ಪಾಕಿಸ್ತಾನಕ್ಕೆ ಗಣರಾಜ್ಯೋತ್ಸವ ಸಿಹಿ ಹಂಚದ ಬಿಎಸ್ಎಫ್
ಅತ್ತರಿ, ಜನವರಿ 26: ಭಾರತೀಯ ಸೇನೆಯ ಬಿಎಸ್ಎಫ್ ಪಡೆಯು ಈ ಬಾರಿ ಪಾಕಿಸ್ತಾನದೊಂದಿಗೆ ಗಣರಾಜ್ಯೋತ್ಸವ ದಿನದ ಸಿಹಿ ಹಂಚದಿರಲು ನಿರ್ಧರಿಸಿದೆ.
ಪಾಕಿಸ್ತಾನದಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆ ಆಗುತ್ತಿದ್ದು, ಇತ್ತೀಚೆಗಷ್ಟೆ ಪಾಕಿಸ್ತಾನವು ಬಿಎಸ್ಎಫ್ ಸೇನೆ ನೆಲೆಯನ್ನೇ ಗುರಿಯಾಗಿರಿಸಿಕೊಂಡು ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಬಿಎಸ್ಎಫ್ ಜವಾನರು ಅಸು ನೀಗಿದ್ದರು. ಹೀಗಾಗಿ ಬಿಎಸ್ಎಫ್ ಈ ನಿರ್ಧಾರಕ್ಕೆ ಬಂದಿದೆ.
ಯಾವುದೇ ಧಾರ್ಮಿಕ ಹಬ್ಬ ಅಥವಾ ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಭಾರತೀಯ ಸೇನೆಯು ಪಾಕಿಸ್ತಾನ ಸೇನೆಗೆ ಸಿಹಿ ನೀಡುವುದು ಸಂಪ್ರದಾಯವಾಗಿ ನಡೆದು ಬಂದಿದೆ, ಆದರೆ ಈ ಬಾರಿ ಪಾಕಿಸ್ತಾನದ ದ್ವೇಷ ನೀತಿಯಿಂದ ಬಾಂಧವ್ಯದ ಸಂಪ್ರದಾಯವೊಂದು ಕಡಿದಂತಾಗಿದೆ.

ಈ ರೀತಿ ಸಿಹಿ ಹಂಚಿಕೊಳ್ಳದಿರುವುದು ಇದು ಮೊದಲಲ್ಲ, ಪಾಕಿಸ್ತಾನವು ಕದನ ವಿರಾಮ ಉಲ್ಲಂಘನೆ ಮಾಡಿದಾಗಲೆಲ್ಲಾ ಭಾರತೀಯ ಸೇನೆಯು ಪಾಕಿಸ್ತಾನದೊಂದಿಗೆ ಸಿಹಿ ಹಂಚಿಕೊಂಡಿಲ್ಲ, ಕಳೆದ ದೀಪಾವಳಿ ಸಂದರ್ಭದಲ್ಲಿ ಭಾರತೀಯ ಸೇನೆ ನೀಡಿದ್ದ ಸಿಹಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು.
ಈ ಸಿಹಿ ಹಂಚುವ ಸಂಪ್ರದಾಯ ಮುಖ್ಯವಾಗಿ ನಡೆಯುವುದು ಪಂಜಾಬಿನ ಭಾರತ-ಪಾಕಿಸ್ತಾನದ ಚೆಕ್ಪೋಸ್ಟ್ ಗಡಿಯಲ್ಲಿ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications