ಪಾಟ್ನಾದಲ್ಲಿ ಸರಣಿ ಬಾಂಬ್ ಸ್ಫೋಟ, ಐವರು ಸಾವು

ಪಾಟ್ನಾ, ಅ.27: ಬಿಹಾರದ ಪಾಟ್ನಾದಲ್ಲಿ ಭಾನುವಾರ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ. ಕೆಲವೇ ಗಂಟೆಗಳ ಅಂತರದಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟದಿಂದಾಗಿ ಐದು ಮಂದಿ ಸಾವನ್ನಪ್ಪಿದ್ದು, 24 ಜನರು ಗಾಯಗೊಂಡಿದ್ದಾರೆ. ಸರಣಿ ಸ್ಫೋಟದ ನಂತರ ಮೂರು ಕಚ್ಚಾ ಬಾಂಬ್ ಗಳನ್ನು ಪಾಟ್ನಾದ ವಿವಿಧ ಪ್ರದೇಶಗಳಿಂದ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಓರ್ವ ಶಂಕಿತನನ್ನು ಬಂಧಿಸಲಾಗಿದೆ.

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಪಾಟ್ನಾ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ 10ರ ಶೌಚಾಲಯದಲ್ಲಿ ಮೊದಲ ಸ್ಫೋಟ ಸಂಭವಿಸಿತು. ಘಟನೆಯಿಂದಾಗಿ ಓರ್ವ ಪ್ರಯಾಣಿಕ ಗಾಯಗೊಂಡರು. ಅವರನ್ನು ಪಾಟ್ನಾ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ನಂತರ ರೈಲ್ವೆ ನಿಲ್ದಾಣದಲ್ಲಿ ಎರಡು ಕಚ್ಚಾ ಬಾಂಬ್ ಗಳನ್ನು ಬಾಂಬ್ ನಿಷ್ಕ್ರಿಯದಳ ತಮ್ಮ ವಶಕ್ಕೆ ತೆಗೆದುಕೊಂಡಿತು.

Serial blasts

ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಬಾಂಬ್ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸಮಾವೇಶ ನಡೆಯಬೇಕಾಗಿದ್ದ ಗಾಂಧಿ ಮೈದಾನದ ಹತ್ತಿರವೇ ಸ್ಫೋಟಗೊಂಡಿತು. ಕೆಲವೇ ನಿಮಿಷಗಳ ಅವಧಿಯಲ್ಲಿ ಮೈದಾನದ ಸುತ್ತಾ, ಮೂರು ಸ್ಫೋಟಗಳು ಸಂಭವಿಸಿದವು. ಒಟ್ಟಾರೆ ಆರು ಸರಣಿ ಸ್ಫೋಟಗಳು ಪಾಟ್ನಾದಲ್ಲಿ ಸಂಭವಿಸಿವೆ.

ಬಾಂಬ್ ಸ್ಫೋಟದಿಂದಾಗಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಯಾವುದೇ ಅಡಚಣೆ ಉಂಟಾಗಲಿಲ್ಲ. ಬಿಜೆಪಿ ರಾಷ್ಟಾಧ್ಯಕ್ಷ ರಾಜನಾಥ್ ಸಿಂಗ್, ಹಿರಿಯ ನಾಯಕ ಅರುಣ್ ಜೇಟ್ಲಿ ಸಮಾವೇಶದಲ್ಲಿ ಭಾಗವಹಿಸಿ ಮರಳಿದರು. ಸರಣಿ ಬಾಂಬ್ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ಐವರು ಮೃತಪಟ್ಟಿದ್ದಾರೆ. 24 ಜನರು ಗಾಯಗೊಂಡಿದ್ದು ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಸಿಎಂ ಸಭೆ : ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸಿದರು. ಸರಣಿ ಸ್ಫೋಟದ ಬಗ್ಗೆ ಕೇಂದ್ರ ಗೃಹ ಇಲಾಖೆ ಬಿಹಾರ ಸರ್ಕಾರದಿಂದ ವರದಿ ಕೇಳಿದೆ. ರಾಷ್ಟ್ರೀಯ ತನಿಖಾ ತಂಡ (ಎನ್ ಐಎ) ಪಾಟ್ನಾಕ್ಕೆ ಆಗಮಿಸಿ ಸರಣಿ ಸ್ಫೋಟದ ಬಗ್ಗೆ ಮಾಹಿತಿ ಸಂಗ್ರಹಿಸಿ, ತನಿಖೆ ಕೈಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+