Spicejet Flight: ದೆಹಲಿಯಿಂದ ಪುಣೆಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಬೆದರಿಕೆ, ತಪಾಸಣೆ
ನವದೆಹಲಿ, ಜ. 12: ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಟೇಕ್ ಆಫ್ ಆಗುವ ಮುನ್ನವೇ ಬಾಂಬ್ ಇದೆ ಎಂದು ಕರೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಟೇಕ್ ಆಫ್ ಆಗಬೇಕಿದ್ದ ಸಮಯದಲ್ಲೇ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇದೆ ಎಂಬ ದೂರವಾಣಿ ಕರೆ ಬಂದ ತಕ್ಷಣ ವಿಮಾನಯಾನ ಅಧಿಕಾರಿಗಳು ಬೋರ್ಡಿಂಗ್ ನಿಲ್ಲಿಸಿ, ಬಾಂಬ್ ಸ್ಕ್ವಾಡ್ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಧ ನಡೆಸಲಾಗುತ್ತಿದೆ. ವಿಮಾನವು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿತ್ತು.
ಬೆದರಿಕೆ ಕರೆ ಬಂದ ಹಿನ್ನೆಲೆ ತಪಾಸಣೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಇದುವರೆಗೆ ಯಾವುದೇ ಅನುಮಾನಾಸ್ಪದವಾಗಿ ಕಂಡುಬಂದಿಲ್ಲ ಆದರೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಪ್ರಕಾರ ಭದ್ರತಾ ಕ್ರಮಗಳನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

ಕರೆ ಸ್ವೀಕರಿಸಿದ ನಂತರ ಸಿಐಎಸ್ಎಫ್ ಕೂಡ ಅಲರ್ಟ್ ಆಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಅರೆಸೇನಾ ಪಡೆ ಸಿಐಎಸ್‌ಎಫ್ ಮತ್ತು ದೆಹಲಿ ಪೊಲೀಸರು ಕೂಡ ಸ್ಥಳದಲ್ಲಿದ್ದಾರೆ.












Click it and Unblock the Notifications