Telangana Election: ಖರ್ಗೆ ರಾಜ್ಯದಲ್ಲಿ ವಿದ್ಯುತ್ ಇಲ್ಲ! ಕಾಂಗ್ರೆಸ್ ವಿರುದ್ಧ ಕೆಟಿಆರ್ ವಾಗ್ದಾಳಿ
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ, ರಾಜಕೀಯ ಚಟುವಟಿಕೆಗಳು ತೀವ್ರವಾಗಿವೆ. ನವೆಂಬರ್ 30ರಂದು ಮತದಾನ ನಡೆಯಲಿದ್ದು, ಆಡಳಿತಾರೂಢ ಬಿಆರ್‌ಎಸ್ ಮತ್ತೆ ಅಧಿಕಾರಕ್ಕೆ ಬರಲು ಭಾರಿ ಪ್ರಯತ್ನ ಮಾಡುತ್ತಿದೆ.
ಆಡಳಿತಾರೂಢ ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ ಟಿ ರಾಮರಾವ್ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ರಾಜ್ಯವಾದ ಕರ್ನಾಟಕದಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸಾಧಿಸಿದ ಪ್ರಗತಿಯನ್ನು ಹಳಿತಪ್ಪಿಸುತ್ತದೆ ಎಂದು ಅವರು ವಾದಿಸಿದರು.
ಕರ್ನಾಟಕದವರು ಪಶ್ಚಾತಾಪ ಪಡುತ್ತಿದ್ದಾರೆ
ಇತರ ಪಕ್ಷಗಳ ಮುಖಂಡರು ಬಿಆರ್‌ಎಸ್‌ಗೆ ಸೇರ್ಪಡೆಗೊಂಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನೆರೆಯ ಕರ್ನಾಟಕದ ರೈತರು ಈಗ ಕಾಂಗ್ರೆಸ್‌ಗೆ ಮತ ಹಾಕಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಿದ್ದಾರೆ, ವಿದ್ಯುತ್ ಪೂರೈಕೆ ಕಡಿಮೆ ಮಾಡಿದ್ದನ್ನು ವಿರೋಧಿಸಿ ರೈತರು ಕರ್ನಾಟಕದ ವಿದ್ಯುತ್ ಸರಬರಾಜು ಕಚೇರಿಗೆ ಮೊಸಳೆಯನ್ನು ತಂದಿದ್ದಾರೆ ಎಂದು ಅವರು ಹೇಳಿದರು.
"ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ರಾಜ್ಯದಲ್ಲಿ, ರೈತರು ಈಗ ಈ ಜನರಿಗೆ ಅಧಿಕಾರ ಕೊಟ್ಟು ತಪ್ಪು ಮಾಡಿದೆವು ಎಂದು ಪಶ್ಚಾತ್ತಾಪ ಪಡುತ್ತಿದ್ದಾರೆ, ಅಂತಹ ಜನರು ಈಗ ನಮ್ಮ ರೈತರನ್ನು ವಂಚಿಸಿ ಒಂದು ಅವಕಾಶವನ್ನು ಹುಡುಕುತ್ತಿದ್ದಾರೆ," ಎಂದು ಟೀಕಿಸಿದರು.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಎ ರೇವಂತ್ ರೆಡ್ಡಿ ಅವರು ಬಿಆರ್‌ಎಸ್ ಸರ್ಕಾರವು ಕೃಷಿಗೆ ನೀಡಿದ 24x7 ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಕರ್ನಾಟಕದಲ್ಲಿ ರೈತರಿಗೆ ಕೇವಲ ಮೂರು ಗಂಟೆಗಳ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ತೆಲಂಗಾಣದಲ್ಲಿ ಅಧಿಕಾರಕ್ಕಾಗಿ ಒಂದು ಅವಕಾಶವನ್ನು ಕಾಂಗ್ರೆಸ್ ಬಯಸುತ್ತಿದೆ ಆದರೆ ಈ ಹಿಂದೆ 11 ಅವಕಾಶಗಳನ್ನು ನೀಡಲಾಗಿತ್ತು ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ರಾಮರಾವ್ ಹೇಳಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಸುದೀರ್ಘ ಆಡಳಿತದಲ್ಲಿ ಸಾಕಷ್ಟು ವಿದ್ಯುತ್, ನೀರು ಮತ್ತು ಇತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದರು.
ಬಿಆರ್‌ಎಸ್ ಆಡಳಿತದಲ್ಲಿ ವಿದ್ಯುತ್, ನೀರಾವರಿ, ಕುಡಿಯುವ ನೀರು ಪೂರೈಕೆ ಮತ್ತು ಕಲ್ಯಾಣ ಕಾರ್ಯಕ್ರಮಗಳು ಸುಧಾರಣೆ ಕಂಡಿವೆ ಎಂದು ಹೇಳಿದ ರಾಮರಾವ್, ಕಾಂಗ್ರೆಸ್‌ಗೆ ಅಧಿಕಾರದ ಚುಕ್ಕಾಣಿ ಹಿಡಿದರೆ ಪರಿಸ್ಥಿತಿ ಹದಗೆಡುತ್ತದೆ ಎಂದು ಹೇಳಿದರು.
"ಮಲ್ಲಿಕಾರ್ಜುನ್ ಖರ್ಗೆ ಅವರೇ, ನಿಮ್ಮ ತವರು ರಾಜ್ಯದಲ್ಲಿ ಕೇವಲ ಐದು ಗಂಟೆ ವಿದ್ಯುತ್ ಪೂರೈಕೆಯಾಗಿದೆ. ತೆಲಂಗಾಣದಲ್ಲಿ ನೀವು ಮತ್ತು ನಿಮ್ಮ ಪಕ್ಷ ಏನು ಸಾಧಿಸಬಹುದು," ಎಂದು ಅವರು ಪ್ರಶ್ನೆ ಮಾಡಿದರು.
ಬಿಆರ್‌ಎಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಜನರ ಬಳಿಗೆ ಕೊಂಡೊಯ್ಯಲು 'ಕೆಸಿಆರ್ ಭರೋಸಾ' (ಭರವಸೆ)ಯ ಹೊಸ ಪ್ರಚಾರ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ ಎಂದರು.












Click it and Unblock the Notifications