ಶಾಸಕಿ ಭಂಡಾರು ಶ್ರಾವಣಿ ಶ್ರೀ ಸಾಮಾಜಿಕ ಕಳಕಳಿಗೆ ನೆಟ್ಟಿಗರ ಸಲಾಂ
ಅಮರಾವತಿ, ಜೂನ್ 20: ಆಂಧ್ರ ಪ್ರದೇಶದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ರಾಜ್ಯದ ಶಾಸಕಿಯೊಬ್ಬರು ತಮ್ಮ ನಿವಾಸದ ಮುಂದೆ ಹಾಕಿರುವ ಬ್ಯಾನರ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
2024ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಿಂಗನಮಲ ಕ್ಷೇತ್ರದಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ) ಅಭ್ಯರ್ಥಿಯಾಗಿದ್ದ ಭಂಡಾರು ಶ್ರಾವಣಿ ಶ್ರೀ ಗೆಲುವು ಸಾಧಿಸಿದ್ದಾರೆ. ಅವರನ್ನು ಭೇಟಿಯಾಗಲು ಅಭಿಮಾನಿಗಳು, ಕಾರ್ಯಕರ್ತರು ಆಗಮಿಸುತ್ತಿದ್ದಾರೆ.

ಭಂಡಾರು ಶ್ರಾವಣಿ ಶ್ರೀ ತಮ್ಮನ್ನು ಭೇಟಿ ಮಾಡಲು ಬರುವವರಿಗೆ ಪ್ರಮುಖ ಸೂಚನೆಯೊಂದನ್ನು ನೀಡಿದ್ದಾರೆ. ಅಭಿನಂದನೆ ಸಲ್ಲಿಸಲು ಬರುವವರು ಹೂವಿನ ಹಾರ, ಬೊಕ್ಕೆ, ಶಾಲು ಇತ್ಯಾದಿಗಳನ್ನು ತರಬೇಡಿ ಎಂದು ಹೇಳಿದ್ದಾರೆ. ಈ ಕುರಿತು ಮನೆಯ ಮುಂದೆ ಬ್ಯಾನರ್ ಸಹ ಮಾಡಿಸಿ ಹಾಕಿದ್ದಾರೆ. ಇದರ ಫೋಟೋ ಈಗ ವೈರಲ್ ಆಗಿದೆ.
ಬ್ಯಾನರ್‌ನಲ್ಲಿ ಇರುವುದೇನು?: ಟಿಡಿಪಿ ಶಾಸಕಿ ಭಂಡಾರು ಶ್ರಾವಣಿ ಶ್ರೀ ತಮ್ಮ ನಿವಾಸಕ್ಕೆ ಆಗಮಿಸುವವರು ಹೂವಿನ ಹಾರ, ಬೊಕ್ಕೆ, ಶಾಲುಗಳನ್ನು ತರಬೇಡಿ. ಇದರ ಬದಲಾಗಿ ಪೆನ್ನು, ನೋಟ್ ಬುಕ್‌ಗಳನ್ನು ತನ್ನಿ. ಅವುಗಳನ್ನು ಸಂಗ್ರಹ ಮಾಡಿ ಅಗತ್ಯ ಇರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲು ಅನುಕೂಲವಾಗುತ್ತದೆ ಎಂದು ಬ್ಯಾನರ್‌ನಲ್ಲಿ ಹೇಳಿದ್ದಾರೆ.
ಶಾಸಕಿ ಭಂಡಾರು ಶ್ರಾವಣಿ ಶ್ರೀ ಈ ಸಾಮಾಜಿಕ ಕಳಕಳಿಗೆ ಅಪಾರವಾದ ಪ್ರಶಂಸೆ ವ್ಯಕ್ತವಾಗುತ್ತಿದೆ. ಹಲವಾರು ಜನರು ತಮ್ಮ ಟ್ವೀಟ್ ಖಾತೆಯಲ್ಲಿ ಶಾಸಕಿ ಮನೆ ಮುಂದಿನ ಬ್ಯಾನರ್ ಫೋಟೋ ಹಂಚಿಕೊಂಡಿದ್ದು, ಶಾಸಕಿಯ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಹೂವಿನ ಬೊಕ್ಕೆ, ಶಾಲುಗಳಿಂದ ಯಾವುದೇ ಉಪಯೋಗವಿಲ್ಲ. ಹೀಗೆ ನೋಟ್ ಬುಕ್, ಪೆನ್ ನೀಡಿದರೆ ಅದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಾಸಕಿಯ ನಡೆ ಇತರರಿಗೆ ಮಾದರಿ ಎಂದು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.
ಸಿಂಗನಮಲ ಕ್ಷೇತ್ರದಲ್ಲಿ ತೆಲುಗು ದೇಶಂ ಪಕ್ಷದ ಅಭ್ಯರ್ಥಿಯಾಗಿದ್ದ ಭಂಡಾರು ಶ್ರಾವಣಿ ಶ್ರೀ 102957 ಮತಗಳನ್ನು ಪಡೆದು ಎದುರಾಳಿಯಾಗಿದ್ದ ವೈಎಸ್ಆರ್‌ಸಿಪಿಯ ಎಂ. ವೀರಾಂಜನೇಯಲು ಅವರನ್ನು ಸೋಲಿಸಿದ್ದಾರೆ. ಬಿಎಸ್‌ಪಿ ಮತ್ತು ಕಾಂಗ್ರೆಸ್‌ನ ಅಭ್ಯರ್ಥಿಗಳು ಸಹ ಚುನಾವಣೆಯಲ್ಲಿ ಶ್ರಾವಣಿ ಶ್ರೀ ಅವರಿಗೆ ಎದುರಾಳಿಯಾಗಿದ್ದರು.
ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ ನಡೆದಿತ್ತು. ಚುನಾವಣೆಯಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅಧಿಕಾರ ಕಳೆದುಕೊಂಡಿದ್ದರು. ಟಿಡಿಪಿ 135, ಜನಸೇನಾ ಪಕ್ಷ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಗಳಿಸಿವೆ.
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದವು. ಈಗ ಆಂಧ್ರ ಪ್ರದೇಶದಲ್ಲಿ ಎಂ. ಚಂದ್ರಬಾಬು ನಾಯ್ಡು 4ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಜನಸೇನಾ ಪಕ್ಷದ ಮೂವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.
ಚುನಾವಣೆಯಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪಿಠಾಪುರಂ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 1,34,394 ಮತಗಳನ್ನು ಪಡೆದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ, ನಾಲ್ಕು ಖಾತೆಗಳ ಹೊಣೆಯನ್ನು ಅವರಿಗೆ ನೀಡಲಾಗಿದೆ.
ಆಂಧ್ರ ಪ್ರದೇಶದ ಲೋಕಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಯಲ್ಲಿ ಇದು ಪ್ರಮುಖ ಪಕ್ಷವಾಗಿದೆ. ಎನ್‌ಡಿಎ ಮೈತ್ರಿಕೂಟದ ಜೊತೆ ಸೇರಿದ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications