ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ "ಕೋವ್ಯಾಕ್ಸಿನ್" ಲಸಿಕೆ ತಿರಸ್ಕರಿಸಿದ ಬ್ರೆಜಿಲ್; ಕಾರಣವೇನು?

|
Google Oneindia Kannada News

ನವದೆಹಲಿ, ಮಾರ್ಚ್ 31: ಭಾರತದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯನ್ನು ಆಮದು ಮಾಡಿಕೊಳ್ಳಲು ಬ್ರೆಜಿಲ್ ಆರೋಗ್ಯ ನಿಯಂತ್ರಕ ಸಂಸ್ಥೆ ನಿರಾಕರಿಸಿದೆ.

"ಉತ್ತಮ ಔಷಧ ಉತ್ಪಾದನಾ ಮಾನದಂಡಗಳನ್ನು ಪೂರೈಸದ ಕಾರಣ ಕೋವ್ಯಾಕ್ಸಿನ್ ಲಸಿಕೆಯನ್ನು ನಿರಾಕರಿಸಲಾಗುತ್ತಿದೆ" ಎಂದು ಬ್ರೆಜಿಲ್ ಸರ್ಕಾರ ಗೆಜೆಟ್‌ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

Explained: ಭಾರತದಲ್ಲಿ ಕೊರೊನಾ ಲಸಿಕೆ ವ್ಯರ್ಥಕ್ಕೆ ಕಾರಣವೇನು?Explained: ಭಾರತದಲ್ಲಿ ಕೊರೊನಾ ಲಸಿಕೆ ವ್ಯರ್ಥಕ್ಕೆ ಕಾರಣವೇನು?

ಕಳೆದ ತಿಂಗಳು ಭಾರತ್ ಬಯೋಟೆಕ್‌ನಿಂದ 20 ಮಿಲಿಯನ್ ಡೋಸ್ ಲಸಿಕೆಗಳನ್ನು ಖರೀದಿಸಲು ಬ್ರೆಜಿಲ್ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು. ಇದೀಗ ಲಸಿಕೆ ಆಮದು ಮಾಡಿಕೊಳ್ಳಲು ಅನುಮತಿಯನ್ನು ನಿರಾಕರಿಸಿದೆ.

Brazil Health Regulatory Denied Permission To Import Bharath Biotech Covaxin

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಭಾರತ್ ಬಯೋಟೆಕ್, "ಬ್ರೆಜಿಲ್ ಗೆಜೆಟ್ ಸೂಚಿಸಿರುವ ಅವಶ್ಯಕತೆಗಳನ್ನು ಪೂರೈಸಲಾಗುವುದು. ಈ ಕುರಿತು ಬ್ರೆಜಿಲ್ ಎನ್ ಆರ್‌ಎ ಜೊತೆ ಚರ್ಚಿಸಿ ಶೀಘ್ರದಲ್ಲಿಯೇ ವಿಷಯವನ್ನು ಇತ್ಯರ್ಥಗೊಳಿಸಲಾಗುವುದು. ಎಲ್ಲಾ ಮಾನದಂಡಗಳ ಕುರಿತು ಪುರಾವೆ ಸಲ್ಲಿಸಲಿದ್ದೇವೆ" ಎಂದು ತಿಳಿಸಿದೆ.

ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ಜೊತೆಗೂಡಿ ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿದ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತದಲ್ಲಿ ನೀಡಲಾಗುತ್ತಿದೆ. ಮೂರನೇ ಹಂತದ ಕ್ಲಿನಿಕಲ್ ಪ್ರಯೋಗದಲ್ಲಿ ಈ ಲಸಿಕೆಯು 81% ದಕ್ಷತೆ ತೋರಿದ ಕಾರಣ ಈ ತಿಂಗಳ ಆರಂಭದಲ್ಲಿ ಮತ್ತೆ ಕ್ಲಿನಿಕಲ್ ಪ್ರಯೋಗಕ್ಕೆ ಒಳಪಡಿಸಲಾಗಿತ್ತು. ಬ್ರಿಟನ್ ಕೊರೊನಾ ರೂಪಾಂತರ ಸೋಂಕಿಗೂ ಕೋವ್ಯ್ಸಾಕ್ಸಿನ್ ಪರಿಣಾಮಕಾರಿ ಎಂದು ತಜ್ಞರು ಮಾಹಿತಿ ನೀಡಿದ್ದರು.

ನೇಪಾಳ್ ಹಾಗೂ ಜಿಂಬಾಬ್ವೆ ಕೂಡ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ ನೀಡಿವೆ. ಸುಮಾರು 40 ದೇಶಗಳು ಕೋವ್ಯಾಕ್ಸಿನ್ ಖರೀದಿಸಲು ಸಿದ್ಧವಿರುವುದಾಗಿ ಭಾರತ್ ಬಯೋಟೆಕ್ ತಿಳಿಸಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

English summary
Brazilian health regulator has denied permission to import Bharat Biotech's Covaxin citing, vaccine did not meet the Good Manufacturing Practice (GMP) requirements
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X