ಬ್ರಾಂಡ್ ಬೆಂಗಳೂರು: ಕೆನಡಾ ಮೂಲದ ಡಬ್ಲ್ಯುಡಿಒ ಸಂಸ್ಥೆಯೊಂದಿಗೆ ಸರ್ಕಾರದ ಒಪ್ಪಂದ
ಬೆಂಗಳೂರು, ಜುಲೈ. 24: 'ಬ್ರಾಂಡ್ ಬೆಂಗಳೂರು' ಯೋಜನೆಯ ಅಂಗವಾಗಿ ಬೆಂಗಳೂರಿಗೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಸೋಮವಾರ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಜತೆ ಒಪ್ಪಂದ ಮಾಡಿಕೊಂಡಿದೆ.
"ನಮ್ಮ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರನ್ನಾಗಿ ಮಾಡುವ ಪ್ರಯತ್ನದಲ್ಲಿ ಇಂದು ಮಹತ್ವದ ಹೆಜ್ಜೆ ಇಟ್ಟಿದ್ದು ಕೆನಡಾ ಮೂಲದ ವರ್ಲ್ಡ್ ಡಿಸೈನ್ ಸಂಸ್ಥೆಯೊಂದಿಗೆ (WDO) ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಸಂಸ್ಥೆಯು ನವ ಬೆಂಗಳೂರನ್ನು ಕಟ್ಟಲು ಅಗತ್ಯವಿರುವ ಸಲಹೆಗಳನ್ನು ಬಿಬಿಎಂಪಿ ಹಾಗೂ ಕರ್ನಾಟಕ ಸರ್ಕಾರಕ್ಕೆ ನೀಡಲಿದೆ. ಸಂಸ್ಥೆಯ 200 ಮಂದಿ ನುರಿತ ಇಂಜಿನಿಯರ್‌ಗಳು ಬೆಂಗಳೂರಿನಲ್ಲಿ ಬೀಡು ಬಿಟ್ಟು ಇಲ್ಲಿನ ರಸ್ತೆಗಳು, ಫುಟ್‌ಪಾತ್, ಜಂಕ್ಷನ್‌ಗಳು, ಫ್ಲೈಓವರ್‌ಗಳು ಸೇರಿಂತೆ ಮೊದಲಾದ ಮೂಲಸೌಕರ್ಯಗಳ ವಿನ್ಯಾಸ ಮಾಡಿ ಸಲಹೆ ನೀಡಲಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೆಲ ವರ್ಷಗಳ ಹಿಂದೆ ವಿಶ್ವ ವಿನ್ಯಾಸ ರಾಜಧಾನಿ ಯಾವುದು ಎಂಬ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಇದರಲ್ಲಿ ಬೆಂಗಳೂರು ಯಶ ಕಾಣಲಿಲ್ಲ. ಬೆಂಗಳೂರು ವಾಸಯೋಗ್ಯ ನಗರವಾಗಿ ನಿರ್ಮಾಣ ಮಾಡಬೇಕಿದೆ. ಇದಕ್ಕಾಗಿ ಈ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ನಗರವನ್ನು ಬೆಂಗಳೂರನ್ನು ಜಾಗತಿಕ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಯೋಜನೆಯಾದರೂ ಅದರ ವಿನ್ಯಾಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ನಾವು ಇಂದು ಈ ಸಂಸ್ಥೆ ಜೊತೆ ಕೈಜೋಡಿಸುತ್ತಿದ್ದೇವೆ. ಈ ಸಂಸ್ಥೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳ ವಿಚಾರದಲ್ಲಿ ಸಲಹೆ, ಮಾರ್ಗದರ್ಶನ ನೀಡಲಿದೆ ಎಂದು ಹೇಳಿದ್ದಾರೆ.
ಆರಂಭದಲ್ಲಿ ಈ ಒಪ್ಪಂದ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈಗ ಇದನ್ನು ಬಿಎಂಆರ್‌ಡಿಎ ವ್ಯಾಪ್ತಿಯ ಪ್ರದೇಶಗಳನ್ನು ಒಳಗೊಳ್ಳಲಾಗಿದೆ. ಬೆಂಗಳೂರಿಗೆ ತನ್ನದೇ ಆದ ಇತಿಹಾಸ, ಪರಂಪರೆ, ಸಂಸ್ಕೃತಿ ಹೊಂದಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದದಿಂದ ನಮಗೆ ಶಕ್ತಿ ಹೆಚ್ಚಲಿದೆ. ಸರ್ಕಾರ ಹಾಗೂ ಬಿಬಿಎಂಪಿ ಪರವಾಗಿ ಆಯುಕ್ತರು ಈ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ.
ನಮ್ಮ ಹಿರಿಯರು ತಮ್ಮದೇ ಆದ ರೀತಿಯಲ್ಲಿ ಬೆಂಗಳೂರನ್ನು ಕಟ್ಟಿದ್ದಾರೆ. ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ನಾವು ಅದಕ್ಕೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಈಗಿರುವ ಬೆಂಗಳೂರಿನಲ್ಲಿ ಯಾವ ರೀತಿಯ ಬದಲಾವಣೆ ಮಾಡಬಹುದು, ಮುಂದೆ ಬೆಳೆಯಲಿರುವ ಬೆಂಗಳೂರನ್ನು ಹೇಗೆ ರೂಪಿಸಬೇಕು, ಹೊಸ ಸ್ಯಾಟಲೈಟ್ ಟೌನ್ ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ಸಲಹೆ ನೀಡಲು ಈ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಸಂಸ್ಥೆ ಕೇಂದ್ರ ಕಚೇರಿ ಕೆನಡಾದಲ್ಲಿದ್ದು, ವಿಶ್ವದ ಅತ್ಯುತ್ತಮ ಆರ್ಕಿಟೆಕ್ಚರ್ ಗಳನ್ನು ಹೊಂದಿದೆ. ಈ ಸಂಸ್ಥೆ ಅನೇಕ ದೇಶಗಳ ಜತೆ ಕೆಲಸ ಮಾಡಿದೆ. ಮುಂದಿನ ದಿನಗಳಲ್ಲಿ ಸುಮಾರು 200-300 ಇಂಜಿನಿಯರ್ ಗಳು ಕೆಲಸ ಮಾಡಲಿದ್ದಾರೆ. ಇಲ್ಲಿ ಅವರು ಯಾವುದೇ ಕಟ್ಟಣ ನಿರ್ಮಾಣ ಮಾಡುವುದಿಲ್ಲ. ಇವರು ಬೆಂಗಳೂರಿಗೆ ಹೊಸ ರೂಪ ನೀಡಲು ಸಲಹೆ ನೀಡುತ್ತಾರೆ. ಇವರು ಈಗ ಯಾವ ರೀತಿ ಸಲಹೆ ನೀಡುತ್ತಾರೆ ಎಂಬುದನ್ನು ನೋಡಿಕೊಂಡು ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳು ಹಾಗೂ ತಾಲೂಕು ಕೇಂದ್ರಗಳಿಗೆ ರೂಪ ನೀಡುವ ಬಗ್ಗೆ ಆಲೋಚಿಸುತ್ತೇವೆ. ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಪ್ರಯತ್ನ ಮಾಡುತ್ತಿದ್ದು, ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಮನವಿ ಮಾಡಿದ್ದಾರೆ.
ಈ ಹಿಂದೆ ಈ ಸಂಸ್ಥೆ ಜೊತೆ 200 ಕೋಟಿ ರೂ.ಗೆ ಒಪ್ಪಂದದ ಬಗ್ಗೆ ಮಾತನಾಡಿ, "ಒಪ್ಪಂದದ ಮೊತ್ತವನ್ನು ಕಡಿಮೆ ಮಾಡಿದ್ದೇವೆ. ಮೊದಲ ವರ್ಷ ನೀಡಬೇಕಾದ ಮೊತ್ತದಲ್ಲಿ ಕೇವಲ ಅರ್ಧದಷ್ಟು ಮಾತ್ರ ನೀಡುತ್ತೇವೆ. ಅವರ ಕೆಲಸ ಹೇಗಿರುತ್ತದೆ ಎಂದು ನೋಡಿ ನಂತರ ಮುಂದುವರಿಯುವುದಾಗಿ ಹೇಳಿದ್ದೇವೆ. ಅವರು ನೀಡುವ ಸಲಹೆಗಳು ನಾವು ಜಾರಿ ಮಾಡುವಂತಿರಬೇಕು. ಹೀಗಾಗಿ ಈ ಒಪ್ಪಂದವನ್ನು ಷರತ್ತುಗಳ ಆಧಾರದ ಮೇಲೆ ಐದು ವರ್ಷಕ್ಕೆ ಮಾಡಿಕೊಳ್ಳಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.
"ಈ ಹಿಂದೆ ಕೂಡ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಅದರ ವ್ಯಾಪ್ತಿ ಹೆಚ್ಚಿಸಲಾಗಿದೆ. ಈಗ ಬೆಳೆದಿರುವ ಬೆಂಗಳೂರು ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ ಬೆಂಗಳೂರು ನಗರದಲ್ಲಿ ಎಷ್ಟು ಬದಲಾವಣೆ ತರಲು ಸಾಧ್ಯ? ಮುಂದೆ ಬೆಂಗಳೂರು ಬೆಳೆಯುವ ಪ್ರದೇಶಗಳಲ್ಲಿ ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಲು ಈ ತೀರ್ಮಾನ ಮಾಡಲಾಗಿದೆ" ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications