Akasa Air: ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ!
ಬುಧವಾರ ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಕಾಸ ಏರ್ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಸಂಚಲವನ್ನೇ ಸೃಷ್ಟಿ ಮಾಡಿದೆ. ದೆಹಲಿಯಿಂದ ಹೊರಟ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿದ್ದರಿಂದ ವಿಮಾನವನ್ನು ದೆಹಲಿಗೆ ವಾಪಸ್ ಕಳುಹಿಸಲಾಗಿದೆ. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ತಪಾಸಣೆ ನಡೆಸಲಾಗುತ್ತಿದೆ.
ಇಂಡಿಗೋ ಮತ್ತು ಏರ್ ಇಂಡಿಯಾದ ನಂತರ ಎರಡು ದಿನಗಳಲ್ಲಿ ಆಕಾಸ ಏರ್ ವಿಮಾನಕ್ಕೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಕಾಸ ಏರ್ ವಿಮಾನದಲ್ಲಿ ಒಟ್ಟು 184 ಮಂದಿ ಪ್ರಯಾಣಿಕರು ಇದ್ದರು. ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಧ್ಯಾಹ್ನ 1.15ಕ್ಕೆ ಮಾಹಿತಿ ಲಭಿಸಿದೆ. ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಈ ಸಂದೇಶ ಬಂದಿದ್ದು, ವಿಮಾನವನ್ನು ತಕ್ಷಣವೇ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ. ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನ ಸುರಕ್ಷತವಾಗಿ ಲ್ಯಾಂಡ್ ಆಗಿದ್ದು ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ.

ಐಜಿಐ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್
ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಕಾಸ ಏರ್ ವಿಮಾನದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಮಾಹಿತ ಬಂದ ಬಳಿಕ ದೆಹಲಿ ಪೊಲೀಸರು ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಟ್ಯಾಂಡರ್ಡ್ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ವಿಮಾನವನ್ನು ತಕ್ಷಣವೇ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ. ಅಲ್ಲಿ ಅದನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡ್ ಮಾಡಲಾಗಿದ್ದು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆವಾಗಿದ್ದಾರೆ. ಜೊತೆಗೆ ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಲಾಗುತ್ತಿದೆ.
ಆಕಾಸ ಏರ್ ಹೇಳಿಕೆ
ಘಟನೆಯ ಬಗ್ಗೆ ಮಾಹಿತಿ ನೀಡಿದ ಆಕಾಸ ಏರ್‌ನ ವಕ್ತಾರರು, 'ಅಕಾಸ ಏರ್ ಫ್ಲೈಟ್ ಕ್ಯೂಪಿ 1335, ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಹಾರುತ್ತಿತ್ತು. ಅದರಲ್ಲಿ 174 ಪ್ರಯಾಣಿಕರು, 3 ಶಿಶುಗಳು ಮತ್ತು 7 ಸಿಬ್ಬಂದಿಗಳು ಇದ್ದರು. ಈ ವೇಳೆ ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಲಾಗಿದೆ. ಆಕಾಶ ಏರ್ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪೈಲಟ್ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ದೆಹಲಿಯಲ್ಲಿ ಸುರಕ್ಷಿತ ಲ್ಯಾಂಡಿಂಗ್‌ಗೆ ಅಗತ್ಯವಿರುವ ಎಲ್ಲಾ ತುರ್ತು ಕಾರ್ಯವಿಧಾನಗಳನ್ನು ಕ್ಯಾಪ್ಟನ್ ಅನುಸರಿಸಿದ್ದಾರೆ. ಜೊತೆಗೆ ವಿಮಾನದಲ್ಲಿ ತಪಾಸಣೆಯನ್ನು ನಡೆಸಲಾಗುತ್ತಿದೆ. ವಿಮಾನದಲ್ಲಿನ ಪ್ರಯಾಣಿಕ ತಪಾಸಣೆಯನ್ನೂ ಮಾಡಲಾಗುತ್ತಿದೆ' ಎಂದಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications