ರೈಲಿನಲ್ಲಿ ಪುಟ್ಟ ಬಾಲಕಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿದ ಕಾಮುಕ ವ್ಯಕ್ತಿ: ಮುಂದೇನಾಯ್ತು ಗೊತ್ತಾ?
ಇತ್ತೀಚಿನ ದಿನಗಳಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿಬಿಟ್ಟಿದೆ. ಇದೀಗ ವ್ಯಕ್ತಿಯೋರ್ವ ರೈಲಿನಲ್ಲಿ ಪುಟ್ಟ ಬಾಲಕಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿದ ಘಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಇದಕ್ಕೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಾಲಿವುಡ್ ನಟಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ, ಇದು ಎಲ್ಲಿ ನಡೆದಿದ್ದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪ್ಯಾಸೆಂಜರ್ ರೈಲಿನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ವ್ಯಕ್ತಿಯೊಬ್ಬ ಅಮಾನವೀಯ ಕೃತ್ಯ ಎಸಗುತ್ತಿರು ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಬಾಲಿವುಡ್ ನಟಿ ರಿಚಾ ಚಡ್ಡಾ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ಅನುಚಿತ ವರ್ತನೆ ತೋರಿದ ವ್ಯಕ್ತಿಗೆ ಸಹ ಪ್ರಯಾಣಿಕರು ಸಹ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ.

ಇನ್ನು ಬಾಲಕಿ ಜೊತೆ ಅನುಚಿತವಾಗಿ ನಡೆದುಕೊಂಡ ವ್ಯಕ್ತಿಯ ನಡವಳಿಕೆಯನ್ನು ಖಂಡಿಸಿ, ನಟಿ ರಿಚಾ ತನ್ನ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, "ನಾವೆಲ್ಲರೂ ಇಂತಹ ಹಲವಾರು ಸಹ-ಪ್ರಯಾಣಿಕರನ್ನು ಭೇಟಿಯಾಗಿದ್ದೇವೆ. ಇದು ನಾಚಿಕೆಗೇಡಿನ ಸಂಗತಿ," ಎಂದು ಬರೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.
ರೈಲಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವುದನ್ನು ವೈರಲ್ ಆಗಿರುವ ವೀಡಿಯೊದಲ್ಲಿ ತೋರಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕ ಈ ಆಘಾತಕಾರಿ ಕೃತ್ಯವನ್ನು ಚಿತ್ರಿಕರಿಸಿದ್ದಾನೆ. ಇನ್ನೂ ಈ ವಿಡಿಯೋ ವೈರಲ್ ಆದ ತಕ್ಷಣ ನೆಟ್ಟಿಗರು ಆ ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ: ಮತ್ತೊಂದೆಡೆ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬ ಆಸ್ಪತ್ರೆಗೆ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. 22 ವರ್ಷದ ಯೂವತಿಯೊಬ್ಬರಿಗೆ 56 ವರ್ಷದ ಚರ್ಮರೋಗ ತಜ್ಞ ಕಿರುಕುಳ ನೀಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಈ ಘಟನೆ ಬೆಂಗಳೂರಿನ ಖಾಸಗಿ ಕ್ಲಿನಿಕ್‌ಲ್ಲಿ ನಡೆದಿದೆ. ಯುವತಿ ತನ್ನ ತಂದೆ ಜೊತೆ ಕ್ಲಿನಿಕ್‌ಗೆ ಭೇಟಿ ನೀಡಿದ್ದಾರೆ. ಯುವತಿ ಕ್ಲಿನಿಕ್ ಒಳಗೆ ಇರುವ ವೇಳೆ ಈ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ವೈದ್ಯರು ಪರಿಸ್ಥಿತಿಯ ಲಾಭ ಪಡೆದು ಚರ್ಮದ ಸೋಂಕನ್ನು ಪರೀಕ್ಷಿಸುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ತಿಳಿದುಬಂದಿದೆ.
ಹಲವಾರು ಬಾರಿ ತನ್ನನ್ನು ತಬ್ಬಿಕೊಂಡು ಮುತ್ತಿಟ್ಟಿದ್ದಾರೆ ಹಾಗೂ ನನ್ನ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಪರೀಕ್ಷೆ ಮಾಡಬೇಕೆಂದು ತನ್ನ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 75 ಮತ್ತು 79ರ ಅಡಿಯಲ್ಲಿ ಪ್ರಕರಣ ದಾಖಲು ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗೆ ಇತ್ತೀಚಿನ ದಿನಗಳಲ್ಲಿ ಕಾಮುಕಲ ಅಟ್ಟಹಾಸ ಹೆಚ್ಚಾಗಿದ್ದು, ಇಂತಹವರ ಎಡೆಮುರಿ ಕಟ್ಟುವ ಕೆಲಸವನ್ನು ಪೊಲೀಸರು ಸಹ ಮಾಡುತ್ತಿದ್ದಾರೆ. ಮತ್ತೊಂದೆಡೆ, ದೇವರೆಂದೇ ನಂಬಿಕೊಂಡಿರುವ ವೈದ್ಯರೇ ಹೀಗೆ ಮಾಡಿದ್ರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಎಲ್ಲಿ ಅಂತಲೂ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಇಂತಹ ಕೃತ್ಯ ಎಸಗುವ ಯಾರೆ ಆದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಅಂತಲೂ ಆಗ್ರಹಿಸಿದ್ದಾರೆ.












Click it and Unblock the Notifications