India vs Pakistan War: ಐಪಿಎಲ್ ಪಂದ್ಯದ ವೇಳೆಯೇ ಬಾಂಬ್ ದಾಳಿ: ಭಯಾನಕ ದೃಶ್ಯ ಸೆರೆ, ಚಿಯರ್ ಗರ್ಲ್ ವೈರಲ್ ವಿಡಿಯೋ ಇಲ್ಲಿದೆ!
India vs Pakistan War: ಭಾರತದ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿಯನ್ನು ಪಾಕಿಸ್ತಾನ ಮಾಡಿದ್ದು. ಇದನ್ನು ತಡೆಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ಪಾಕ್‌ನಿಂದ ಕ್ಷಿಪಣಿ ಹಾಗೂ ಡ್ರೋನ್‌ಗಳ ದಾಳಿ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ದಿಢೀರ್ ರದ್ದು ಮಾಡಲಾಗಿದೆ. ಈ ಸಂದರ್ಭದಲ್ಲಿ ಚಿಯರ್ ಗರ್ಲ್‌ವೊಬ್ಬರು ಭಯಾನಕ ದೃಶ್ಯವನ್ನು ವಿಡಿಯೋ ಮಾಡಿದ್ದು. ಕ್ಷಿಪಣಿ ಹಾಗೂ ಡ್ರೋನ್‌ಗಳ ವಿನಿಮಯವಾಗುತ್ತಿರುವ ಭಯಾನಕ ದೃಶ್ಯ ಈ ವೈರಲ್ ವಿಡಿಯೋದಲ್ಲಿದೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಡ್ರೋನ್‌ಗಳ ಸುರಿಮಳೆಯೇ ಸುರಿದಿದೆ. ಭಾರತದ ಪ್ರಮುಖ ನಗರಗಳ ಮೇಲೆ ಪಾಕ್ ಡ್ರೋನ್‌ಗಳು ಹಾರಿಸಿತ್ತು. ಇನ್ನು ಧರ್ಮಶಾಲಾದಲ್ಲಿ ಐಪಿಎಲ್ ಪಂದ್ಯವನ್ನು ದಿಢೀರ್ ರದ್ದು ಮಾಡಿ ಅಲ್ಲಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸುವ ಸಂದರ್ಭದಲ್ಲಿ ಚಿಯರ್ ಗರ್ಲ್‌ವೊಬ್ಬರು ಮಾಡಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಭಾರತದ ಮೇಲೆ ಪಾಕಿಸ್ತಾನ ದಾಳಿ ಯತ್ನ ನಡೆಸಿತ್ತು. ಇದಾದ ಮೇಲೆ ಏಕಾಏಕಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ನಿಲ್ಲಿಸಲಾಯಿತು.

ಧರ್ಮಶಾಲಾ ಕ್ರೀಡಾಂಗಣದಲ್ಲಿ ಪಂದ್ಯ ರದ್ದು ಮಾಡುತ್ತಿರುವ ಬಗ್ಗೆ ಪ್ರೇಕ್ಷಕರಿಗೆ ಮಾಹಿತಿ ನೀಡಲಾಯಿತು. ಅಲ್ಲದೇ ಶಾಂತ ರೀತಿಯಲ್ಲಿ ಎಲ್ಲರೂ ಹೊರಗೆ ಹೋಗುವಂತೆ ಸೂಚನೆ ನೀಡಲಾಯಿತು. ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಆಟಗಾರರನ್ನು ಸುರಕ್ಷಿತವಾಗಿ ಅಲ್ಲಿಂದ ಕರೆದುಕೊಂಡು ಹೋಗಲಾಯಿತು. ಈ ಸಂದರ್ಭದಲ್ಲಿ ಐಪಿಎಲ್ ಚಿಯರ್ ಗರ್ಲ್ ಅವರಲ್ಲಿ ಒಬ್ಬರು ಸೋಷಿಯಲ್ ಮೀಡಿಯಾದಲ್ಲಿ ಆ ಭಯಾನಕ ಕ್ಷಣಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಈ ವಿಡಿಯೋದಲ್ಲಿ ಪಂದ್ಯ ನಡೆಯುತ್ತಿರುವಾಗಲೇ ಪಂದ್ಯವನ್ನು ರದ್ದು ಮಾಡಲಾಯಿತು. ಕ್ರೀಡಾಂಗಣದಲ್ಲಿ ಇರುವವರಿಗೆ ಹೊರಗೆ ಹೋಗುವಂತೆ ಮನವಿ ಮಾಡಲಾಯಿತು. ಇಲ್ಲಿ ತುಂಬಾ ಭಯದ ವಾತಾವರಣ ನಿರ್ಮಾಣವಾಗಿದೆ. ಬಾಂಬ್‌ಗಳು ಬೀಳುತ್ತಿದ್ದು. ಇಲ್ಲಿನ ಜನ ಕಿರುಚಾಡುತ್ತಿದ್ದಾರೆ. ಇಲ್ಲಿ ತುಂಬಾ ಭಯಾನಕವಾದ ವಾತಾವರಣ ನಿರ್ಮಾಣವಾಗಿದೆ. ನನಗೆ ಕಣ್ಣೀರು ಬರುತ್ತಿಲ್ಲ. ಆದರೆ, ಆಘಾತಕ್ಕೆ ಒಳಗಾಗಿದ್ದೇನೆ ಎಂದು ಆ ಯುವತಿ ಹೇಳಿರುವುದು ವಿಡಿಯೋದಲ್ಲಿ ಇದೆ.
