10 ವರ್ಷದ ಬಾಲಕಿಗೆ ಕಿರುಕುಳ: ಹೈದರಾಬಾದ್ನಲ್ಲಿ ಬಿಆರ್ಎಸ್ ಪಕ್ಷದ ನಾಯಕನ ಬಂಧನ
ಹೈದರಾಬಾದ್, ಡಿ. 20: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತ್ ರಾಷ್ಟ್ರ ಸಮಿತಿಯ (ಬಿಆರ್ಎಸ್) ಸ್ಥಳೀಯ ಮುಖಂಡನೊಬ್ಬನನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿದೆ.
ಆರೋಪಿಯನ್ನು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪಕ್ಷದ ನಾಯಕ ಅಖೀಲ್ ಅಹ್ಮದ್ ಎಂದು ಗುರುತಿಸಲಾಗಿದೆ. 10 ವರ್ಷದ ಬಾಲಕಿಗೆ ಅಂಗಡಿಯಲ್ಲಿ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧದನಕ್ಕೆ ಕಳುಹಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
"10 ವರ್ಷದ ಬಾಲಕಿಯೊಬ್ಬರು ಮೆಡಿಕಲ್ ಶಾಪ್ಗೆ ಹೋಗಿದ್ದಾರೆ. ಅಲ್ಲಿ ಆರೋಪಿ ಅಕೀಲ್ ಅಹ್ಮದ್ ಎಂಬ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ನಂತರ, ಬಾಲಕಿ ಮನೆಗೆ ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
"ಬಾಲಕಿ ಪೋಷಕರಿಂದ ದೂರು ಸ್ವೀಕರಿಸಿದ ನಂತರ, ನಾವು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ" ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications