ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಜೆಪಿ ಕೇಂದ್ರ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದ ಬಿಎಸ್ ಯಡಿಯೂರಪ್ಪ

|
Google Oneindia Kannada News

ನವದೆಹಲಿ, ಆಗಸ್ಟ್ 17: ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಲಾಗಿದೆ. ಜೊತೆಗೆ ಪಕ್ಷದ ಸಂಸದೀಯ ಮಂಡಳಿಯಲ್ಲೂ ಸ್ಥಾನ ನೀಡಲಾಗಿದೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ದೇವೇಂದ್ರ ಫಡ್ನವಿಸ್ ಸೇರಿದಂತೆ ಇತರ 15 ಸದಸ್ಯರಿದ್ದಾರೆ.

BS Yediyurappa Name included in BJP Central Election Committee

ಪಕ್ಷದ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸೇರಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯಿಂದ ಕೈಬಿಡಲಾಗಿದೆ.

BS Yediyurappa Name included in BJP Central Election Committee

ಬಿಜೆಪಿ ಸಂಸದೀಯ ಮಂಡಳಿಗೆ ಹೊಸ ಸೇರ್ಪಡೆಯಾಗಿ ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸತ್ಯನಾರಾಯಣ್ ಜಟಿಯಾ, ಸುಧಾ ಯಾದವ್ ಅವರನ್ನು ಸೇರಿಸಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದ ಮಂಡಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇರಲಿದ್ದಾರೆ.

ನಿತಿನ್ ಗಡ್ಕರಿ ಅವರನ್ನು ಪ್ರಮುಖ ಸಮಿತಿಯಿಂದ ಹೊರಗಿಟ್ಟಿರುವುದು ದೊಡ್ಡ ಆಶ್ಚರ್ಯಕ್ಕೆ ಕಾರಣವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಅತ್ಯಂತ ಹಿರಿಯ ಸಚಿವರಲ್ಲಿ ಒಬ್ಬರಾದ ಗಡ್ಕರಿ ಅವರು ಬಿಜೆಪಿಯ ಮಾಜಿ ಮುಖ್ಯಸ್ಥರಾಗಿದ್ದಾರೆ. ಇಲ್ಲಿಯವರೆಗೆ, ಪಕ್ಷವು ಸಾಂಪ್ರದಾಯಿಕವಾಗಿ ತನ್ನ ಮಾಜಿ ಅಧ್ಯಕ್ಷರನ್ನು ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸದೀಯ ಸಮಿತಿಯಿಂದ ಕೈಬಿಟ್ಟಿಲ್ಲ.

ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಪುನರಾಯ್ಕೆಯಾದ ನಂತರ ಹಿಮಂತ ಬಿಸ್ವಾ ಶರ್ಮಾಗೆ ದಾರಿ ಮಾಡಿಕೊಡಲು ಒಪ್ಪಿಕೊಂಡ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರನ್ನು ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಉಪಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ ದೇವೇಂದ್ರ ಫಡ್ನವೀಸ್ ಅವರನ್ನು ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದೆ.

Recommended Video

ಬಿಜೆಪಿಯೊಳಗೆ ಸಚಿವ ಬಿ.ಶ್ರೀರಾಮುಲು ಸಿಡಿಸಿದ ಕಿಡಿ | Oneindia Kannada

English summary
Former CM of Karnataka BS Yediyurappa has been taken into BJP Central election committee. The committee has 15 members including PM modi, Home Minister Amit Shah, party President JP Nadda, Devendra Fadnavis & others.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X