Maharashtra Bandh: ಮಹಾರಾಷ್ಟ್ರ ಬಂದ್‌ಗೆ ತಡೆ ನೀಡಿದ ಬಾಂಬೆ ಹೈಕೋರ್ಟ್
ಮುಂಬೈ ಆಗಸ್ಟ್ 23: ಥಾಣೆ ಜಿಲ್ಲೆಯ ಬದ್ಲಾಪುರ್ ಶಾಲೆಯಲ್ಲಿ 3 ಮತ್ತು 4 ವರ್ಷದ ಇಬ್ಬರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ ಮಹಾ ವಿಕಾಸ್ ಅಘಾಡಿ (ಎಂವಿಎ) ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿತ್ತು. ಆದರೆ ಇದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದ್ದು ನಾಳೆ ಮಹಾರಾಷ್ಟ್ರ ಬಂದ್ ಕೈ ಬಿಡಲಾಗಿದೆ.
ಮಹಾರಾಷ್ಟ್ರದಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳು ಬಂದ್‌ಗೆ ಕರೆ ನೀಡದಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ನಿರ್ಬಂಧಿಸಿದೆ. ಪ್ರಕರಣ ವಿಚಾರಣೆಯಲ್ಲಿರುವುದರಿಂದ ಅದಕ್ಕೆ ಸಂಬಂಧಿಸಿದಂತೆ ರಾಜೀಯ ಪಕ್ಷಗಳು ಬಂದ್ ಗೆ ಕರೆ ನೀಡುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ನೇತೃತ್ವದ ಪೀಠ, ರಾಜಕೀಯ ಪಕ್ಷಗಳು ತಮ್ಮ ಮಹಾರಾಷ್ಟ್ರ ಬಂದ್ ಅನ್ನು ಮುಂದುವರಿಸದಂತೆ ನ್ಯಾಯಾಲಯ ನಿರ್ಬಂಧಿಸುತ್ತದೆ ಎಂದು ಹೇಳಿದೆ.

ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿದ ನಂತರ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
ಆಗಸ್ಟ್ 17 ರಂದು ಬದ್ಲಾಪುರದ ಶಾಲೆಯಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಶಾಲೆಯ ಅಟೆಂಡರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ದೂರಿನ ಪ್ರಕಾರ ಆತ ಶಾಲೆಯ ಶೌಚಾಲಯದಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಇನ್ನೂ ದೂರನನ್ನು ನೀಡಲು ಠಾಣೆಗೆ ಬಂದ ಬಾಲಕಿಯರ ಪೋಷಕರು ಬದ್ಲಾಪುರ ಪೊಲೀಸ್ ಠಾಣೆಯಲ್ಲಿ 11 ಗಂಟೆಗಳ ಕಾಲ ಕಾದಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.












Click it and Unblock the Notifications