Booster Dose: ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಇದು ಅನಿವಾರ್ಯವೇ!?

ನವದೆಹಲಿ, ಆಗಸ್ಟ್ 5: ಜಗತ್ತಿನಾದ್ಯಂತ ಕೊರೊನಾವೈರಸ್ ಅಲೆಗಳ ಆಟಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಕೆಲವು ರಾಷ್ಟ್ರಗಳಲ್ಲಿ ಕೊವಿಡ್-19 ಮೂರು ಮುಗಿದು ನಾಲ್ಕನೇ ಅಲೆಯೂ ಶುರುವಾಗಿದೆ. ಇದರ ಮಧ್ಯೆ ಜನರಲ್ಲಿ ಡೆಲ್ಟಾ ರೂಪಾಂತರ ವೈರಸ್ ಹೆಚ್ಚು ಆತಂಕವನ್ನು ಸೃಷ್ಟಿಸಿದೆ.

ಡೆಲ್ಟಾ ರೂಪಾಂತರ ತಳಿಯಿಂದ ರಕ್ಷಿಸಿಕೊಳ್ಳುವುದಕ್ಕೆ ಹಲವು ಮುಂದುವರಿದ ರಾಷ್ಟ್ರಗಳಲ್ಲಿ ಈಗಾಗಲೇ ಬೂಸ್ಟರ್ ಡೋಸ್ ವಿತರಣೆ ಆರಂಭಿಸಲಾಗಿದ್ದು, ಕೆಲವು ರಾಷ್ಟ್ರಗಳು ಬೂಸ್ಟರ್ ಡೋಸ್ ಲಸಿಕೆ ವಿತರಣೆಯ ಕುರಿತು ಚಿಂತನೆ ನಡೆಸುತ್ತಿವೆ. ಆದರೆ ಭಾರತದಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪವೂ ನಡೆದಿಲ್ಲ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ವಿಶ್ವದಾದ್ಯಂತ ಬೂಸ್ಟರ್ ಡೋಸ್ ಎಂಬ ಪರಿಕಲ್ಪನೆ ಹುಟ್ಟಿಕೊಳ್ಳುತ್ತಿರುವುದು ಏಕೆ?, ಬೂಸ್ಟರ್ ಡೋಸ್ ನೀಡುವುದರ ಹಿಂದಿನ ಉದ್ದೇಶವೇನು?, ಯಾವ ರಾಷ್ಟ್ರಗಳಲ್ಲಿ ಈ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಆರಂಭಿಸಲಾಗಿದೆ?, ಬೂಸ್ಟರ್ ಡೋಸ್ ವಿತರಣೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳುವುದೇನು? ಹಾಗೂ ಭಾರತದಲ್ಲಿ ಬೂಸ್ಟರ್ ಡೋಸ್ ಬಗ್ಗೆ ಸರ್ಕಾರಗಳು ಏಕೆ ಆಲೋಚಿಸಿಲ್ಲ ಎಂಬುದರ ಕುರಿತು ಒಂದು ವಿಸ್ತೃತ ವರದಿಗಾಗಿ ಮುಂದೆ ಓದಿ.

ಬೂಸ್ಟರ್ ಡೋಸ್ ಯಾವ ರಾಷ್ಟ್ರಗಳಲ್ಲಿ ನೀಡಲಾಗುತ್ತಿದೆ?

ಬೂಸ್ಟರ್ ಡೋಸ್ ಯಾವ ರಾಷ್ಟ್ರಗಳಲ್ಲಿ ನೀಡಲಾಗುತ್ತಿದೆ?

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆಯ ಭೀತಿಯಲ್ಲಿ ಇಸ್ರೇಲ್ ಮೊದಲಿಗೆ ಈ ಬೂಸ್ಟರ್ ಡೋಸ್ ವಿತರಣೆಯನ್ನು ಶುರು ಮಾಡಿತು. ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ದೇಶದ ಜನಸಂಖ್ಯೆ ದುರ್ಬಲಗೊಳ್ಳುವ ಅಪಾಯವನ್ನು ಮನಗಂಡು ಫ್ರಾನ್ಸ್ ಮತ್ತು ಜರ್ಮನಿ ರಾಷ್ಟ್ರಗಳು ಕೂಡ ಲಸಿಕೆ ವಿತರಣೆಯನ್ನು ಆರಂಭಿಸಿದವು.

ಏನಿದು ಬೂಸ್ಟರ್ ಡೋಸ್:

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಎರಡು ಡೋಸ್ ನೀಡುವುದಕ್ಕೆ ಜಾಗತಿಕ ಮಟ್ಟದಲ್ಲಿ ಅನುಮೋದನೆ ನೀಡಲಾಗಿದೆ. ಇದರ ಹೊರತಾಗಿ ಎರಡು ಡೋಸ್ ಪಡೆದ ನಂತರದಲ್ಲಿ ಮೂರನೇ ಡೋಸ್ ಲಸಿಕೆಯನ್ನು ನೀಡುವುದು. ಆ ಮೂಲಕ ಪ್ರತಿಕಾಯ ವ್ಯವಸ್ಥೆಯನ್ನು ವೃದ್ಧಿಸುವ ಮತ್ತು ಡೆಲ್ಟಾ ರೂಪಾಂತರ ತಳಿಯಂತಾ ಅಪಾಯಕಾರಿ ವಿರುದ್ಧ ಹೋರಾಡಬಲ್ಲ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುಸುವ ಉದ್ದೇಶವನ್ನು ಹೊಂದಲಾಗಿದೆ. ಈಗಾಗಲೇ ನಿಗದಿತಪಡಿಸಿರುವ ಎರಡು ಡೋಸ್ ಹೊರತಾಗಿ ನೀಡುವ ಮೂರನೇ ಡೋಸ್ ಲಸಿಕೆಯನ್ನು ಬೂಸ್ಟರ್ ಡೋಸ್ ಎಂದು ಕರೆಯಲಾಗುತ್ತಿದೆ.

ಭಾರತದ ಆದ್ಯತೆ ಲಸಿಕೆ ವಿತರಣೆಯ ಮೇಲೆ ಹೆಚ್ಚಿದೆ

ಭಾರತದ ಆದ್ಯತೆ ಲಸಿಕೆ ವಿತರಣೆಯ ಮೇಲೆ ಹೆಚ್ಚಿದೆ

ದೇಶದಲ್ಲಿ ಎರಡೂ ಡೋಸ್ ಕೊರೊನಾವೈರಸ್ ಲಸಿಕೆ ಪಡೆದುಕೊಂಡವರ ಸಂಖ್ಯೆ ಶೇ.8ಕ್ಕಿಂತ ಕಡಿಮೆಯಾಗಿದೆ. ಈ ಹಂತದಲ್ಲಿ ನಾವು ಹೆಚ್ಚು ಜನರಿಗೆ ಲಸಿಕೆ ವಿತರಿಸುವ ಬಗ್ಗೆ ಹೆಚ್ಚು ಲಕ್ಷ್ಯ ವಹಿಸಬೇಕಾಗಿದೆ. ಅಲ್ಲದೇ "ಎರಡು ಡೋಸ್ ಕೊವಿಡ್-19 ಲಸಿಕೆ ಪಡೆದುಕೊಂಡವರಿಗೆ ಬೂಸ್ಟರ್ ಡೋಸ್ ನೀಡುವ ಅಗತ್ಯವಿದೆ ಎಂಬುದಾಗಿ ಸೂಚಿಸುವ ಅಂಕಿ-ಅಂಶಗಳಿವೆ ಎಂದು ನನಗೆ ಅನ್ನಿಸುವುದಿಲ್ಲ," ಎಂದು ಕೊವಿಡ್-19 ಲಸಿಕೆ ವಿತರಣೆಯ ರಾಷ್ಟ್ರೀಯ ತಜ್ಞರ ತಂಡ ಸದಸ್ಯ ಹಾಗೂ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಸಮಿರನ್ ಪಾಂಡಾ ಹೇಳಿದ್ದಾರೆ.

"ದೇಶದಲ್ಲಿ ಯಾವ ವರ್ಗಕ್ಕೆ ಬೂಸ್ಟರ್ ಡೋಸ್ ನೀಡಬೇಕು ಮತ್ತು ಅದರ ಸಾಧ್ಯಾಸಾಧ್ಯತೆಗಳೇನುು ಎಂಬುದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮೊದಲು ಪರಿಶೋಧನೆ ನಡೆಸಬೇಕಾಗುತ್ತದೆ. ನಂತರದಲ್ಲಿ ಮೊದಲು ಲಸಿಕೆಯ ಡೋಸ್ ಪಡೆದುಕೊಂಡ ವೈದ್ಯಕೀಯ ಸಿಬ್ಬಂದಿಗೆ ಈ ಬೂಸ್ಟರ್ ಡೋಸ್ ನೀಡುವ ಅಗತ್ಯವಿದೆ. ಏಕೆಂದರೆ, ಅವರು ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡು ತಿಂಗಳುಗಳೇ ಕಳೆದು ಹೋಗಿವೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಬಹುಪಾಲು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯು ಪೂರ್ಣ ಪ್ರಮಾಣದ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಅದಾಗ್ಯೂ, ಕೊರೊನಾವೈರಸ್ ಎರಡನೇ ಅಲೆಯ ಸಂದರ್ಭದಲ್ಲಿ ನೂರಾರು ವೈದ್ಯರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ," ಎಂದು ಪಾಂಡಾ ಉಲ್ಲೇಖಿಸಿದ್ದಾರೆ.

ಮನುಷ್ಯನ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ವೃದ್ಧಿ

ಮನುಷ್ಯನ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ವೃದ್ಧಿ

ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಸಂದರ್ಭದಲ್ಲಿ ಡೆಲ್ಟಾ ರೂಪಾಂತರದ ವಿರುದ್ಧ ಲಸಿಕೆಯು ಪರಿಣಾಮಕಾರಿಯಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸಾಮಾನ್ಯವಾಗಿ mRNA ಮಾದರಿಯ ಲಸಿಕೆಯ ಪರಿಣಾಮವು ಆರು ತಿಂಗಳಿನಿಂದ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿವರೆಗೂ ಇರುತ್ತದೆ. ಪ್ರಸ್ತುತ ಭಾರತದಲ್ಲಿ ವಿತರಿಸುತ್ತಿರುವ ಲಸಿಕೆಗಳು ಮನುಷ್ಯನ ದೇಹದಲ್ಲಿರುವ ರೋಗಾಣುವನ್ನು ಗುರುತಿಸಿ ಅವುಗಳ ವಿರುದ್ಧ ಹೋರಾಡಬಲ್ಲ ಪ್ರತಿಕಾಯಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿರುತ್ತವೆ.

mRNA ಮಾದರಿ ಲಸಿಕೆ ಎಂದರೆ ಅರ್ಥವೇನು?

mRNA ಮಾದರಿ ಲಸಿಕೆ ಎಂದರೆ ಅರ್ಥವೇನು?

ಭಾರತದಲ್ಲಿ ಅನುಮೋದನೆ ನೀಡಲಾಗಿರುವ ಕೊವ್ಯಾಕ್ಸಿನ್ ಲಸಿಕೆಯೊಂದರನ್ನು ಹೊರತುಪಡಿಸಿ ಉಳಿದ ಮೂರು ಲಸಿಕೆಗಳು mRNA ಮಾದರಿಯ ಲಸಿಕೆಗಳಾಗಿವೆ. ಕೊವಿಶೀಲ್ಡ್, ಸ್ಪುಟ್ನಿಕ್-ವಿ ಮತ್ತು ಮಾಡರ್ನಾ ಕಂಪನಿಯ ಲಸಿಕೆಗಳು mRNA ಮಾದರಿಯದ್ದಾಗಿವೆ. ಅಸಲಿಗೆ ಈ ಮಾದರಿಯ ಲಸಿಕೆಗಳು ದೇಹದಲ್ಲಿರುವ ವೈರಸ್ ಅನ್ನು ಗುರುತಿಸಿ ಅವುಗಳ ವಿರುದ್ಧ ರಕ್ಷಣೆ ನೀಡುವುದಕ್ಕಾಗಿ ಹೆಚ್ಚುವರಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥ ಲಸಿಕೆಯನ್ನೇ mRNA ಲಸಿಕೆ ಎಂದು ಕರೆಯಲಾಗುತ್ತದೆ.

ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಲಾಗಿದೆ.

ಬೂಸ್ಟರ್ ಡೋಸ್ ನಿಷೇಧಿಸಿದ ವಿಶ್ವ ಆರೋಗ್ಯ ಸಂಸ್ಥೆ

ಬೂಸ್ಟರ್ ಡೋಸ್ ನಿಷೇಧಿಸಿದ ವಿಶ್ವ ಆರೋಗ್ಯ ಸಂಸ್ಥೆ

ಕೊವಿಡ್-19 ಬೂಸ್ಟರ್ ಲಸಿಕೆ ವಿತರಣೆಯನ್ನು ಸಪ್ಟೆಂಬರ್ ಅಂತ್ಯದವರೆಗೂ ತಾತ್ಕಾಲಿಕವಾಗಿ ನಿಷೇಧಿಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಂಡ್ರಸ್ ಅಧನಮ್ ಹೇಳಿದ್ದಾರೆ. ಜಗತ್ತಿನ ಮುಂದುವರಿದ ರಾಷ್ಟ್ರಗಳಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಿಸಲಾಗುತ್ತಿದ್ದು, ಹಿಂದುಳಿದ ಬಡ ರಾಷ್ಟ್ರಗಳಲ್ಲಿ ಜನಸಂಖ್ಯೆಯ ಶೇ.10ರಷ್ಟು ಜನರು ಸಹ ಲಸಿಕೆಯನ್ನು ಪಡೆದುಕೊಂಡಿಲ್ಲ. ಪ್ರತಿಯೊಂದು ದೇಶಗಳಲ್ಲೂ ಕೊರೊನಾವೈರಸ್ ಲಸಿಕೆಯ ವಿತರಣೆ ಪ್ರಮಾಣ ಸಮಾನವಾಗಿರಬೇಕು. ಲಸಿಕೆ ವಿತರಣೆಯಲ್ಲಿನ ಅಸಮಾನತೆಯನ್ನು ತೊಡೆದು ಹಾಕುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲಿಸಿದ ಭಾರತ

ವಿಶ್ವ ಆರೋಗ್ಯ ಸಂಸ್ಥೆಗೆ ಬೆಂಬಲಿಸಿದ ಭಾರತ

ಬೂಸ್ಟರ್ ಡೋಸ್ ಲಸಿಕೆ ವಿತರಣೆ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ವಾದವನ್ನು ಭಾರತದ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಅಧ್ಯಕ್ಷ ಮತ್ತು ರಾಷ್ಟ್ರೀಯ ಕೋವಿಡ್ -19 ಕಾರ್ಯಪಡೆಯ ಸದಸ್ಯ ನಾಥ್ ರೆಡ್ಡಿ ಬೆಂಬಲಿಸಿದ್ದಾರೆ. "ಯಾವ ವರ್ಗದ ಜನರಿಗೆ ಬೂಸ್ಟರ್ ಡೋಸ್ ಅಗತ್ಯವಿದೆಯೋ ಅಂಥವರಿಗೆ ಮಾತ್ರ ಅದನ್ನು ವಿತರಿಸುವುದು ಸೂಕ್ತ. ವೈದ್ಯಕೀಯ ವಲಯದ ಸಿಬ್ಬಂದಿಯು ಬೂಸ್ಟರ್ ಡೋಸ್ ಪಡೆದುಕೊಳ್ಳದಿದ್ದರೆ ಅಪಾಯ ಎದುರಿಸುವ ಸ್ಥಿತಿಯಿದ್ದರೆ ಅಂಥ ಸಂದರ್ಭದಲ್ಲಿ ಬೂಸ್ಟರ್ ಡೋಸ್ ನೀಡುವುದು ಸೂಕ್ತ," ಎಂದು ತಿಳಿಸಿದ್ದಾರೆ.

ದೇಶದಲ್ಲಿ ಇಳಿಮುಖವಾಯಿತು ಲಸಿಕೆ ವಿತರಣೆ ಪ್ರಮಾಣ

ದೇಶದಲ್ಲಿ ಇಳಿಮುಖವಾಯಿತು ಲಸಿಕೆ ವಿತರಣೆ ಪ್ರಮಾಣ

ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ ಶೇ.50ರಷ್ಟು ಕಡಿಮೆಯಾಗಿದೆ. ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 201 ದಿನಗಳೇ ಕಳೆದಿದ್ದು, ಕಳೆದ 24 ಗಂಟೆಗಳಲ್ಲಿ 33,50,612 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಮಂಗಳವಾರವಷ್ಟೇ ಒಂದೇ ದಿನ 62,53,741 ಜನರಿಗೆ ಲಸಿಕೆ ನೀಡಲಾಗಿತ್ತು. ಅದಾಗಿ 24 ಗಂಟೆಗಳಲ್ಲೇ ಲಸಿಕೆ ವಿತರಣೆ ಪ್ರಮಾಣ ಶೇ.50ರಷ್ಟು ಇಳಿಕೆಯಾಗಿದೆ. ದೇಶದಲ್ಲಿ ಈವರೆಗೂ 48,93,42,295 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

2021ರ ಆಗಸ್ಟ್ 05ರ ಅಂಕಿ-ಅಂಶಗಳ ಪ್ರಕಾರ, 51,01,88,510 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 51,01,88,510

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 7,53,620

* ಬಳಕೆ ಆಗಿರುವ ಲಸಿಕೆ ಪ್ರಮಾಣ - 48,60,15,232

* ಕೊವಿಡ್-19 ಲಸಿಕೆಯ ಲಭ್ಯತೆ - 2,69,06,624

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+