅವರ ಕುರಿತು ಟ್ವೀಟ್ ಮಾಡಿ ಅಣಕಿಸಿದ್ದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಅವರ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡುವ ಕಠಿಣ ಕ್ರಮ ಕೈಗೊಂಡಿರುವುದಾಗಿ ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

English summary
Twitter has suspended Bollywood actress Kangana Ranaut twitter account permanently,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X