ಪಂದ್ಯ ನಡೆಯುವಾಗಲೇ ದಾಳಿ: ಭಾರತದಲ್ಲಿ ನೆನ್ನೆ ಭಾರೀ ದೊಡ್ಡ ಅನಾಹುತವೊಂದು ತಪ್ಪಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ಸಾವಿರಾರು ಜನ ಸೇರಿದ್ದರು. ಈ ಸಂದರ್ಭದಲ್ಲೇ ಪಾಕಿಸ್ತಾನವು ಡ್ರೋನ್ ಹಾಗೂ ಕ್ಷಿಪಣಿಗಳ ಸುರಿಮಳೆಯನ್ನೇ ಸುರಿಸಿದೆ. ಇದಕ್ಕೆ ಭಾರತೀಯ ಸೇನೆಯು ಸಹ ನಿಖರವಾಗಿ ತಿರುಗೇಟು ನೀಡಿದೆ. ಬಾಂಬ್ ದಾಳಿ ಮಾಡಲಾಗುತ್ತಿದೆ ಎಂದು ಈ ವೇಳೆ ಜನ ಇಲ್ಲಿ ಕಿರುಚಿಕೊಂಡಿದ್ದಾರೆ. ಅದೃಷ್ಟವಶಾತ್ ಈ ಕ್ರೀಡಾಂಗಣದ ಮೇಲೆ ಯಾವುದೇ ದಾಳಿಯಾಗಿಲ್ಲ.
ಭಾರತೀಯ ಸೇನೆಯು ಸಿಡಿಸಿದ್ದ ಡ್ರೋನ್‌ಗಳು ಪಾಕಿಸ್ತಾನದ ಲಾಹೋರ್‌ನ ರಾವಲ್ಪಿಂಡಿ ಸ್ಟೇಡಿಯಂನ ಮೇಲೆ ಅಪ್ಪಳಿಸಿತ್ತು. ಇದರಿಂದ ಸ್ಟೇಡಿಯಂಗೆ ಭಾರೀ ಹಾನಿಯಾಗಿದ್ದು, ಪಾಕಿಸ್ತಾನವು ಪಿಎಸ್‌ಎಲ್ ಪಂದ್ಯಗಳನ್ನು ಸ್ಥಳಾಂತರಿಸಿತ್ತು. ಇದರ ಬೆನ್ನಲ್ಲೇ ಐಪಿಎಲ್ ಅನ್ನೇ ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ಮಾಡಿದೆ ಎನ್ನುವ ಅನುಮಾನವೂ ವ್ಯಕ್ತವಾಗಿದೆ.
"Very very scary" - Cheer leader's SHOCKING video from Punjab Kings Vs Delhi Capitals IPL match in Dharamshala. pic.twitter.com/S830aDKer3
— Manobala Vijayabalan (@ManobalaV) May 8, 2025
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಭೀತಿ ಹಾಗೂ ಇನ್ನಷ್ಟು ದಾಳಿಗಳು ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯಗಳ ದಿನಾಂಕವನ್ನು ಬದಲಾಯಿಸುವ ಸಾಧ್ಯತೆ ಇದೆ. ಅಲ್ಲದೇ ಪಾಕಿಸ್ತಾನ ಸರ್ಕಾರವು ಅಲ್ಲಿನ ಐಪಿಎಲ್ ಮಾದರಿಯ ಪಿಎಸ್‌ಎಲ್ ಅನ್ನು ಕರಾಚಿಗೆ ಸ್ಥಳಾಂತರ ಮಾಡಿದೆ. ಲಾಹೋರ್‌ನ ಕ್ರೀಡಾಂಗಣ ಹಾಳಾದ ಮೇಲೆ ಈ ಕ್ರಮ ತೆಗೆದುಕೊಳ್ಳುವುದು ಪಾಕಿಸ್ತಾನಕ್ಕೆ ಅನಿವಾರ್ಯವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಪಾಕಿಸ್ತಾನವು ಪಿಎಸ್‌ಎಲ್ ಅನ್ನು ಬೇರೆ ದೇಶಕ್ಕೆ ಸ್ಥಳಾಂತರ ಮಾಡುವುದಕ್ಕೆ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications