Breaking: ರತನ್ ಟಾಟಾ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವರ ಆರೋಗ್ಯ ಏರುಪೇರಾಗಿರುವ ಬಗ್ಗೆ ವರದಿಗಳು ಬಂದಿದ್ದವು. ಆದರೆ, ಸೋಷಿಯಲ್‌ ಮೀಡಿಯಾದ ಮೂಲಕ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಅವರ ಆರೋಗ್ಯ ಕ್ಷಿಣಿಸುತ್ತಿರುವ ಬಗ್ಗೆ ವರದಿಯಾಗಿದೆ.

ರತನ್‌ ಟಾಟಾ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಲ್ಲೇ ಇದೆ. ಆದರೆ, ಕಳೆದ ಮೂರು ದಿನಗಳಿಂದ ಅವರ ಆರೋಗ್ಯದಲ್ಲಿ ಭಾರೀ ಏರುಪೇರಾಗಿರುವುದು ವರದಿಯಾಗುತ್ತಿದೆ. ಇದೀಗ ಅವರಿಗೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಈಚೆಗೆ ಅವರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ವಯೋಸಹಜ ಸಮಸ್ಯೆ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಎಂದಷ್ಟೇ ಹೇಳಲಾಗಿತ್ತು. ಆದರೆ, ಇದೀಗ ಅವರ ಆರೋಗ್ಯದಲ್ಲಿ ಭಾರೀ ಏರುಪೇರಾಗುತ್ತಿದೆ ಎಂದು ಹೇಳಲಾಗುತ್ತಿದೆ.

Breaking Ratan Tata s health critical treatment in ICU

ಅಭಿಮಾನಿಗಳಲ್ಲಿ ಆತಂಕ: ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ವಿಷಯವು ಅವರ ಲಕ್ಷಾಂತರ ಅಭಿಮಾನಿಗಳಲ್ಲಿ ಆತಂಕವನ್ನು ಮೂಡಿಸಿದೆ. ರತನ್‌ ಟಾಟಾ ಅವರು ಲಕ್ಷಾಂತರ ಜನ ಅಭಿಮಾನಿಗಳನ್ನು ಹೊಂದಿದ್ದಾರೆ. ಸಾವಿರಾರು ಜನ ಬಡವರಿಗೆ ನೆರವಾಗಿದ್ದಾರೆ. ಸೋಮವಾರವಷ್ಟೇ ಅವರ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಸೋಮವಾರ ಆರೋಗ್ಯದ ಬಗ್ಗೆ ಸ್ಪಷ್ಟನೆ: ರತನ್ ಟಾಟಾ ಅವರ ಆರೋಗ್ಯ ಕ್ಷೀಣಿಸುತ್ತಿದೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಸೋಮವಾರ (ಅಕ್ಟೋಬರ್‌ 7ರಂದೇ) ವರದಿಯಾಗಿತ್ತು. ಆದರೆ, ರತನ್‌ ಟಾಟಾ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ನನ್ನ ಆರೋಗ್ಯವಾಗಿದ್ದೇನೆ. ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ ಎಂದಿದ್ದರು. ತೀವ್ರ ಅನಾರೋಗ್ಯ ಸಮಸ್ಯೆ ಇದೆ ಎನ್ನುವ ಸುದ್ದಿಯನ್ನು ತಳ್ಳಿ ಹಾಕಿದ್ದರು. ಯಾರು ಚಿಂತಿಸಬೇಡಿ ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದರು.

ರತನ್‌ಟಾಟಾ ಅವರ ಹಿನ್ನೆಲೆ: ರತನ್‌ ಟಾಟಾ ಅವರು ಉದ್ಯಮದ ಕಾರಣದಿಂದ ಮಾತ್ರವಲ್ಲ ಭಾರತೀಯರಿಗೆ ಕಡಿಮೆ ಖರ್ಚಿನಲ್ಲಿ ಅವರ ಆಸೆಗಳನ್ನು ಈಡೇರಿಸಿದ್ದಾರೆ. ಭಾರತದಲ್ಲಿನ ಮಧ್ಯಮ ವರ್ಗದವರ ಕನಸುಗಳನ್ನು ಈಡೇರಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಭಾರತೀಯ ಉದ್ಯಮದಲ್ಲೂ ಅಮೋಘ ಸಾಧನೆಯನ್ನು ಅವರು ಮಾಡಿದ್ದಾರೆ. ರತನ್‌ ಟಾಟಾ ಅವರ ಬಗ್ಗೆ ಭಾರತದ ಮಧ್ಯಮ ವರ್ಗಕ್ಕೆ ಅಪಾರ ಗೌರವ ಹಾಗೂ ಅಭಿಮಾನ ಇದೆ. ರತನ್‌ ಟಾಟಾ ಅವರು, ಟಾಟಾ ಸನ್ಸನ್ ಅಧ್ಯಕ್ಷರಾಗಿ 1991ರಲ್ಲಿ ಅಧ್ಯಕ್ಷರಾದರು. ಅಲ್ಲಿಂದ 2012 ರವರೆಗೆ ದೇಶದ ಪ್ರತಿಷ್ಠಿತ ಟಾಟಾ ಸಮೂಹವನ್ನು ಮುನ್ನಡೆಸಿದ್ದರು.

ಅವರ ಅಧಿಕಾರ ಅವಧಿಯಲ್ಲಿ ಟಾಟಾ ಸಮೂಹ ಹಲವು ಪ್ರಮುಖ ಸಾಧನೆಗಳನ್ನು ಮಾಡಿತ್ತು. ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೇ ಅಂತರರಾಷ್ಟ್ರೀಯ ಮಟ್ಟದಲ್ಲೂ ಟಾಟಾ ಸಮೂಹ ತನ್ನದೇ ಆದ ಖ್ಯಾತಿಯನ್ನು ಗಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+