Lover Suicide: ಮದುವೆಗಾಗಿ ರೆಡಿಯಾಗಲು ಬ್ಯೂಟಿ ಪಾರ್ಲರ್‌ಗೆ ಹೋಗಿದ್ದ ಪ್ರೇಯಸಿಗೆ ಗುಂಡು ಹಾರಿಸಿದ ನೇಣಿಗೆ ಶರಣಾದ!
ಭೋಪಾಲ್ ಜೂನ್ 27: ಪೋಷಕರು ಹೇಳಿದ ಹುಡುಗನನ್ನು ಮದುವೆಯಾಗಲು ಹೊರಟ ಪ್ರೇಯಸಿಯನ್ನು ಗುಂಡು ಹಾರಿಸಿ ನಂತರ ಪ್ರಿಯತಮ ನೇಣಿಗೆ ಶರಣಾಗಿದ್ದಾನೆ. ಮಧ್ಯಪ್ರದೇಶದ ಮೊರೆನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಉತ್ತರಪ್ರದೇಶ ಝಾನ್ಸಿಯ ದೀಪಕ್ ಗೌತಮ್ ಹಾಗೂ ಮಧ್ಯಪ್ರದೇಶದ ಧಾತಿಯಾ ಜಿಲ್ಲೆಯ ಬರ್ಗಯಾನ್ ಗ್ರಾಮದ ನಿವಾಸಿ ಕಾಜಲ್ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದರೆ ಮನೆಯಲ್ಲಿ ಇವರಿಬ್ಬರ ಪ್ರೀತಿಗೆ ಒಪ್ಪಿಗೆ ಇರಲಿಲ್ಲ.

ಹೀಗಾಗಿ ಪರಸ್ಪರ ಪ್ರೀತಿ ಮಾಡುತ್ತಿದ್ದ ಈ ಯುವ ಜೋಡಿ ಮದುವೆಯಾಗಲು ತೀರ್ಮಾನಿಸಿ ಮನೆಯನ್ನು ತೊರೆದಿತ್ತು. ಬಳಿಕ ಅವರನ್ನು ಮನೆಗೆ ಕರೆತಂದು ಬುದ್ಧಿ ಹೇಳಲಾಗಿತ್ತು. ಮನೆಗೆ ಬಂದ ಮಗಳಿಗೆ ತಿಳಿ ಹೇಳಿದ ಬಳಿಕ ಮಗಳು ಪೋಷಕರು ಹೇಳಿದ ಹುಡುಗನನ್ನು ಮದುವೆಯಾಗಲು ಒಪ್ಪಿಗೆ ಸೂಚಿಸಿದ್ದಳು.
ಆದರೆ ಪ್ರಿಯಕರ ಗೌತಮ್‌ಗೆ ಕಾಜಲ್ ನನ್ನು ಮರೆಯಲು ಸಾಧ್ಯವಾಗಿಲ್ಲ. ಹೀಗಾಗಿ ತನ್ನೊಂದಿಗೆ ಬರಲು ಕಾಜಲ್‌ಗೆ ಒತ್ತಾಯಿಸಿದ್ದಾನೆ. ಆದರೆ ಕಾಜಲ್ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಬದಲಿಗೆ ಪೋಷಕರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರ್ಧರಿಸಿದ್ದಾಳೆ. ಜೂನ್ 23ರಂದು ಮದುವೆಗಾಗಿ ರೆಡಿಯಾಗಲು ಪಾರ್ಲರ್‌ಗೆ ಹೋಗಿದ್ದ ಕಾಜಲ್‌ನನ್ನು ತಡೆದು ತನ್ನೊಂದಿಗೆ ಬರುವಂತೆ ಗೌತಮ್ ಒತ್ತಾಯಿಸಿದ್ದಾನೆ.
ಇದಕ್ಕೆ ಕಾಜಲ್ ಒಪ್ಪದೇ ಇದ್ದಾಗ ಆಕೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾನೆ. ತನಗೆ ಸಿಗದ ತನ್ನ ಪ್ರೇಯಸಿ ಯಾರಿಗೂ ಕೂಡ ಸಿಗಬಾರದು ಎಂದು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಪತ್ತೆ ಮಾಡಲು ಪೊಲೀಸರ ಐದು ತಂಡಗಳು ಶೋಧ ಕಾರ್ಯ ಆರಂಭಿಸಿದ್ದವು. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹರಿದಾಡುತ್ತಿತ್ತು.
ಪ್ರೇಯಸಿಯನ್ನು ಗುಂಡುಕ್ಕಿ ಹತ್ಯೆ ಮಾಡಿದ ಬಳಿಕ ಮನನೊಂದು ಪ್ರೇಮಿ ಗೌತಮ್ ಕೂಡ ನೇಣಿಗೆಶರಣಾಗಿದ್ದಾನೆ. ನೇಣಿಗೆ ಶರಣಾದ ಸ್ಥಿತಿಯಲ್ಲಿ ಆತನ ದೇಹ ಪತ್ತೆಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ ಮತ್ತೊಂದು ವಿಷಿತ್ರ ಘಟನೆ ನಡೆದಿದೆ.
ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ
ದಲಿತ ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶ ಛತ್ತರ್‌ಪುರ ನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೇವೇಂದ್ರ ಠಾಕೂರ್, ಲಕ್ಕಿ ಘೋಷಿ ಹಾಗೂ ಅನ್ನು ಘೋಷಿ ಎಂದು ಗುರುತಿಸಲಾಗಿದೆ.
ಜೊತೆಗೆ ಕೃತ್ಯದ ವೇಳೆ ಬಳಸಿದ್ದ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳು ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಗೆ ಬೆಲ್ಟ್ ಹಾಗೂ ನಾಡ ಪಿಸ್ತೂಲ್‌ನಿಂದ ಹೊಡೆಯುವ ಮೂಲಕ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಂತ್ರಸ್ತೆ ನೀಡಿದ ದೂರು ಆಧರಿಸಿ ಕೊಲ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಕೊಲೆ ಯತ್ನ, ಅಪಹರಣ, ದರೋಡೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಲಾಗಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications