ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಸಂವಿಧಾನ ಶಿಲ್ಪಿಯನ್ನು ಸ್ಮರಿಸಿಕೊಂಡ ಕೇಂದ್ರ ಮತ್ತು ರಾಜ್ಯ ನಾಯಕರು

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ನವ ಭಾರತದ ನಿರ್ಮಾತೃ, ದೇಶದ ಮೊದಲ ಕಾನೂನು ಸಚಿವರು ಹಾಗೂ ಸಂವಿಧಾನ ಶಿಲ್ಪಿ ಆಗಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 113ನೇ ಜನ್ಮ ದಿನಾಚರಣೆ ಹಿನ್ನೆಲೆ ಕೇಂದ್ರ ಸಚಿವರು, ರಾಜಕೀಯ ಮುಖಂಡರು ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯ ಕೋರಿದ್ದಾರೆ.

ವಾಟ್ಸಾಪ್, ಫೇಸ್ ಬುಕ್, ಟ್ವಿಟ್ಟರ್ ಮತ್ತು ಕೂ ತಾಣಗಳಲ್ಲಿ ಸಂವಿಧಾನ ಶಿಲ್ಪಯನ್ನು ಸ್ಮರಿಸಿಕೊಳ್ಳಲಾಗುತ್ತಿದೆ. ಸಾರ್ವಜನಿಕರ ಆದಿಯಾಗಿ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಹಾಗೂ ರಾಜಕೀಯ ಮುಖಂಡರು ಸೇರಿದಂತೆ ಸಾಲು ಸಾಲು ನಾಯಕರು ಶುಭಾಶಯ ತಿಳಿಸುತ್ತಿದ್ದಾರೆ.

Ambedkar Jayanti 2022 : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ 2022: ಇತಿಹಾಸ, ಸತ್ಯಗಳು ಮತ್ತು ಮಹತ್ವAmbedkar Jayanti 2022 : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ 2022: ಇತಿಹಾಸ, ಸತ್ಯಗಳು ಮತ್ತು ಮಹತ್ವ

ಏಪ್ರಿಲ್ 14ರ ಈ ಗುರುವಾರ ಸಂವಿಧಾನ ಶಿಲ್ಪಿಯ ಕುರಿತು ಯಾವ ನಾಯಕರು ಏನು ಸಂದೇಶವನ್ನು ನೀಡಿದ್ದಾರೆ?, ನವಭಾರತ ನಿರ್ಮಾತೃವನ್ನು ಯಾವ ರೀತಿ ಸ್ಮರಿಸಿಕೊಂಡಿದ್ದಾರೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ.

ಪಿಯೂಶ್ ಗೋಯೆಲ್ ಕೂ ಮೆಸೇಜ್

'ಇಂದು ಭಾರತ ರತ್ನ ಬಾಬಾಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ಜಯಂತಿಯಂದು ಭಾರತೀಯ ಸಂವಿಧಾನ ಶಿಲ್ಪಿ ಡಾ.ಸಮಾಜದಲ್ಲಿ ತಾರತಮ್ಯ, ಅಸಮಾನತೆ ಹೋಗಲಾಡಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಾಬಾಸಾಹೇಬರ ತತ್ವಾದರ್ಶಗಳು ನಮಗೆಲ್ಲರಿಗೂ ಸ್ಫೂರ್ತಿದಾಯಕ' ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂ ಮಾಡಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ

'ಭಾರತೀಯ ಸಂವಿಧಾನ ಶಿಲ್ಪಿ ಬಹುಜನ ನಾಯಕ್, ಮಹಾನ್ ಸಮಾಜ ಸುಧಾರಕ ಮತ್ತು ಕ್ರಾಂತಿಕಾರಿ ಮಹಾಮಾನ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ನಮನಗಳು' ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕೂ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

"ಭಾರತದ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಸಮಾಜದಲ್ಲಿ ಸಮಾನತೆಯನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಡಾ. ಬಿ. ಆರ್‌ ಅಂಬೇಡ್ಕರ್ ಸಾಧನೆ ಹಾಗೂ ದೇಶ ನಿರ್ಮಾಣದಲ್ಲಿ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಿಸಿದ್ದಾರೆ.

ಮಧ್ಯಪ್ರದೇಶ ಸಿಎಂ ಚೌಹಾಣ್ ಶಿವರಾಜ್ ನಮನ

ಸಾಮಾಜಿಕ ನ್ಯಾಯದ ಹರಿಕಾರ ಮತ್ತು ಭಾರತೀಯ ಸಂವಿಧಾನದ ಶಿಲ್ಪಿ, ಭಾರತ ರತ್ನ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನದಂದು ಮಧ್ಯಪ್ರದೇಶ ಮುಖ್ಯಮಂತ್ರಿ ಚೌಹಾಣ್ ಶಿವರಾಜ್ ಅವರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಸಹ ಇದ್ದರು.

ನಿರ್ದೇಶಕ ಮಧುರ್ ಭಂಡಾರ್ಕರ್ ಕೂ ಸಂದೇಶ

ಭಾರತೀಯ ಸಂವಿಧಾನದ ಶಿಲ್ಪಿ, ಮಹಾನ್ ದಾರ್ಶನಿಕ ಮತ್ತು ಸಮಾಜ ಸುಧಾರಕ ಭಾರತ ರತ್ನ ಶ್ರೀ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು' ಎಂದು ನಿರ್ದೇಶಕ ಮಧುರ್ ಭಂಡಾರ್ಕರ್ ಕೂ ಮಾಡಿದ್ದಾರೆ.

ಸ್ವಾಮಿ ಅವಧೇಶಾನಂದ ಗಿರಿ ಕೂ ಸಂದೇಶ

'ಮೂಲವಸ್ತುವಿನ ದೃಷ್ಟಿಯಿಂದ ಮನುಷ್ಯ ಮತ್ತು ಸಮಾಜದ ಇತರ ಜೀವಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಆದ್ದರಿಂದ ನಾವು ಸಮಾಜ ಮತ್ತು ರಾಷ್ಟ್ರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು. ಅನಾದಿ ಕಾಲದಿಂದಲೂ, ಸಾರ್ವತ್ರಿಕ ಶಾಂತಿ ಮತ್ತು ಸಾಮರಸ್ಯದ ಮೂಲಗಳು ಸನಾತನ ಹಿಂದೂ ವೈದಿಕ ಸಂಸ್ಕೃತಿಯಲ್ಲಿ ಸೇರಿಕೊಂಡಿವೆ' ಎಂದು ಜುನಾ ಅಖಾರದ ಆಚಾರ್ಯ ಮಹಾಮಂಡಲೇಶ್ವರರಾದ ಸ್ವಾಮಿ ಅವಧೇಶಾನಂದ ಗಿರಿ ಅಂಬೇಡ್ಕರ್ ಅವರನ್ನು ಸ್ಮರಿಸಿದ್ದಾರೆ.

English summary
BR Ambedkar Jayanti: Central Ministers, Political Leader Wishes on Social Media. Here Read to Know How many Leaders Done Tweets And Koo Message.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X