Bomb Threat to 50 Hospitals: 50ಕ್ಕೂ ಹೆಚ್ಚು ಹೆಸರಾಂತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ಪೊಲೀಸ್ ಅಲರ್ಟ್!
ಮುಂಬೈ ಜೂನ್ 19: ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಹೀಗಾಗಿ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮುಂಬೈನ ಅನೇಕ ದೊಡ್ಡ ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ಬೆದರಿಕೆ ಇಮೇಲ್ ಕಳುಹಿಸಲಾದ ಇಮೇಲ್ ಐಡಿ ಸೈಪ್ರಸ್‌ನಲ್ಲಿದೆ. ಅಲ್ಲದೆ ಅಪರಿಚಿತ ಆರೋಪಿಗಳು ಬಳಸಿರುವ ವಿಪಿಎನ್ ಸ್ವಿಟ್ಜರ್ಲೆಂಡ್ ಮತ್ತು ಜರ್ಮನಿಯಿಂದ ಬಂದಿದೆ. ಈ ಅಪರಿಚಿತ ವ್ಯಕ್ತಿ ಇಮೇಲ್ ಮೂಲಕ ಸರಿಸುಮಾರು 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.

ಆಸ್ಪತ್ರೆಯ ಬೆಡ್‌ಗಳ ಕೆಳಗೆ ಮತ್ತು ಬಾತ್‌ರೂಮ್‌ಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದ್ದು ಆಸ್ಪತ್ರೆಗಳನ್ನು ಸ್ಫೋಟಿಸುವುದಾಗಿ ಇಮೇಲ್‌ನಲ್ಲಿ ಬೆದರಿಸಲಾಗಿದೆ. ಬೆದರಿಕೆ ಇಮೇಲ್ ಕಳುಹಿಸಿದವರು ವಿದೇಶಿ ವಿಪಿಎನ್ ನೆಟ್‌ವರ್ಕ್ ಬಳಸಿ ಇಮೇಲ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈನ ಆಸ್ಪತ್ರೆಗಳಿಗೆ ಬೆದರಿಕೆ ಇಮೇಲ್ ಬಂದ ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಆಸ್ಪತ್ರೆಗಳಲ್ಲಿ ಶೋಧ ನಡೆಸಿದರೂ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ.
ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಬೆದರಿಕೆ ಇಮೇಲ್ ಸ್ವೀಕರಿಸಿದ ಆಸ್ಪತ್ರೆಗಳಲ್ಲಿ ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ, ಸೇಂಟ್ ಜಾರ್ಜ್ ಆಸ್ಪತ್ರೆ, ಭಾಭಾ ಆಸ್ಪತ್ರೆ, ಹಿರಾನಂದನಿ ಆಸ್ಪತ್ರೆ ಮತ್ತು ಇತರ ಆಸ್ಪತ್ರೆಗಳು ಸೇರಿವೆ. ಬೆದರಿಕೆ ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮೊದಲು ಕೂಡ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಹಲವು ಬೆದರಿಕೆ ಕರೆಗಳು ಬಂದಿವೆ. ಆದರೆ ಈ ಬಾರಿ ಆಸ್ಪತ್ರೆಗೆ ನೇರ ಇಮೇಲ್ ಬೆದರಿಕೆ ಬಂದಿದ್ದರಿಂದ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಅನೇಕ ವಿಮಾನ ನಿಲ್ದಾಣಗಳಿಗೆ ಬೆದರಿಕೆ
ಈ ಹಿಂದೆ ಇಮೇಲ್‌ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದ ನಂತರ ದೆಹಲಿ ಮತ್ತು ಚೆನ್ನೈ ಸೇರಿದಂತೆ ಭಾರತದಾದ್ಯಂತದ ವಿಮಾನ ನಿಲ್ದಾಣಗಳನ್ನು ಹೈ ಅಲರ್ಟ್ ಮಾಡಲಾಗಿತ್ತು. ಇಂದಿರಾಗಾಂಧಿ ಅಂತರಾಷ್ಟ್ರೀಯ (IGI) ವಿಮಾನ ನಿಲ್ದಾಣದಲ್ಲಿರುವ ದೆಹಲಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (DIAL) ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

ಈ ಇಮೇಲ್‌ನಲ್ಲಿ ದುಬೈಗೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇತ್ತು ಎಂದು ಹೇಳಲಾಗಿತ್ತು. ಆದರೆ ಮೇಲ್‌ನಲ್ಲಿ ಏರ್‌ಲೈನ್ ಅಥವಾ ಫ್ಲೈಟ್ ಸಂಖ್ಯೆಯ ಬಗ್ಗೆ ಯಾವುದೇ ವಿವರಗಳಿರಲಿಲ್ಲ. ಇಮೇಲ್ ಕಳುಹಿಸಿದವರು ನಂತರ ದೇಶದ ಇತರ ಹಲವಾರು ವಿಮಾನ ನಿಲ್ದಾಣಗಳಿಗೆ ಇದೇ ರೀತಿಯ ಬಾಂಬ್ ಬೆದರಿಕೆಗಳನ್ನು ಕಳುಹಿಸಿದರು.
An email was received at Mumbai's Hinduja College of Commerce, threatening to blow up the college with a bomb. Local police and bomb squad reached the spot and started an investigation but nothing suspicious was found. Mumbai's VP Road PS is investigating this matter: Mumbai…
— ANI (@ANI) June 18, 2024
286 ಪ್ರಯಾಣಿಕರನ್ನು ಹೊತ್ತ ದುಬೈಗೆ ತೆರಳುತ್ತಿದ್ದ ಎಮಿರೇಟ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ನಡೆಸಿದ್ದು, ಅದು ಹುಸಿ ಇಮೇಲ್ ಎಂದು ತಿಳಿದು ಬಂದಿದೆ. ಇದರಿಂದಾಗಿ ವಿಮಾನ ತಡವಾಗಿ ಟೇಕ್‌ಆಫ್ ಆಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications